ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

Date:

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಡೆಸಿದ ಅಧ್ಯಯನಗಳ ವರದಿಯು COVID-19 ಲಸಿಕೆ ಮತ್ತು ದೇಶದಲ್ಲಿನ ಹಠಾತ್ ಸಾವುಗಳಿಗೂ ಯಾವುದೇ ನೇರ ಸಂಬಂಧವಿಲ್ಲ ಎಂದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

- Advertisement -

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಕಳೆದ ಮೂರ್ನಾಲ್ಕು ವರ್ಷಗಳಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ ಕುರಿತು ದೇಶದ ಹಲವಾರು ಸಂಸ್ಥೆಗಳ ಮೂಲಕ ತನಿಖೆ ನಡೆಸಿದ್ದೇವೆ. ಈ ಅಧ್ಯಯನಗಳು COVID-19 ಲಸಿಕೆ ಮತ್ತು ದೇಶದಲ್ಲಿನ ಹಠಾತ್ ಸಾವುಗಳ ವರದಿಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂಬುದನ್ನು ನಿರ್ಣಯಿಸಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ICMR ಮತ್ತು NCDC ನಡೆಸಿದ ಅಧ್ಯಯನಗಳು ಭಾರತದಲ್ಲಿನ COVID-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸುತ್ತವೆ. ಲಸಿಕೆಗಳ ಗಂಭೀರ ಅಡ್ಡಪರಿಣಾಮಗಳಿಗೆ ಅತ್ಯಂತ ಕಡಿಮೆ ನಿದರ್ಶನಗಳಿವೆ. ಹಠಾತ್ ಹೃದಯಘಾತ ಸಾವುಗಳು ತಳಿಶಾಸ್ತ್ರ (ಜೆನೆಟಿಕ್), ಜೀವನಶೈಲಿ, ಮೊದಲೇ ಇದ್ದ ಅನಾರೋಗ್ಯ ಪರಿಸ್ಥಿತಿ ಹಾಗೂ ಕೊರೋನಾ ನಂತರದ ಸಮಸ್ಯೆಗಳು ಕಾರಣವಾಗಿರಬಹುದು ಅಧ್ಯಯನ ತಿಳಿಸಿದೆ” ಎಂದು ಸಚಿವಾಲಯ ಹೇಳಿದೆ.

“ಎರಡೂ ಸಂಸ್ಥೆಗಳು ಹಠಾತ್ ಸಾವುಗಳ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ಕೆಲಸ ಮಾಡುತ್ತಿವೆ. ವಿಶೇಷವಾಗಿ 18 ರಿಂದ 45 ವರ್ಷ ವಯಸ್ಸಿನ ಯುವ ವಯಸ್ಕರ ಸಾವಿನ ಬಗ್ಗೆ ಅಧ್ಯಕ್ಷಯ ನಡೆಸುತ್ತಿವೆ. ಅದಕ್ಕಾಗಿ, ವಿಭಿನ್ನ ಸಂಶೋಧನಾ ವಿಧಾನಗಳನ್ನು ಅಳವಡಿಸಿಕೊಂಡಿವೆ” ಎಂದು ತಿಳಿಸಿದೆ.

“ICMRನ ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆ (NIE) ನಡೆಸಿದ ಮೊದಲ ಅಧ್ಯಯನವು 2021ರ ಅಕ್ಟೋಬರ್‌ನಿಂದ 2023ರ ಮಾರ್ಚ್‌ವರೆಗೆ ನಡೆದಿದೆ. ಎರಡನೇ ಅಧ್ಯಯನವನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನಡೆಸಿದೆ. ಎರಡೂ ಅಧ್ಯಯನಗಳ ದತ್ತಾಂಶಗಳ ವಿಶ್ಲೇಷಣೆಯಲ್ಲಿ ಯುವಜನರು ಹೃದಯಾಘಾತ ಅಥವಾ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್‌ನಿಂದ (MI) ಹಠಾತ್ತನೆ ಸಾವನ್ನಪ್ಪುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ಸಾವುಗಳಿಗೆ ಜೀನೆಟಿಕ್ ಮ್ಯೂಟೇಶನ್ಸ್‌ ಸಂಭವನೀಯ ಕಾರಣವಾಗಿದೆ ಎಂಬುದನ್ನು ಸೂಚಿಸಿವೆ” ಎಂದು ಸಚಿವಾಲಯ ವಿವರಿಸಿದೆ.

“ಈ ಎರಡು ಅಧ್ಯಯನಗಳು, ಭಾರತದಲ್ಲಿನ ಯುವಜನರಲ್ಲಿ ಸಂಭವಿಸುತ್ತಿರುವ ಹಠಾತ್ ಸಾವುಗಳಲ್ಲಿ ಕೋವಿಡ್-19 ಲಸಿಕೆ ಪಾತ್ರವಿಲ್ಲ. ಲಸಿಕೆಯು ಯುವಜನರ ಸಾವುಗಳ ವಿಚಾರವಾಗಿ ಅಪಾಯವನ್ನು ಹೆಚ್ಚಿಸುವುದಿಲ್ಲ. ಆದರೆ ಆಧಾರವಾಗಿರುವ ಆರೋಗ್ಯ ಸಮಸ್ಯೆಗಳು, ಆನುವಂಶಿಕ ಪ್ರವೃತ್ತಿ ಹಾಗೂ ಅಪಾಯಕಾರಿ ಜೀವನಶೈಲಿಯ ಆಯ್ಕೆಗಳು ಈ ಸಾವುಗಳಲ್ಲಿ ಪಾತ್ರವಹಿಸುತ್ತವೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...