ಚುನಾವಣಾಧಿಕಾರಿಗಳ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

Date:

ಲೋಕಸಭಾ ಚುನಾವಣೆಗೆ ಕೆಲವು ತಿಂಗಳುಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಪುನಃ ಚುನಾವಣಾಧಿಕಾರಿಗಳ ನೇಮಕದ ಕಾನೂನಿಗೆ ತಡೆ ನೀಡಲು ನಿರಾಕರಿಸಿದ್ದು, ಈ ಹಂತದಲ್ಲಿ ಮುಂದುವರೆಸಲು ಹೋದರೆ ಅವ್ಯವಸ್ಥೆಗಳು ಸೃಷ್ಟಿಯಾಗುತ್ತದೆ ಎಂದು ತಿಳಿಸಿದೆ.

- Advertisement -

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ನೂತನ ಕಾನೂನಿನಡಿಯ ಸಮಿತಿಯ ಆಯ್ಕೆಯಲ್ಲಿನ ಬದಲಾವಣೆ ನಂತರ ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್‌ ಸಿಂಗ್‌ ಸಂಧು ಅವರನ್ನು ನೇಮಕಾತಿ ಮಾಡಿಕೊಂಡಿರುವುದರ ವಿರುದ್ಧ ಯಾವುದೇ ಆರೋಪಗಳು ಇಲ್ಲದಿರುವುದನ್ನು ಕೋರ್ಟ್ ಗಮನಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಚುನಾವಣಾ ಆಯೋಗವು ಕಾರ್ಯಾಂಗದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗದು” ಎಂದು ಸಂಜೀವ್‌ ಖನ್ನಾ ಹಾಗೂ ದೀಪಂಕರ್‌ ದತ್ತ ನೇತೃತ್ವದ ಪೀಠವು ಹೇಳಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಕೇಂದ್ರದ ತಪ್ಪಿನಿಂದ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ಊಹಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ವಾದವನ್ನು ಪೀಠವು ಗಮನಿಸಿತು.

“ಚುನಾವಣೆಗಳು ಹತ್ತಿರದಲ್ಲಿದ್ದು, ನೇಮಕಾತಿಯಾಗಿರುವವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಸಮತೋಲನ ಕಾಯ್ದುಕೊಳ್ಳುವುದು ತುಂಬ ಮುಖ್ಯವಾಗಿದೆ” ಎಂದು ನ್ಯಾಯಾಧೀಶರು ಹೇಳಿದರು.

ಮುಖ್ಯ ಚುನಾವಣಾ ಆಯುಕ್ತ ಹಾಗೂ ಇತರ ಚುನಾವಣಾ ಆಯುಕ್ತರ (ನೇಮಕ, ಸೇವೆ ಮತ್ತು ಅಧಿಕಾರವಧಿಯ ನಿಯಮಗಳು)ಮಸೂದೆ, 2023 ಅನ್ನು ಸಂಸತ್ತಿನಲ್ಲಿ ಅಂಗೀಕರಿಸಿ ತರುವಾಯು ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು.

ನೂತನ ಕಾನೂನಿನ ಅನ್ವಯ ನೂತನ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ಸರ್ವೋಚ್ಛ ನ್ಯಾಯಾಧೀಶರ ಬದಲಾಗಿ ಕೇಂದ್ರ ಸಚಿವರು ಇರುವುದನ್ನು ಮಾರ್ಪಡಿಸಲಾಯಿತು. ನೂತನ ಬದಲಾವಣೆಯಲ್ಲಿ ಸರ್ವೋಚ್ಛ ನ್ಯಾಯಾಧೀಶರನ್ನು ಕೈಬಿಟ್ಟಿರುವುದು ಪ್ರತಿಪಕ್ಷಗಳ ಕಳವಳಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...