ಮಧ್ಯಪ್ರದೇಶ | ಮನೆಗೆ ನುಗ್ಗಿ ಚಿನ್ನ, ಬೆಳ್ಳಿ ಜತೆ ಎಲ್‌ಪಿಜಿ ಸಿಲಿಂಡರ್ ಕಳವು!

Date:

ಬೀಗ ಹಾಕಿದ ಮನೆಗೆ ಕಳ್ಳನೊಬ್ಬ ನುಗ್ಗಿ ಚಿನ್ನ, ಬೆಳ್ಳಿ ಜತೆ ಎಲ್‌ಪಿಜಿ ಸಿಲಿಂಡರ್ ಕೂಡಾ ಕಳವು ಮಾಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.

- Advertisement -

ನೀತು ರಾಜಾವತ್ ಎಂಬವರು ಸೋಮವಾರ ತನ್ನ ತಾಯಿಯ ಮನೆಗೆ ಹೋಗಿದ್ದರು. ಮರುದಿನ ಮನೆಗೆ ಹಿಂದಿರುಗಿದಾಗ ಕಳವಾಗಿರುವುದು ಬೆಳಕಿಗೆ ಬಂದಿದೆ. ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳು, ನಗದು ಮತ್ತು ಹಲವು ದಾಖಲೆಗಳನ್ನು ದೋಚಲಾಗಿದೆ. ಅದರೊಂದಿಗೆ ಕಳ್ಳ ಎಲ್‌ಪಿಜಿ ಸಿಲಿಂಡರ್ ಕೂಡ ಕದ್ದೊಯ್ದಿದ್ದಾನೆ. ಸದ್ಯ ದೇಶದಲ್ಲಿ ಎಲ್‌ಪಿಜಿ ಕೊರತೆ ಆತಂಕ ಸೃಷ್ಟಿಯಾಗಿರುವ ನಡುವೆಯೇ ಈ ಕಳ್ಳತನ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಗದಗ | ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳ ಏರಿಕೆ: ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ವಿರೋಧ

ಸದ್ಯ ಕೊಟ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಸಿಸಿಟಿವಿ ದೃಶ್ಯಗಳನ್ನು ಬಳಸಿಕೊಂಡು ಶಂಕಿತರನ್ನು ಗುರುತಿಸಿದ್ದು, ಹುಡುಕಾಟ ಆರಂಭಿಸಿದ್ದಾರೆ. ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಹಲವು ದೇಶಗಳ ಮೇಲೆ ಪ್ರಭಾವ ಬೀರಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಅಡುಗೆ ಅನಿಲ ಆಮದು ಮಾಡಿಕೊಳ್ಳುವುದು ಕಷ್ಟವಾಗಿದ್ದು, ಭಾರತದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ಗಣನೀಯ ಕೊರತೆ ಉಂಟಾಗಿದೆ. ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಅನಿಲದ ಕೊರತೆಯಿಂದಾಗಿ ಮುಚ್ಚುವ ಹಂತಕ್ಕೆ ತಲುಪಿದೆ. ಇವೆಲ್ಲವೂ ಜನರಲ್ಲಿ ಆತಂಕ ಸೃಷ್ಟಿಸಿದ್ದು, ಅಡುಗೆ ಮಾಡಲು ಪರ್ಯಾಯ ವ್ಯವಸ್ಥೆಯತ್ತ ಜನರು ಮುಖ ಮಾಡಿದ್ದಾರೆ.

ಆದರೆ ಇವೆಲ್ಲವುದರ ನಡುವೆ ಹಲವೆಡೆ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಸಿಲಿಂಡರ್ ಮಾರಾಟವಾಗುತ್ತಿರುವುದು ಬೆಳಕಿಗೆ ಬಂದಿದೆ. ಇನ್ನು ಕೆಲವೆಡೆ ಎಲ್‌ಪಿಜಿ ಸಿಲಿಂಡರ್ ಕಳ್ಳತನವೂ ನಡೆದಿದೆ. ಬೆಂಗಳೂರಿನ ಕಲ್ಯಾಣ ನಗರದಂತಹ ವಸತಿ ಪ್ರದೇಶಗಳಲ್ಲಿಯೂ ಸಿಲಿಂಡರ್ ಕದಿಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೇರಳದ ತಿರುವನಂತಪುರಂನ ರೆಸ್ಟೋರೆಂಟ್‌ಗಳಿಂದಲೂ ಅಡುಗೆ ಅನಿಲದ ಸಿಲಿಂಡರ್‌ಗಳು ಕಳವಾಗಿವೆ.

ಇನ್ನು ಭೋಪಾಲ್‌ನ ಲಾಲ್‌ಘಾಟಿ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಪ್ರಕರಣವೊಂದರಲ್ಲಿ, ವಕೀಲರೊಬ್ಬರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಕಳ್ಳತನ ನಡೆದಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಮನೆಯ ಪಾರ್ಕಿಂಗ್ ಪ್ರದೇಶದಿಂದ ನಾಲ್ಕು ಖಾಲಿ ಸಿಲಿಂಡರ್‌ಗಳನ್ನು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಲವೆಡೆ ಪೂರೈಕೆ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವವರು ಎಲ್‌ಪಿಜಿ ಸಿಲಿಂಡರ್‌ಗೆ ಬಾಯಿಗೆ ಬಂದಂತೆ ದರ ಹೇಳಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲೇ ಹಲವೆಡೆ ಒಂದು ಸಿಲಿಂಡರ್‌ಗೆ 2,500-3,000 ರೂಪಾಯಿಯಷ್ಟು ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...