80,000 ರೂಪಾಯಿ ಲೂಟಿ ಮಾಡಿ ಪರಾರಿಯಾಗುವಾಗ 2 ಲಕ್ಷ ರೂ. ಮೌಲ್ಯದ ಬೈಕ್ ಕಳೆದುಕೊಂಡ ಕಳ್ಳರು!

Date:

ಕಳ್ಳರು ಲೂಟಿ ಮಾಡುವಾಗ ತಾವು ಗಳಿಸಿದ್ದಕ್ಕಿಂತ ಹೆಚ್ಚು ಕಳೆದುಕೊಂಡ ಘಟನೆ ಭೋಪಾಲ್‌ನ ಅಯೋಧ್ಯಾ ನಗರ ಪ್ರದೇಶದಲ್ಲಿ ನಡೆದಿದೆ. ಸುಮಾರು 80,000 ರೂಪಾಯಿ ಲೂಟಿ ಮಾಡಿ ಪರಾರಿಯಾಗುವಾಗ ಎರಡು ಲಕ್ಷ ರೂಪಾಯಿ ಮೌಲ್ಯದ ಬೈಕನ್ನು ಕಳೆದುಕೊಂಡಿದ್ದಾರೆ.

- Advertisement -

ಇತ್ತೀಚೆಗೆ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ನಸಿ ವ್ಯಾಪಾರಿ ನೀರಜ್ ಎಂಬವರು ಸಂಪಾದಿಸಿದ ಹಣದೊಂದಿಗೆ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬೈಕ್‌ ಬಂದ ಮೂವರು ವ್ಯಾಪಾರಿಯ ಬ್ಯಾಗ್ ಅನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬೆಳಗಾವಿಯಲ್ಲಿ ವೃದ್ಧೆಯ ಸರ ಕಳವು – ಕಳ್ಳರು ಪರಾರಿ

ಈ ವೇಳೆ ನೀರಜ್ ಬೈಕ್ ಪಲ್ಟಿಯಾಗಿದ್ದು, ನಗದು ಇದ್ದ ಬ್ಯಾಗ್ ಅವರ ಕೈಯಿಂದ ಜಾರಿದೆ. ಈ ವೇಳೆ ದಾಳಿಕೋರರು ಬ್ಯಾಗ್ ಕಸಿದುಕೊಂಡು ತಮ್ಮ ಬೈಕನ್ನು ಸ್ಟಾರ್ಟ್‌ ಮಾಡಲು ಯತ್ನಿಸುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಇದರಿಂದಾಗಿ ಭಯಭೀತರಾದ ಖದೀಮರು ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಮೂಲಕ ತಾವು ಗಳಿಸಿದ್ದಕ್ಕಿಂತ ಹೆಚ್ಚು ಮೊತ್ತವನ್ನು ಕಳ್ಳರು ಕಳೆದುಕೊಂಡಿದ್ದಾರೆ.

ನಂತರ ಪೊಲೀಸರು ಬೈಕನ್ನು ವಶಕ್ಕೆ ಪಡೆದುಕೊಂಡಿದ್ದು ಬೈಕ್‌ನ ಮೌಲ್ಯ ಎರಡು ಲಕ್ಷ ರೂಪಾಯಿ ಆಗಿದೆ. ಅದರ ನೋಂದಣಿ ಸಂಖ್ಯೆಯ ಮೂಲಕ ಗ್ಯಾಂಗ್ ಅನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ತನಿಖೆ ನಡೆಸಲಾಗುತ್ತಿದ್ದು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...