ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.
ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಬಾಂಬ್ ನಿಷ್ಕ್ರಿಯ ದಳಗಳು ಟರ್ಮಿನಲ್‌ಗಳನ್ನು ಪರಿಶೀಲಿಸುತ್ತಿವೆ ಎಂದು ತಿರುವನಂತಪುರಂ ವಿಮಾನ ನಿಲ್ದಾಣದ ಪಿಆರ್‌ಒ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಆರ್‌ಬಿಐ ಮುಖ್ಯ ಕಚೇರಿಗೆ ಬಾಂಬ್ ಬೆದರಿಕೆ
ಈ ಹಿಂದೆ ಹಲವು ಬಾರಿ ಶಾಲಾ-ಕಾಲೇಜು, ವಿಮಾನ, ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದೆ. ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಈ ಬಾಂಬ್ ಬೆದರಿಕೆ ಬಂದಿರುವ ಕಾರಣ ಹೆಚ್ಚು ಚರ್ಚೆಗೆ ಗ್ರಾಸವಾಗುತ್ತಿದೆ.
ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಭಯೋತ್ಪಾದಕರು ದಾಳಿ ನಡೆಸಿದ್ದು, ಸುಮಾರು 28 ಪ್ರವಾಸಿಗರು ಸಾವನ್ನಪ್ಪಿದ್ದಾರೆ.
