ಉತ್ತರ ಪ್ರದೇಶ | ಒಬ್ಬನೇ ವೈದ್ಯನ ಹೆಸರಿನಲ್ಲಿ 83 ಅಸ್ಪತ್ರೆಗಳ ನೋಂದಣಿ!

Date:

ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶ ರಾಜ್ಯದಲ್ಲಿ ವಿಚಿತ್ರ ಹಗರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿಗೆ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳ ಪರವಾನಗಿ ನವೀಕರಣ ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ ಬಯಲುಗೊಂಡ ಹಗರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿದೆ.

- Advertisement -

ಉತ್ತರ ಪ್ರದೇಶ ರಾಜ್ಯದ ಆಗ್ರಾ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ 449 ವೈದ್ಯಕೀಯ ಸಂಸ್ಥೆಗಳನ್ನು ಕೇವಲ 15 ವೈದ್ಯರು ಕಾನೂನುಬಾಹಿರವಾಗಿ ನಡೆಸುತ್ತಿದ್ದಾರೆ. ಅವರಲ್ಲಿ ಒಬ್ಬನೇ ವೈದ್ಯ ಮೀರತ್, ಕಾನ್ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಸುಮಾರು 83 ಆಸ್ಪತ್ರೆಗಳನ್ನು ತಮ್ಮ ಹೆಸರಿನಲ್ಲಿ ನೋಂದಾಯಿಸಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಗರಣಗಳಲ್ಲಿ ಭಾಗಿಯಾದ ವೈದ್ಯರ ಪಟ್ಟಿಯಲ್ಲಿ, ಹೃದ್ರೋಗ, ಮಕ್ಕಳ ತಜ್ಞರು ಮತ್ತು ಶಸ್ತ್ರಚಿಕಿತ್ಸಕರು ಸೇರಿದ್ದಾರೆ. ರಾಜ್ಯ ಆರೋಗ್ಯ ಇಲಾಖೆಯ ದಾಖಲೆಗಳ ಪ್ರಕಾರ, 2022-2023ರಲ್ಲಿ 1,269 ವೈದ್ಯಕೀಯ ಕೇಂದ್ರಗಳನ್ನು ನೋಂದಾಯಿಸಲಾಗಿದೆ. ಇವುಗಳಲ್ಲಿ 494 ಆಸ್ಪತ್ರೆಗಳು, 493 ಕ್ಲಿನಿಕ್‌ಗಳು, 170 ಪೆಥಾಲಜಿ ಲ್ಯಾಬ್‌ಗಳು, 104 ಡಯಾಗ್ನೋಸ್ಟಿಕ್ ಸೆಂಟರ್‌ಗಳು, ಏಳು ಮಾದರಿ ಸಂಗ್ರಹ ಕೇಂದ್ರಗಳು ಮತ್ತು ಒಂದು ಡಯಾಲಿಸಿಸ್ ಕೇಂದ್ರ ಸೇರಿವೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಬಿಜೆಪಿ ಔರಂಗಜೇಬ್‌ನನ್ನು ಗೋರಿಯಿಂದ ಎಬ್ಬಿಸಿದ್ದೇಕೆ?

ಇನ್ನೂ ಪ್ರಮುಖ ಸಂಗತಿ ಏನಂದರೆ, ಅರ್ಹತೆ ಇಲ್ಲದವರು ಆಸ್ಪತ್ರೆಗಳು, ಕ್ಲಿನಿಕ್‌ಗಳು ಮತ್ತು ಪೆಥಾಲಜಿ ಲ್ಯಾಬ್‌ಗಳನ್ನು ನಿರ್ವಹಿಸಲು ಆರೋಗ್ಯ ಇಲಾಖೆಯಿಂದ ವೈದ್ಯರ ಹೆಸರಿನಲ್ಲಿ ಪರವಾನಗಿ ಪಡೆದು ಜನರನ್ನು ವಂಚಿಸುತ್ತಿದ್ದಾರೆ. ಈ ವರ್ಷ ರಾಜ್ಯ ಸರ್ಕಾರವು ಪರವಾನಗಿ ನವೀಕರಣ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಮಾಡಬೇಕೆಂದು ಆದೇಶಿಸಿದ ನಂತರ ಇವೆಲ್ಲ ಹಗರಣ ಬಹಿರಂಗವಾಗಿವೆ.

ಪರವಾನಗಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳು ತರಬೇತಿ ಪಡೆದ ಅರೆವೈದ್ಯಕೀಯ ಸಿಬ್ಬಂದಿ, ಅಗ್ನಿ ಸುರಕ್ಷತಾ ಮಾನದಂಡಗಳ ಅನುಸರಣೆ ಮತ್ತು ವೈದ್ಯಕೀಯ ತ್ಯಾಜ್ಯದ ವಿಲೇವಾರಿಗೆ ಸಂಬಂಧಿಸಿದ ಅಗತ್ಯ ವಿವರಗಳನ್ನು ಒದಗಿಸಿಲ್ಲ. ಹಾಗೆಯೇ ಹಾಸಿಗೆ ಸಾಮರ್ಥ್ಯ ಮತ್ತು ಇತರ ಸೌಲಭ್ಯಗಳ ಬಗ್ಗೆಯೂ ನೀಡಿರುವ ಮಾಹಿತಿಯು ಅನುಮಾನ ಮೂಡಿಸಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಸದ್ಯ ಹಗರಣಗಳಲ್ಲಿ ಭಾಗಿಯಾದ ವೈದ್ಯರಿಗೆ ನೋಟಿಸ್ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...