ಒಡಿಶಾ ರೈಲು ದುರಂತಕ್ಕೆ ಟಿಎಂಸಿ ಪಿತೂರಿ: ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಆರೋಪ

Date:

ಒಡಿಶಾದ ಬಾಲೇಶ್ವರದಲ್ಲಿ ಸಂಭವಿಸಿದ ರೈಲು ದುರಂತದ ಹಿಂದೆ ತೃಣಮೂಲ ಕಾಂಗ್ರೆಸಿನ ಪಿತೂರಿ ಇದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಎಂಸಿ ನಾಯಕರು ಪೊಲೀಸರ ನೆರವಿನೊಂದಿಗೆ ರೈಲ್ವೆ ಅಧಿಕಾರಿಗಳಿಬ್ಬರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಇಬ್ಬರು ರೈಲ್ವೆ ಅಧಿಕಾರಿಗಳ ನಡುವಿನ ಸಂಭಾಷಣೆ ಇವರಿಗೆ ಹೇಗೆ ಗೊತ್ತಾಯಿತು? ಸಂಭಾಷಣೆ ಹೇಗೆ ಸೋರಿಕೆಯಾಯಿತು ಎಂಬುದು ಸಿಬಿಐ ತನಿಖೆಯಿಂದ ಹೊರಬರಬೇಕಿದೆ. ಸತ್ಯಾಂಶ ತಿಳಿಯದಿದ್ದರೆ ನ್ಯಾಯಾಲಯದ ಮೊರೆಹೋಗುತ್ತೇನೆ’ ಎಂದು ತಿಳಿಸಿದ್ದಾರೆ.

“ಘಟನೆ ಒಡಿಶಾದಲ್ಲಿ ಸಂಭವಿಸಿದ್ದರೂ ಮಮತಾ ಬ್ಯಾನರ್ಜಿ ನಿನ್ನೆಯಿಂದ ಏಕೆ ಗಾಬರಿಗೊಂಡಿದ್ದಾರೆ. ಸಿಬಿಐ ತನಿಖೆಗೆ ಅವರೇಕೆ ಹೆದರುತ್ತಾರೆ” ಎಂದು ಸುವಿಂದು ಅಧಿಕಾರಿ ಪ್ರಶ್ನಿಸಿದ್ದಾರೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತನಿಖೆ ಆರಂಭಿಸಿದ ಸಿಬಿಐ

ಬಾಲೇಶ್ವರದಲ್ಲಿ ಸಂಭವಿಸಿದ ರೈಲು ದುರಂತ ಕುರಿತಂತೆ ಸಿಬಿಐ ಸೋಮವಾರದಿಂದ ತನಿಖೆ ಆರಂಭಿಸಿದೆ. ಕೇಂದ್ರೀಯ ತನಿಖಾ ದಳದ 10 ಸದಸ್ಯರ ತಂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

‘ಸಿಬಿಐ ತಂಡ ತನಿಖೆ ಆರಂಭಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರೈಲ್ವೆ ಮಂಡಳಿಯು ಭಾನುವಾರ ಅಪಘಾತದ ತನಿಖೆಯ ಹೊಣೆಯನ್ನು ಸಿಬಿಐಗೆ ಒಪ್ಪಿಸಿತ್ತು ಎಂದು ಖುರ್ದಾ ರೋಡ್ ವಿಭಾಗದ ಡಿಆರ್‌ಎಂ ರಿಂತೇಶ್ ರೇ ಅವರು ತಿಳಿಸಿದ್ದಾರೆ.

“ಮೃತರ ಪೈಕಿ 177 ಜನರ ಗುರುತು ಪತ್ತೆಯಾಗಿದ್ದು, ಇನ್ನೂ 101 ಜನರ ಗುರುತು ಪತ್ತೆಯಾಗಬೇಕಿದೆ. ಶವಗಳನ್ನು ವಿವಿಧ ಆರು ಆಸ್ಪತ್ರೆಗಳಲ್ಲಿ ವೈಜ್ಞಾನಿಕ ಕ್ರಮದಲ್ಲಿ ರಕ್ಷಿಸಿಡಲಾಗಿದೆ ಎಂದು ತಿಳಿಸಿದ್ದಾರೆ. ನಾಪತ್ತೆಯಾದವರ ವಿವರ ಸಂಗ್ರಹಿಸಲು ರೈಲ್ವೆ ಇಲಾಖೆಯು ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸಗಢ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿಗೆ ಸಿಬ್ಬಂದಿಯನ್ನು ಕಳುಹಿಸಿದೆ” ಎಂದು ರಿಂತೇಶ್ ರೇ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...