‘ಇದು ಗೂಂಡಾಗಿರಿ’: ಸಿಜೆಪಿ ಕಾರ್ಯಕರ್ತನ ಬಂಧನಕ್ಕೆ ಉತ್ತರಾಖಂಡ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Date:

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಉತ್ತರಾಖಂಡ ಪರಿವರ್ತನಾ ಪಕ್ಷದ ಮುಖ್ಯಸ್ಥ ಪ್ರಭಾತ್ ಧ್ಯಾನಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಉತ್ತರಾಖಂಡ ಹೈಕೋರ್ಟ್ ಮಂಗಳವಾರ (ಜುಲೈ 21) ತೀವ್ರವಾಗಿ ಖಂಡಿಸಿದೆ. ಸರ್ಕಾರದ ಈ ನಡೆಯನ್ನು ‘ಗೂಂಡಾಗಿರಿ’ ಎಂದು ಜರಿದಿರುವ ನ್ಯಾಯಾಲಯ, ಯಾವ ಕಾನೂನಿನ ಆಧಾರದ ಮೇಲೆ ಅವರನ್ನು ತಡೆಯಲಾಯಿತು ಎಂದು ಪ್ರಶ್ನಿಸಿದೆ.

- Advertisement -

ಪ್ರಭಾತ್ ಧ್ಯಾನಿ ಅವರ ಬಂಧನವನ್ನು ಪ್ರಶ್ನಿಸಿ ಅವರ ಬೆಂಬಲಿಗರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ರವೀಂದ್ರ ಮೈಥಾನಿ ಮತ್ತು ಸಿದ್ದಾರ್ಥ್ ಶಾ ಅವರಿದ್ದ ವಿಭಾಗೀಯ ಪೀಠ ನಡೆಸಿತು. ದೆಹಲಿಯ ಜಂತರ್ ಮಂತರ್‌ನಲ್ಲಿ ಸೋನಂ ವಾಂಗ್‌ಚುಕ್ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಹಾಗೂ ಸಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ ಧ್ಯಾನಿ ಅವರನ್ನು ಜುಲೈ 19ರಂದು ಹೃಷಿಕೇಶ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, “ರಾಷ್ಟ್ರ ರಾಜಧಾನಿಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ಅಡಿ ನಿಷೇಧಾಜ್ಞೆ ಜಾರಿಯಲ್ಲಿದೆ. ದೆಹಲಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸುವುದು ಅಪರಾಧವಾಗುತ್ತದೆ ಹಾಗೂ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಕಾನೂನುಬದ್ಧ ನಿರ್ದೇಶನಗಳನ್ನು ಪಾಲಿಸುವುದು ನಾಗರಿಕರ ಕರ್ತವ್ಯ” ಎಂದು ಸಮರ್ಥಿಸಿಕೊಂಡರು.

ಆದರೆ ಸರ್ಕಾರದ ಈ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, “ಕಾರ್ಯಕರ್ತ ಯಾವ ಕಾನೂನುಬದ್ಧ ನಿರ್ದೇಶನವನ್ನು ಉಲ್ಲಂಘಿಸಿದ್ದಾರೆ? ದೇಶದ ಯಾವುದೇ ಮೂಲೆಗೆ ಹೋಗುವ ಹಕ್ಕು ಆತನಿಗಿದೆ. ಅವರನ್ನು ತಡೆಯಲು ನೀವ್ಯಾರು?” ಎಂದು ಕಟುವಾಗಿ ಪ್ರಶ್ನಿಸಿತು. ಅಲ್ಲದೆ, ದೆಹಲಿಯಲ್ಲಿ ನಿಷೇಧಾಜ್ಞೆ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳುವುದು ದೆಹಲಿ ಪೊಲೀಸರ ವ್ಯಾಪ್ತಿಗೆ ಬರುತ್ತದೆಯೇ ಹೊರತು ಉತ್ತರಾಖಂಡ ಪೊಲೀಸರ ವ್ಯಾಪ್ತಿಗಲ್ಲ ಎಂದು ಸ್ಪಷ್ಟಪಡಿಸಿತು.

“ಇದು ಗೂಂಡಾಗಿರಿ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಮೈಥಾನಿ, ಧ್ಯಾನಿ ಅವರನ್ನು ವಶಕ್ಕೆ ಪಡೆದ ಪೊಲೀಸ್ ಅಧಿಕಾರಿಯು ಮುಂದಿನ ವಿಚಾರಣೆಯೊಳಗೆ (ನಾಲ್ಕು ವಾರಗಳ ನಂತರ) ಲಿಖಿತ ಪ್ರತಿಕ್ರಿಯೆ ಸಲ್ಲಿಸುವಂತೆ ಆದೇಶ ನೀಡಿದರು. ಧ್ಯಾನಿ ಅವರನ್ನು ರಾಮನಗರ ಪೊಲೀಸ್ ಠಾಣೆಯಲ್ಲಿ 24 ಗಂಟೆಗಳ ಕಾಲ ವಶದಲ್ಲಿಟ್ಟುಕೊಂಡು ನಂತರ ಬಿಡುಗಡೆ ಮಾಡಲಾಗಿತ್ತು. ಧ್ಯಾನಿ ಅವರ ಪರವಾಗಿ ವಕೀಲೆ ಸ್ನಿಗ್ಧಾ ತಿವಾರಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು...

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು...

ಕುವೆಂಪು ವಿವಿ ಸಂಶೋಧನಾ ವಿದ್ಯಾರ್ಥಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ!

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಎಲ್ಸೆವಿಯರ್ ಸಹಯೋಗದಲ್ಲಿ ಪ್ರಕಟಿಸಿರುವ ಜಾಗತಿಕ ವೈಜ್ಞಾನಿಕ ಶ್ರೇಯಾಂಕದಲ್ಲಿ,...

​’ರಾಜತಾಂತ್ರಿಕ ಒಪ್ಪಂದಕ್ಕೆ ಬಾರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ’: ಡೊನಾಲ್ಡ್ ಟ್ರಂಪ್

ಟೆಹ್ರಾನ್ ರಾಜತಾಂತ್ರಿಕ ಒಪ್ಪಂದಕ್ಕೆ ಬರಲು ವಿಫಲವಾದರೆ ಇರಾನ್ ಮೇಲೆ ಮತ್ತೊಂದು ಸೇನಾ...