ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ: ‘ಈಗ ಬಂಧನವೇ ಬದುಕು’ಎಂದ ಉಮರ್ ಖಾಲಿದ್

Date:

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಆದರೆ ಇತರೆ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ತಮ್ಮ ಸಹ-ಆರೋಪಿಗಳಿಗೆ ಜಾಮೀನು ನೀಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಉಮರ್, “ಈಗ ನನ್ನದು ಇದೇ ಜೀವನ” ಎಂದು ಹೇಳಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಬನೋಜ್ಯೋತ್ಸ್ನಾ ಪೋಸ್ಟ್ ಮಾಡಿದ್ದು, ಸುಪ್ರೀಂ ಕೋರ್ಟ್ ಆದೇಶ ಪ್ರಕಟವಾದ ಬಳಿಕ ತಾನು ಮತ್ತು ಉಮರ್ ನಡುವೆ ನಡೆದ ಮಾತುಕತೆಯನ್ನು ಬರೆದುಕೊಂಡಿದ್ದಾರೆ. “ಇತರರಿಗೆ ಜಾಮೀನು ಸಿಕ್ಕಿದ್ದಕ್ಕೆ ನನಗೆ ನಿಜವಾಗಿಯೂ ಸಂತೋಷವಾಗಿದೆ! ತುಂಬಾ ನಿರಾಳವಾಗಿದೆ” ಎಂದು ಉಮರ್ ಹೇಳಿರುವುದಾಗಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಕಾರ: ಸುಪ್ರೀಂ ಕೋರ್ಟ್ ವಕೀಲರ ತಕರಾರು

ಇನ್ನು ಮರುದಿನ ಜೈಲಿನಲ್ಲಿ ಭೇಟಿಯಾಗಲು ಬರುವುದಾಗಿ ಉಮರ್ ಅವರಿಗೆ ತಿಳಿಸಿದಾಗ, ಉಮರ್, “ಒಳ್ಳೆಯದು ಬನ್ನಿ. ಈಗ ಇದುವೇ ಜೀವನ” ಎಂದು ಉತ್ತರಿಸಿರುವುದಾಗಿ ಬರೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಿಲ್ಲ. ಪ್ರಕರಣದ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ವಿಚಾರಣೆಯಿಲ್ಲದೆಯೇ ಐದು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ. “ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೇ ಹೆಚ್ಚು ಮುಖ್ಯವಾದುದು. ಇತರ ಆರೋಪಿಗಳಿಗೆ ಹೋಲಿಸಿದರೆ ಇವರಿಬ್ಬರ ಪಾತ್ರ ಭಿನ್ನವಾದುದ್ದು” ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...