ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

Date:

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಕಾರ್ಯಾಚರಣೆಯ ವಿರುದ್ಧ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಯೋಗ ನಡೆಸುತ್ತಿರುವುದು ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ‘ವಿಶೇಷ ಡಿಲಿಟೇಷನ್’ ಹಾಗೂ ಅನರ್ಹ ಮತದಾರರ ಹೆಸರನ್ನು ಸೇರಿಸುವ ‘ವಿಶೇಷ ಅಡಿಷನ್’ ಕೆಲಸ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಎಸ್‌ಐಆರ್ ನಿಗದಿಪಡಿಸಿದ ವಿವರಗಳಲ್ಲಿ ವ್ಯತ್ಯಾಸವಿದೆ ಎಂಬ ಕಾರಣಕ್ಕೆ ಕಪಿಲ್ ಸಿಬಲ್ ಹಾಗೂ ಅವರ ಪತ್ನಿಗೆ ಆಯೋಗದಿಂದ ನೋಟಿಸ್ ಜಾರಿಯಾದ ಬೆನ್ನಲ್ಲೇ ಅವರು ಮಾಧ್ಯಮಗೋಷ್ಟಿ ನಡೆಸಿ ಈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಚುನಾವಣಾ ಆಯೋಗ ಯಾವಾಗಲೂ ಮೋದಿ ಸರ್ಕಾರದ ‘ಕೈಗೊಂಬೆ’ಯಾಗಿದೆ: ಕಪಿಲ್ ಸಿಬಲ್

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಬಲ್, “ನನ್ನ ಹೆಸರು ಕರಡು ಮತದಾರರ ಪಟ್ಟಿಯಲ್ಲಿದ್ದರೂ ನನಗೆ ನೋಟಿಸ್ ಕಳುಹಿಸಲಾಗಿದೆ. ಪ್ರಸ್ತುತ ಪಟ್ಟಿಯಲ್ಲಿರುವ ಹೆಸರು ಮತ್ತು ಹಿಂದಿನ SIR ಆವೃತ್ತಿಯಲ್ಲಿದ್ದ ಹೆಸರುಗಳಲ್ಲಿ ವ್ಯತ್ಯಾಸವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ. ಸಾರ್ವಜನಿಕ ರಂಗದಲ್ಲಿರುವ ನಮ್ಮಂತಹ ವ್ಯಕ್ತಿಗಳಿಗೇ ಈ ಪರಿಸ್ಥಿತಿ ಬಂದೊದಗಿದರೆ, ಯಾವುದೇ ಹಿನ್ನೆಲೆಯಿಲ್ಲದ ಸಾಮಾನ್ಯ ನಾಗರಿಕರ ಕಥೆಯೇನು? ಅವರು ಇದನ್ನು ಹೇಗೆ ಎದುರಿಸಲು ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಚುನಾವಣಾ ಆಯೋಗದ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸಿದ ಅವರು, “ಕೇವಲ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಲ್ಲಿ ಮುಂದುವರಿಸುವುದೇ ಚುನಾವಣಾ ಆಯೋಗದ ಉದ್ದೇಶವಾಗಿದ್ದರೆ, ದೇಶದಲ್ಲಿ ಚುನಾವಣೆಗಳನ್ನು ನಡೆಸುವ ಅಗತ್ಯವೇನಿದೆ?” ಎಂದು ಕಿಡಿಕಾರಿದ್ದಾರೆ. ಭವಿಷ್ಯದ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿರುಚುವ ಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಸ್ತುತ ದೆಹಲಿ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ಹಲವು ಪ್ರಮುಖ ವ್ಯಕ್ತಿಗಳು ಮತ್ತು ನಾಗರಿಕರಿಗೆ ವಿಳಾಸ ಅಥವಾ ತಂದೆಯ ಹೆಸರಿನ ವಿವರಗಳಲ್ಲಿ ವ್ಯತ್ಯಾಸವಿದೆಯೆಂದು ನೋಟಿಸ್‌ಗಳನ್ನು ನೀಡಲಾಗುತ್ತಿದ್ದು, ಇದು ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...