‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

Date:

ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ ಮಲ್ಯ ಭಾರತಕ್ಕೆ ಬರದಿದ್ದರೆ, ಅವರು ಸಲ್ಲಿಸಿರುವ ಯಾವುದೇ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವುದಿಲ್ಲ ಎಂದು ನ್ಯಾಯಪೀಠವು ಎಚ್ಚರಿಕೆ ನೀಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಗೌತಮ್ ಅನ್ಖಾಡ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

“ನೀವು ನ್ಯಾಯಾಲಯದ ಪ್ರಕ್ರಿಯೆಯನ್ನು ತಪ್ಪಿಸುತ್ತಿದ್ದೀರಿ. ಹೀಗಿರುವಾಗ ಕಾನೂನಿನ ಅಡಿಯಲ್ಲಿ ಯಾವುದೇ ರಿಯಾಯಿತಿ ಅಥವಾ ಪರಿಹಾರವನ್ನು ಪಡೆಯಲು ನಿಮಗೆ ಅರ್ಹತೆಯಿಲ್ಲ. ನೀವು ಮೊದಲು ಭಾರತಕ್ಕೆ ಮರಳಿ ನ್ಯಾಯಾಲಯಕ್ಕೆ ಶರಣಾಗಬೇಕು ಎಂದು ಪೀಠವು ಮಲ್ಯ ಪರ ವಕೀಲರಿಗೆ ಸ್ಪಷ್ಟಪಡಿಸಿತು.ತಾವು ಯಾವಾಗ ಭಾರತಕ್ಕೆ ಮರಳುತ್ತೇವೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಮಲ್ಯ ಪಾಲಿಸಿಲ್ಲದಿರುವುದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಂದೇ ಮಾತರಂ ಕಡ್ಡಾಯದ ಹಿಂದಿರುವುದು ದೇಶಭಕ್ತಿಯಲ್ಲ, ಪಶ್ಚಿಮ ಬಂಗಾಳ ಗೆಲ್ಲುವುದು!

ವಿಜಯ್ ಮಲ್ಯ ಅವರು ಕೇಂದ್ರ ಸರ್ಕಾರದ ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಜಾರಿ ನಿರ್ದೇಶನಾಲಯದ (ED) ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಮಲ್ಯ ಅವರು ಭಾರತದ ಕಾನೂನನ್ನು ನಂಬುತ್ತಿಲ್ಲ, ಆದರೆ ಅದೇ ಕಾನೂನಿನ ಅಡಿಯಲ್ಲಿ ಪರಿಹಾರ ಕೇಳುತ್ತಿದ್ದಾರೆ. ಇದು ದ್ವಂದ್ವ ನೀತಿ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ನ್ಯಾಯೋಚಿತವಾಗಿ ನಾವು ನಿಮ್ಮ ಅರ್ಜಿಯನ್ನು ಈಗಲೇ ವಜಾ ಮಾಡುತ್ತಿಲ್ಲ. ಬದಲಿಗೆ ಒಂದು ಕೊನೆಯ ಅವಕಾಶ ನೀಡುತ್ತಿದ್ದೇವೆ. ಮುಂದಿನ ವಾರದೊಳಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಕೋರ್ಟ್ ಹೇಳಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...