‘ಇದು ಇಲ್ಲಿಗೆ ಮುಗಿಯುವುದಿಲ್ಲ’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹದ ಬಗ್ಗೆ ದೀಪ್ಕೆ

Date:

ಸಾಮಾಜಿಕ ಮಾಧ್ಯಮಗಳ ಮೂಲಕ ರೂಪುಗೊಂಡಿರುವ ಯುವಜನರ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ದೆಹಲಿಯಲ್ಲಿ ತನ್ನ ಮೊದಲ ಪ್ರತಿಭಟನೆ ನಡೆಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ/ವಜಾಕ್ಕೆ 7 ದಿನಗಳ ಗಡುವು ನೀಡಿದೆ.

- Advertisement -

ಪ್ರತಿಭಟನೆಗಾಗಿ ಜಂತರ್ ಮಂತರ್‌ನಲ್ಲಿ ನೆರೆದಿದ್ದ ಸಾವಿರಾರು ಯುವಜನರಿಗೆ ಧನ್ಯವಾದ ತಿಳಿಸಿ ಪೋಸ್ಟ್‌ ಹಂಚಿಕೊಂಡಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, “ಇದು ಇಲ್ಲಿಗೆ ಮುಗಿಯುವುದಿಲ್ಲ. ಸಚಿವರು ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಿರಂತರ ಪ್ರತಿಭಟನೆಗಳು ನಡೆಯಲಿವೆ” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪ್ರತಿಭಟನೆ ಆರಂಭವಾಗಲು ಕೆಲವೇ ನಿಮಿಷಗಳ ಮೊದಲು ಭಾರತಕ್ಕೆ ಬಂದಳಿದ ದಿಪ್ಕೆ, “ನಿನ್ನೆ ನಮ್ಮಲ್ಲಿ ಸಾವಿರಾರು ಜನರು ಇತಿಹಾಸ ಸೃಷ್ಟಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ನಮ್ಮ ಶಾಂತಿಯುತ ಪ್ರತಿಭಟನೆಯು, ನಾವೆಲ್ಲರೂ ಒಂದಾದಾಗ ಏನು ಮಾಡಬಹುದು ಎಂಬುದರ ಟ್ರೇಲರ್ ಅನ್ನು ಸರ್ಕಾರಕ್ಕೆ ತೋರಿಸಿದೆ” ಎಂದು ಬರೆದುಕೊಂಡಿದ್ದಾರೆ.

“ನಿನ್ನೆ ನಮ್ಮೊಂದಿಗೆ ಸೇರಿದ ಹೆಚ್ಚಿನ ಜನರು ಇದಕ್ಕಿಂತ ಮುಂಚೆ ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸಿದವರಲ್ಲ. ಆದರೆ, ಶಿಕ್ಷಣ ವ್ಯವಸ್ಥೆಯ ಮೇಲಿನ ತಮ್ಮ ಸಂಪೂರ್ಣ ಕೋಪ ಮತ್ತು ಹತಾಶೆಯನ್ನು ವ್ಯಕ್ತಪಡಿಸಲು ನಮ್ಮ ಸಾಮೂಹಿಕ ಉಪಸ್ಥಿತಿಯು ಅವರಿಗೆ ಧೈರ್ಯ ತುಂಬಿದೆ. ನಮ್ಮ ಧ್ವನಿಯನ್ನು ನಾವು ಬಲವಾಗಿ ತಲುಪಿಸದ ಹೊರತು ಬದಲಾವಣೆ ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಕಡು ಬಿಸಿಲನ್ನು ಲೆಕ್ಕಿಸದೆ ಶಾಂತಿಯುತ ಪ್ರತಿಭಟನೆಯೇ ನಮ್ಮ ದೊಡ್ಡ ಶಕ್ತಿ ಎಂದು ಸಾಬೀತುಪಡಿಸಿದ ಸಣ್ಣ ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಧನ್ಯವಾದಗಳು. ಒಗ್ಗಟ್ಟಿನಿಂದ ಇರುವ ಶಾಂತಿಯುತ ಚಳುವಳಿಯನ್ನು ಸರ್ಕಾರ ಮುಟ್ಟಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಆದರೆ, ಇದು ಇಲ್ಲಿಗೆ ಮುಗಿಯುವುದಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ಇಡೀ ತಲೆಮಾರಿಗೆ ಅನ್ಯಾಯ ಮಾಡಿದ್ದಾರೆ. ಮುಂದಿನ 7 ದಿನಗಳಲ್ಲಿ ಅವರು ಅಧಿಕಾರದಿಂದ ಕೆಳಗಿಳಿಯದಿದ್ದರೆ ಅಥವಾ ಅವರನ್ನು ತೆಗೆದುಹಾಕದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ” ಎಂದು ದೀಪ್ಕೆ ಎಚ್ಚರಿಸಿದ್ದಾರೆ.

ಇತ್ತೀಚಿನ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಯಲ್ಲಿ ಬಳಸಲಾದ ಆನ್-ಸ್ಕ್ರೀನ್ ಮಾರ್ಕಿಂಗ್ ವ್ಯವಸ್ಥೆಯ ಗೊಂದಲಗಳೂ ಸೇರಿದಂತೆ ಸರಣಿ ವಿವಾದಗಳಿಂದಾಗಿ ಸಚಿವ ಪ್ರಧಾನ್ ಅವರು ತೀವ್ರ ಟೀಕೆಗೆ ಒಳಗಾಗಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಹಳೆಯ ಔರಂಗಾಬಾದ್) ನಿವಾಸಿಯಾದ ದೀಪ್ಕೆ, ಧರ್ಮೇಂದ್ರ ಪ್ರಧಾನ್ ಅವರು ಸ್ವತಃ ರಾಜೀನಾಮೆ ನೀಡುವವರೆಗೆ ಅಥವಾ ಪ್ರಧಾನಿ ನರೇಂದ್ರ ಮೋದಿ ಅವರು ಅವರನ್ನು ವಜಾಗೊಳಿಸುವವರೆಗೆ ಬಹುಶಃ ವಾರಕ್ಕೊಮ್ಮೆ ಇಂತಹ ಪ್ರತಿಭಟನೆಗಳನ್ನು ನಡೆಸಲು ಯೋಜಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...