ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕಾರನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಗುರುವಾರ ಮುಂಬೈ ಪೊಲೀಸರಿಗೆ ಕರೆ ಮತ್ತು ಇಮೇಲ್ ಮೂಲಕ ಅಪರಿಚಿತ ವ್ಯಕ್ತಿಗಳು ಶಿಂದೆ ಕಾರು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಗೋರೆಗಾಂವ್, ಜೆಜೆ ಮಾರ್ಗ ಪೊಲೀಸ್ ಠಾಣೆಗಳಿಗೆ ಈ ಬೆದರಿಕೆ ಕರೆಗಳು ಬಂದಿವೆ. ಮಂತ್ರಾಲಯದಲ್ಲಿ ಕಂಟ್ರೋಲ್ ರೂಮ್, ರಾಜ್ಯ ಸರ್ಕಾರದ ಮುಖ್ಯಕಚೇರಿಗೆ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ದರ್ಗಾದ ಉರುಸ್‌ನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಹಿಂದುತ್ವವಾದಿಗಳು
ಕರೆ ಮಾಡಿದ ಅಪರಿಚಿತ ವ್ಯಕ್ತಿಯು ಶಿಂದೆ ಕಾರನ್ನು ಸ್ಪೋಟಿಸುವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಹುಸಿ ಬೆದರಿಕೆಯಾಗಿದೆ ಎಂದು ಪೊಲೀಸರು ನಂಬಿದ್ದಾರೆ.
ಬೆದರಿಕೆ ಕರೆ, ಇಮೇಲ್ ಬಂದ ಬಳಿಕ ಶಿಂದೆ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಾಗೆಯೇ ಜನರು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ.
