ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವಕ್ಕೆ ಸಂಚಕಾರ: ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್‌ ಗಂಭೀರ ಆಕ್ಷೇಪ

Date:

ಚುನಾವಣಾ ಕಣ ಕಾವೇರಿರುವ ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸುತ್ತಿದ್ದ ದಾಳಿಯ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಸ್ತಕ್ಷೇಪ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ರಾಜ್ಯದ ಇಂದಿನ ಸಾಮಾಜಿಕ-ರಾಜಕೀಯ ಪರಿಸ್ಥಿತಿಯನ್ನು “ಅಸಾಧಾರಣ ಪರಿಸ್ಥಿತಿ” ಎಂದು ಬಣ್ಣಿಸಿರುವ ನ್ಯಾಯಾಲಯ, ಮುಖ್ಯಮಂತ್ರಿಯವರ ನಡವಳಿಕೆಯು ಪ್ರಜಾಪ್ರಭುತ್ವವನ್ನೇ ಅಪಾಯಕ್ಕೆ ತಳ್ಳಿದೆ ಎಂದು ಆತಂಕ ವ್ಯಕ್ತಪಡಿಸಿದೆ.

- Advertisement -

ಟಿಎಂಸಿ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿರುವ ಐ-ಪ್ಯಾಕ್ (I-PAC) ಸಂಸ್ಥೆಯ ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಕೋಲ್ಕತ್ತಾ ಮತ್ತು ದೆಹಲಿಯ ಹಲವು ಕಡೆಗಳಲ್ಲಿ ದಾಳಿ ನಡೆಸುತ್ತಿದ್ದರು. ಐ-ಪ್ಯಾಕ್ ಸಹಸಂಸ್ಥಾಪಕ ಪ್ರತೀಕ್ ಜೈನ್ ಅವರ ನಿವಾಸದಲ್ಲಿ ತಪಾಸಣೆ ನಡೆಯುತ್ತಿದ್ದಾಗ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಆಗಮಿಸಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದ್ದರು ಎಂಬ ಆರೋಪವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನ್ಯಾಯಮೂರ್ತಿಗಳಾದ ಪಿ ಕೆ ಮಿಶ್ರಾ ಮತ್ತು ಎನ್ ವಿ ಅಂಜಾರಿಯಾ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಾ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

“ತನಿಖಾ ಸಂಸ್ಥೆಯು ದಾಳಿ ನಡೆಸುತ್ತಿರುವಾಗ ಹಾಲಿ ಮುಖ್ಯಮಂತ್ರಿಯೊಬ್ಬರು ನೇರವಾಗಿ ಒಳಗೆ ನಡೆದು ಹೋಗುವ ದಿನ ಈ ದೇಶದಲ್ಲಿ ಬರುತ್ತದೆ ಎಂದು ನಾವು ಎಂದೂ ಭಾವಿಸಿರಲಿಲ್ಲ. ಮಮತಾ ಬ್ಯಾನರ್ಜಿ ಅವರು ವೈಯಕ್ತಿಕವಾಗಿ ಮಾಡಿದ ಈ ಕೃತ್ಯವು ಇಡೀ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಿದೆ. ನೀವು ಕಾನೂನಿನ ಸಿದ್ಧಾಂತಗಳ ಬಗ್ಗೆ ವಾದಿಸಬಹುದು, ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರಾಯೋಗಿಕ ವಾಸ್ತವಗಳಿಗೆ ನಾವು ಕಣ್ಣು ಮುಚ್ಚಲು ಸಾಧ್ಯವಿಲ್ಲ. ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆ ಇರಿಸಿಕೊಳ್ಳುವಂತಹ ಪರಿಸ್ಥಿತಿ ಅಲ್ಲಿ ನಿರ್ಮಾಣವಾಗಿದೆ. ಇದು ರಾಜ್ಯ ಮತ್ತು ಕೇಂದ್ರದ ನಡುವಿನ ವಿವಾದವಲ್ಲ, ಬದಲಿಗೆ ವ್ಯಕ್ತಿಯೊಬ್ಬರು ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿರುವುದು” ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ದೆಹಲಿ | IRS ಅಧಿಕಾರಿ ಮಗಳ ಮೇಲೆ ಅತ್ಯಾಚಾರ; ಚಾರ್ಜರ್ ಕೇಬಲ್‌ನಿಂದ ಕತ್ತು ಹಿಸುಕಿ ಹತ್ಯೆ

ಇಡಿ ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಮತಾ ಬ್ಯಾನರ್ಜಿ ಅವರು ಪೊಲೀಸರು ಮತ್ತು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಯುತ್ತಿದ್ದ ಜಾಗಕ್ಕೆ ನುಗ್ಗಿ, ಅಲ್ಲಿಂದ ಕೆಲ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಪುರಾವೆಗಳನ್ನು ಬಲವಂತವಾಗಿ ತೆಗೆದುಕೊಂಡು ಹೋಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ದಾಳಿಯ ಸ್ಥಳದಿಂದ ಹೊರಬರುವಾಗ ಅವರ ಕೈಯಲ್ಲಿದ್ದ ಹಸಿರು ಬಣ್ಣದ ಫೈಲ್ ದೇಶಾದ್ಯಂತ ದೊಡ್ಡ ಮಟ್ಟದ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಈ ದಾಳಿಯು ಸಾಕ್ಷ್ಯಾಧಾರಗಳ ಮೇಲೆ ನಡೆದಿದೆ ಮತ್ತು ಇದು ಯಾವುದೇ ರಾಜಕೀಯ ಪಕ್ಷವನ್ನು ಗುರಿಯಾಗಿಸಿಕೊಂಡಿಲ್ಲ. ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಇಡಿ ಸ್ಪಷ್ಟಪಡಿಸಿದೆ. ಆದರೆ ಮುಖ್ಯಮಂತ್ರಿಯವರ ಈ ಹಠಾತ್ ಹಸ್ತಕ್ಷೇಪವು ತನಿಖೆಗೆ ಅಡ್ಡಿಪಡಿಸಿದೆ ಎಂದು ಸಂಸ್ಥೆ ದೂರಿದೆ. ಚುನಾವಣಾ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಈ ವಿದ್ಯಮಾನವು ತೃಣಮೂಲ ಕಾಂಗ್ರೆಸ್‌ಗೆ (TMC) ದೊಡ್ಡ ಇಕ್ಕಟ್ಟನ್ನು ತಂದಿಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...