ಮೃತ ಶಿಕ್ಷಕರಿಗೆ ನೋಟಿಸ್; ಉತ್ತರಿಸಲು 3 ದಿನ ಗಡುವು ನೀಡಿದ ಮ.ಪ್ರ.ಸರ್ಕಾರ!

Date:

ಶೂನ್ಯ ಹಾಜರಾತಿಯಿದ್ದ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೃತ ಶಿಕ್ಷಕರಿಗೆ ಸರ್ಕಾರಿ ಅಧಿಕಾರಿಗಳು ಶೋಕಾಸ್ ನೋಟಿಸ್ ನೀಡಿದ ಮತ್ತು ಉತ್ತರಿಸಲು ಮೂರು ದಿನಗಳ ಗಡುವು ನೀಡಿದ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

2023ರ ಏಪ್ರಿಲ್‌ನಲ್ಲಿ ದೇವತಾ ದೀನ್ ಕೋಲ್, 2025ರ ಫೆಬ್ರವರಿ 13ರಂದು ರಾಮಗರೀಬ್ ದೀಪಂಕರ್ ಮತ್ತು 2025ರ ಮೇ ತಿಂಗಳಲ್ಲಿ ಚೋಟೆಲಾಲ್ ಸಾಕೇತ್ ನಿಧನರಾಗಿದ್ದಾರೆ. ಆದರೆ ಸರ್ಕಾರಿ ಅಧಿಕಾರಿಗಳು ಈ ಮೂವರು ಶಿಕ್ಷಕರ ಹಾಜರಾತಿಯನ್ನು 2025ರ ಅಕ್ಟೋಬರ್‌ನಲ್ಲಿ ಪರಿಶೀಲಿಸಿದ್ದು ಮೂವರ ಮನೆಗೆ ‘ಶೂನ್ಯ ಹಾಜರಾತಿ’ಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಕಳುಹಿಸಿದ್ದಾರೆ. ಹಾಗೆಯೇ ಉತ್ತರ ನೀಡದಿದ್ದರೆ ವೇತನ ಕಡಿತ ಮಾಡಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ಜಾರಿ 

ಹೊಸದಾಗಿ ಪರಿಚಯಿಸಲಾದ ಇ-ಹಾಜರಾತಿ ವ್ಯವಸ್ಥೆಯ ಅಡಿಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ನೋಟಿಸ್ ನೀಡಿದ್ದಾರೆ. ಉತ್ತರ ಪ್ರದೇಶದ ರೇವಾ ಮತ್ತು ಮೌಗಂಜ್ ಜಿಲ್ಲೆಗಳಲ್ಲಿ 1,500ಕ್ಕೂ ಅಧಿಕ ಶಿಕ್ಷಕರಿಗೆ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸರಿಯಾಗಿ ಹಾಜರಾತಿಯನ್ನು ಹಾಕದ ಕಾರಣಕ್ಕೆ ನೋಟಿಸ್‌ಗಳು ಬಂದಿವೆ. ಆದರೆ ವರ್ಷಾನುಗಟ್ಟಲೆ ಹಾಜರಾತಿ ಹಾಕದ, ವೇತನವನ್ನು ಪಡೆಯದ ಮೃತ ಶಿಕ್ಷಕರಿಗೂ ನೋಟಿಸ್ ನೀಡಿರುವುದು ಈ ವ್ಯವಸ್ಥೆಯಲ್ಲಿರುವ ಸಮಸ್ಯೆಯನ್ನು ಬಹಿರಂಗಪಡಿಸಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳು ಸಂಪರ್ಕಿಸಿದಾಗ ರೇವಾ ಜಿಲ್ಲಾ ಶಿಕ್ಷಣ ಅಧಿಕಾರಿ ರಾಮ್ ರಾಜ್ ಮಿಶ್ರಾ ಈ ಲೋಪವನ್ನು ಒಪ್ಪಿಕೊಂಡಿದ್ದು ಶಾಲಾ ಅಧಿಕಾರಿಗಳ ಮೇಲೆ ಹೊಣೆ ಹೊರೆಸಿದ್ದಾರೆ. “ಶಿಕ್ಷಕರ ವಿವರಗಳನ್ನು ಹೊಂದಿರುವ ವಿಶೇಷ ಪೋರ್ಟಲ್‌ನಿಂದ ಪಡೆದ ಶಿಕ್ಷಕರ ಡೇಟಾವನ್ನು ಆಧರಿಸಿ ನೋಟಿಸ್‌ಗಳನ್ನು ನೀಡಲಾಗಿದೆ. ಶಾಲೆಗಳ ಪ್ರಾಂಶುಪಾಲರು ಸರಿಯಾಗಿ ಮಾಹಿತಿ ನೀಡದ ಕಾರಣ ಈ ಲೋಪ ಸಂಭವಿಸಿದೆ. ಇಂತಹ ಪ್ರಕರಣಗಳು ಬಹಳ ಕಡಿಮೆ. ಡೇಟಾ ಅಪ್‌ಡೇಟ್ ಪ್ರಕ್ರಿಯೆ ನಡೆಸಲಾಗುತ್ತಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...