ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

Date:

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

- Advertisement -

ಮಂಗಳವಾರ ಛತ್ತೀಸ್‌ಗಢ ರಾಜಧಾನಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಕೆಂಡ್ರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಗದಲ್‌ಪುರದಿಂದ (ಬಸ್ತರ್) ರಾಯ್‌ಪುರಕ್ಕೆ ಹೋಗುತ್ತಿದ್ದ ಬಸ್‌ ಹೈವಾ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಶಿವಮೊಗ್ಗ | ಭೀಕರ ಅಪಘಾತ ಇಬ್ಬರು ಮೃತ್ಯು

ಸ್ಥಳಕ್ಕೆ ಅಭಾನ್‌ಪುರದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅಭಾನ್‌ಪುರ ಪಟ್ಟಣ ನಿರೀಕ್ಷಕ ಸಿದ್ದೇಶ್ವರ ಪ್ರತಾಪ್, “ಲಾರಿಯನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾ ವೇಗವಾಗಿ ಚಲಿಸುತ್ತಿದ್ದ ಬಸ್ ಟ್ರಕ್‌ಗೆ ಎಡಭಾಗದಿಂದ ಡಿಕ್ಕಿ ಹೊಡೆದಿದೆ. ರಾಯಲ್ ಟ್ರಾವೆಲ್ಸ್‌ನ ಬಸ್ ರಾಯ್‌ಪುರಕ್ಕೆ ತೆರಳುತ್ತಿತ್ತು. ಆರು ಮಂದಿ ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ” ಹೇಳಿದ್ದಾರೆ.

ಮೃತರೆಲ್ಲರೂ ಬಸ್‌ನ ಮುಂಭಾಗದ ಎಡಭಾಗದಲ್ಲಿ ಕುಳಿತಿದ್ದರು ಎಂದು ಹೇಳಲಾಗಿದೆ. ಈ ಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಮೃತರನ್ನು ಅಜರ್ ಅಲಿ(30), ಬಲರಾಮ್ ಪಟೇಲ್(46) ಮತ್ತು ಬರ್ಖಾ ಠಾಕೂರ್(31) ಎಂದು ಗುರುತಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...