ಭಾನುವಾರ ಮುಂಜಾನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರವಾಹದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ನಶ್ರಿ ಮತ್ತು ಬನಿಹಾಲ್ ನಡುವಿನ ಸ್ಥಳಗಳಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ಇನ್ನು ರಾಂಬನ್‌ನ ಸೆರಿ ಬಾಗ್ನಾ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಇಬ್ಬರು ಮಕ್ಕಳು, ಸಹೋದರರಾದ ಅಕಿಬ್ ಅಹ್ಮದ್ ಮತ್ತು ಮೊಹಮ್ಮದ್ ಸಾಕಿಬ್ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಮಳೆ: ಭೂಕುಸಿತ, ಪ್ರವಾಹದಿಂದ 22 ಸಾವು
ಎರಡು ದಿನಗಳಲ್ಲಿ ಮಳೆಯಿಂದ ಉಂಟಾದ ಅವಘಡದಿಂದಾಗಿ ಜಮ್ಮು ಕಾಶ್ಮೀರದಲ್ಲಿ ಒಟ್ಟು ಐವರು ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ರಿಯಾಸಿ ಜಿಲ್ಲೆಯ ಅರ್ನಾಸ್ ಪ್ರದೇಶದಲ್ಲಿ ಸಿಡಿಲು ಬಡಿದು ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ಮಹಿಳೆ ಗಾಯಗೊಂಡಿದ್ದಾರೆ.
STORY | Three killed, over 100 rescued as heavy rain wreaks havoc in J-K's Ramban
— Press Trust of India (@PTI_News) April 20, 2025
READ: https://t.co/9NAaKVi8UA
VIDEO:
(Full video available on PTI Videos – https://t.co/n147TvrpG7) pic.twitter.com/ODhCS7gJBT
ಧರಮ್‌ಕುಂಡ್ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ ಸುಮಾರು 40 ಮನೆಗಳಿಗೆ ಹಾನಿಯಾಗಿದೆ, 10 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್, “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ ಉಂಟಾಗಿದೆ. ಹಲವು ಸ್ಥಳಗಳಲ್ಲಿ ಭೂಕುಸಿತವಾಗಿದೆ. ಬಿರುಗಾಳಿ ಬೀಸಿದೆ” ಎಂದು ತಿಳಿಸಿದ್ದಾರೆ.
ಇನ್ನು “ಅಗತ್ಯವಿರುವಲ್ಲೆಲ್ಲಾ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾನು ಪರಿಹಾರ ಮತ್ತು ದುರಸ್ತಿ ಯೋಜನೆಗಳನ್ನು ಪರಿಶೀಲಿಸುತ್ತಿರುವೆ. ಸದ್ಯಕ್ಕೆ ಪರಿಸ್ಥಿತಿಯನ್ನು ನಿರ್ವಹಿಸುವತ್ತ ಗಮನ ಹರಿಸಲಾಗಿದೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದರು.
