ಲೈಂಗಿಕ ಚಿತ್ರಹಿಂಸೆ ನೀಡುತ್ತಿದ್ದ ವಿಕೃತಕಾಮಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಮೂವರು ಅಪ್ರಾಪ್ತೆಯರು

Date:

ಲೈಂಗಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ 25 ವರ್ಷದ ವಿಕೃತಕಾಮಿಯೊಬ್ಬನನ್ನು ಮೂವರು ಅಪ್ರಾಪ್ತೆಯರು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಆಗ್ನೇಯ ದೆಹಲಿಯ ಹಜರತ್‌ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದೆ.

- Advertisement -

ಪೊಲೀಸ್ ವರದಿಗಳ ಪ್ರಕಾರ, ಹತ್ಯೆಯಾದ ಯುವಕನಿಂದ ಮೂವರು ಅಪ್ರಾಪ್ತೆಯರು ಲೈಂಗಿಕ ಕಿರುಕುಳ ಅನುಭವಿಸುತ್ತಿದ್ದರು. ಇದಕ್ಕಾಗಿ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಡಿ.23ರಂದು ರಾತ್ರಿ ನಡೆದ ಘಟನೆಯ ಮಾಹಿತಿ ಪಡೆದ ನಂತರ 16 ರಿಂದ 17 ವರ್ಷದೊಳಗಿನ ಮೂವರು ಬಾಲಕಿಯರನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳು ಯುವಕನನ್ನು ಕಲ್ಲು, ದೊಣ್ಣೆಗಳಿಂದ ಜಜ್ಜಿ ಹತ್ಯೆ ಮಾಡಿದ ನಂತರ ಆತನ ಮೃತದೇಹವನ್ನು ಹುಲ್ಲು ಮತ್ತು ಬಟ್ಟೆಗಳನ್ನು ಬಳಸಿ ಸುಟ್ಟಿದ್ದಾರೆ, ಕುಶ್ರೊ ಉದ್ಯಾನದಲ್ಲಿ ಮೃತದೇಹ ಪತ್ತೆಯಾಗಿದೆ” ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

“ಮೃತದೇಹವನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಕೊಲೆ ಮತ್ತು ಸಾಕ್ಷ್ಯವನ್ನು ಮರೆಮಾಚಿದ್ದ ಅಂಶಗಳನ್ನು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಆರೋಪಿಗಳು ಡಿಸೆಂಬರ್ 21 ರಂದು ರಾತ್ರಿ ವ್ಯಕ್ತಿಯನ್ನು ಕೊಲೆ ಮಾಡಿ ದೇಹವನ್ನು ಒಣ ಹುಲ್ಲು ಮತ್ತು ಬಟ್ಟೆ ಮೂಲಕ ಸುಟ್ಟು ಹಾಕಲು ಪ್ರಯತ್ನಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಕೊಲೆಗೆ ಬಳಸಿದ ಆಯುಧಗಳಾದ ಕಲ್ಲುಗಳು ಮತ್ತು ದೊಣ್ಣೆಯನ್ನು ವಶಪಡಿಸಿಕೊಂಡಿದ್ದೇವೆ. ಮೃತನು ತುಂಬಾ ಕೆಟ್ಟ ಸ್ವಭಾವದವನು ಎಂದು ಹಜರತ್ ನಿಜಾಮುದ್ದೀನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತೆ ಲೈಂಗಿಕ ಶೋಷಣೆಗೆ ಒಳಗಾದ ಆರೋಪಿಗಳಲ್ಲಿ ಒಬ್ಬಕೆಯು ಕೊಲೆ ಯೋಜನೆ ರೂಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...