ತಮಿಳುನಾಡು | ನಕಲಿ ಮದ್ಯ ಸೇವಿಸಿ ಐವರು ಸಾವು; ಹಲವರು ಗಂಭೀರ

Date:

ನಕಲಿ ಮದ್ಯ ಸೇವಿಸಿ ತಮಿಳುನಾಡಿನ ವಿಲ್ಲಪ್ಪುರಂ ಜಿಲ್ಲೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರು ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಜಿಲ್ಲೆಯ ಮರಕಾನಂ ಪ್ರದೇಶದಲ್ಲಿ ಶನಿವಾರ (ಮೇ 13) ತಡರಾತ್ರಿ ಮೀನುಗಾರರು ಕಾರ್ಯಕ್ರಮವೊಂದರಲ್ಲಿ ಸ್ಥಳೀಯವಾಗಿ ತಯಾರಿಸಿದ ನಕಲಿ ಮದ್ಯ ಸೇವಿಸಿ ವಾಂತಿ ಮಾಡಿಕೊಳ್ಳಲು ಆರಂಭಿಸಿದರು. ಈ ಪ್ರದೇಶದಲ್ಲಿ ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪುದುಚೆರಿ ಬಳಿಯ ಜಿಪ್ಮೆರ್‌ನ ಜವಹರ್‌ ಲಾಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮೂವರು ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಹದಿನೈದು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಕಲಿ ಮದ್ಯದ ದುರಂತಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣವೊಂದನ್ನು ದಾಖಲಿಸಿದ್ದಾರೆ. ಈ ಸಂಬಂಧ ಒರ್ವ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಈ ಬಗ್ಗೆ ಪೊಲೀಸರು ದೂರು ಸ್ವೀಕರಿಸಿ ತನಿಖೆ ಆರಂಭಿಸಿದ್ದಾರೆ. ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವಿಲ್ಲುಪುರಂನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಡಿಎಸ್‌ಪಿ) ಎನ್‌ ಶ್ರೀನಾಥ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣ; ಪಶ್ಚಿಮ ಬಂಗಾಳ, ತಮಿಳುನಾಡಿಗೆ ಸುಪ್ರೀಂ ನೋಟಿಸ್

ನಕಲಿ ಮದ್ಯದ ದುರಂತಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...