ಉತ್ತರ ಪ್ರದೇಶ | ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರುಳ

Date:

ಮೂರು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಇಟ್ಹಾ ಪ್ರದೇಶದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಶನಿವಾರ ಬಾಲಕಿಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಸಂಬಂಧಿಯೋರ್ವ ತಮ್ಮ ಮಗಳಿಗೆ ಚಾಕೋಲೇಟ್ ನೀಡುವ ನೆಪದಲ್ಲಿ ಮನೆಯಿಂದ ಹೊರಕ್ಕೆ ಕರೆದೊಯ್ದಿದ್ದು ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ದಲಿತ ಬಾಲಕಿಯ ಮೇಲೆ ಅತ್ಯಾಚಾರ: 70 ವರ್ಷದ ಕಾಮುಕ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

ಆರೋಪಿಯನ್ನು ಹೀರಾ ಲಾಲ್ (40) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೋತ್ವಾಲಿ ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಾಜೇಶ್ ಕುಮಾರ್ ಸಿಂಗ್, “ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಚಿಕಿತ್ಸೆ ಮತ್ತು ಪರಿಶೀಲನೆಗಾಗಿ ಮೂರು ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.

ದೇಶದಲ್ಲಿ ಪುಟ್ಟ ಮಕ್ಕಳ ಮೇಲೆ, ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿದೆ. ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. ಇನ್ನೂ ಹಲವು ಪ್ರಕರಣಗಳು ವರದಿಯೇ ಆಗಿಲ್ಲ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ. ಅತ್ಯಾಚಾರಕ್ಕೆ ಹೆಣ್ಣುಮಕ್ಕಳ ಬಟ್ಟೆಯೇ ಕಾರಣ ಎನ್ನುವವರು ಮೂರು ವರ್ಷದ ಬಾಲಕಿ ಮೇಲೆ ಯಾವ ಬಟ್ಟೆ ಕಾರಣಕ್ಕೆ ಅತ್ಯಾಚಾರವಾಗುತ್ತದೆ ಎಂದು ಉತ್ತರಿಸಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುದೀರ್ಘ ವಿಚಾರಣಾಧೀನ ಬಂಧನ ‘ಶಿಕ್ಷೆ’ಯಾಗದಿರಲಿ: ₹979 ಕೋಟಿ ಹಗರಣದ ಆರೋಪಿಗಳಿಗೆ ಸುಪ್ರೀಂ ಜಾಮೀನು

​₹979.45 ಕೋಟಿ ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಪಡೆಯಲು ವಂಚನೆ ಹಾಗೂ ಅಕ್ರಮ...

ಏಕನಾಥ ಶಿಂಧೆ ಒಲಿಸಿಕೊಳ್ಳಲು 500 ಕೋಟಿ ಹಣ ನೀಡಿದ ಬಿಜೆಪಿ: ಜಾರಂಗೆ ಪಾಟೀಲ್ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಬಿಡುಗಡೆ ಮಾಡಿರುವ ವಿವಾದಾತ್ಮಕ ಆಡಿಯೊ...

ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಸೇನೆಯ ಜೊತೆಗಿನ ಮುಖಾಮುಖಿ ಹಾಗೂ...