ಮಹಿಳಾ ಎಸ್‌ಪಿಗೆ ಲೈಂಗಿಕ ಕಿರುಕುಳ: ತಮಿಳುನಾಡು ಮಾಜಿ ಡಿಜಿಪಿಗೆ ಮೂರು ವರ್ಷ ಜೈಲು

Date:

ಮಹಿಳಾ ಪೊಲೀಸ್ ಅಧೀಕ್ಷಕರೊಬ್ಬರಿಗೆ(ಎಸ್‌ಪಿ) ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡಿನ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರಿಗೆ ವಿಲ್ಲುಪುರಂನ ಸ್ಥಳೀಯ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಹಾಗೂ ₹ 10,000 ದಂಡವನ್ನು ವಿಧಿಸಿ ತೀರ್ಪು ನೀಡಿದೆ.

- Advertisement -

ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಫೆಬ್ರವರಿ 2021 ರಲ್ಲಿ ಮಾಜಿ ಡಿಜಿಪಿ ರಾಜೇಶ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು. ಅಂದಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸಾಮಿ ಅವರ ಭದ್ರತೆಗಾಗಿ ಗಸ್ತು ಕರ್ತವ್ಯದಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದಾಗ ಡಿಜಿಪಿ ಆಗಿದ್ದ ರಾಜೇಶ್ ದಾಸ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳಾ ಅಧಿಕಾರಿ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಈ ಪ್ರಕರಣದಲ್ಲಿ ತಮಿಳುನಾಡು ಮಾಜಿ ವಿಶೇಷ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರನ್ನು ದೋಷಿ ಎಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂ. ಪುಷ್ಪರಾಣಿ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354ರ ಮಹಿಳೆಯರ ಮೇಲಿನ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ಕಿರುಕುಳ ನೀಡಿದ ಆರೋಪಕ್ಕಾಗಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ರಾಜೇಶ್ ದಾಸ್ ವಿರುದ್ಧ ದೂರು ನೀಡಲು ಚೆನ್ನೈಗೆ ತೆರಳುತ್ತಿದ್ದಾಗ ಮಹಿಳಾ ಪೊಲೀಸ್ ಅಧಿಕಾರಿಯನ್ನು ತಡೆದಿದ್ದಕ್ಕಾಗಿ ಎಫ್ಐಆರ್‌ನಲ್ಲಿ ಹೆಸರಿಸಲಾದ ಅಂದಿನ ಚೆಂಗಲ್ಪಟ್ಟು ಪೊಲೀಸ್ ವರಿಷ್ಠಾಧಿಕಾರಿ ಕಣ್ಣನ್ ಅವರನ್ನು ಸಹ ನ್ಯಾಯಾಲಯ ತಪ್ಪಿತಸ್ಥರೆಂದು ತೀರ್ಪು ನೀಡಿ, ಅವರಿಗೆ ₹500 ದಂಡ ವಿಧಿಸಿದೆ.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಗೆ ಆರೋಪಿಯೊಂದಿಗೆ ರಾಜಿಗೆ ಮುಂದಾದ ಗುಜರಾತ್‌ ಹೈಕೋರ್ಟ್‌ ನ್ಯಾಯಾಧೀಶ

ಪ್ರಕರಣದ ಸಲುವಾಗಿ ಅಂದಿನ ಎಐಎಡಿಎಂಕೆ ಸರ್ಕಾರ ದಾಸ್ ಅವರನ್ನು ಅಮಾನತುಗೊಳಿಸಿತ್ತು ಮತ್ತು ತನಿಖೆಗಾಗಿ ಆರು ಸದಸ್ಯರ ಸಮಿತಿ ರಚಿಸಿತ್ತು.

ಅಪರಾಧ ದಳದ ತನಿಖಾ ವಿಭಾಗವು ಜುಲೈ 2021 ರಲ್ಲಿ ದಾಸ್ ವಿರುದ್ಧ 400 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತು. ವಿಚಾರಣೆಯು 2021 ರಲ್ಲಿ ವಿಲ್ಲುಪುರಂನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಾರಂಭವಾಯಿತು. ವಿಚಾರಣೆಯ ಸಮಯದಲ್ಲಿ, 70 ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಯಿತು.

ಅಧಿಕಾರಿಯು ಮೇಲ್ಮನವಿ ಸಲ್ಲಿಸಲು ಆದ್ಯತೆ ನೀಡಬಹುದು ಮತ್ತು ತಕ್ಷಣದ ಜಾಮೀನು ಪಡೆಯಬಹುದು” ಎಂದು ಪ್ರಾಸಿಕ್ಯೂಷನ್ ತಂಡದ ಸದಸ್ಯರೊಬ್ಬರು ಹೇಳಿದ್ದಾರೆ.

ಈ ಘಟನೆಯು 2021 ರಲ್ಲಿ ಚುನಾವಣಾ ವಿಷಯವಾಗಿ ಮಾರ್ಪಟ್ಟಿತ್ತು ಮತ್ತು ಆಗಿನ ವಿರೋಧ ಪಕ್ಷದ ನಾಯಕ ಎಂ ಕೆ ಸ್ಟಾಲಿನ್ ಅಧಿಕಾರಕ್ಕೆ ಬಂದರೆ ಸರಿಯಾದ ಕಾನೂನು ಪ್ರಕ್ರಿಯೆ ಮತ್ತು ಶಿಕ್ಷೆಯನ್ನು ಕೊಡಿಸುವುದಾಗಿ ಮಹಿಳಾ ಅಧಿಕಾರಿಗೆ ಭರವಸೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...