ತ್ರಿಶೂರ್‌ ಪಟಾಕಿ ಅವಘಡ: ಮೃತರ ಕುಟುಂಬಗಳಿಗೆ 14 ಲಕ್ಷ ಪರಿಹಾರ

Date:

ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್‌ನಲ್ಲಿ‌ ನಿನ್ನೆ ಸಂಭವಿಸಿದ ಭೀಕರ ಪಟಾಕಿ ಸ್ಫೋಟದ ತನಿಖೆಗೆ ಕೇರಳ ಸರ್ಕಾರ ಇಂದು ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಘಟನೆಯನ್ನು ‘ರಾಜ್ಯದ ವಿಶಿಷ್ಟ ವಿಪತ್ತು’ ಎಂದು ಘೋಷಿಸಲಾಗಿದೆ. ಅಲ್ಲದೆ ಮೃತರ ಕುಟುಂಬಕ್ಕೆ 14 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

- Advertisement -

ಕಂದಾಯ ಸಚಿವ ಕೆ. ರಾಜನ್ ಅವರು ಮಾಹಿತಿ ನೀಡಿ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಿ ಎನ್ ರಾಮಚಂದ್ರನ್ ನಾಯರ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪಟಾಕಿ ಸಂಗ್ರಹಣೆ ಮತ್ತು ನಿರ್ವಹಣೆಯಲ್ಲಿನ ಸುರಕ್ಷತಾ ನಿಯಮಗಳ ಉಲ್ಲಂಘನೆ, ಲೋಪದೋಷಗಳು ಮತ್ತು ಹೊಣೆಗಾರಿಕೆಯ ಬಗ್ಗೆ ಸಮಿತಿ ತನಿಖೆ ನಡೆಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮೃತರ ಕುಟುಂಬಕ್ಕೆ ಘೋಷಿಸಿರುವ ಪರಿಹಾರದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ಮತ್ತು ರಾಜ್ಯ ವಿಪತ್ತು ಸ್ಪಂದನಾ ನಿಧಿಯಿಂದ 4 ಲಕ್ಷ ರೂಪಾಯಿ ಸೇರಿ ಒಟ್ಟು 14 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಸಹಾಯಧನ ಘೊಷಿಸಲಾಗಿದೆ.

ಮಂಗಳವಾರ ಸಂಭವಿಸಿದ ಈ ಭೀಕರ ಸ್ಫೋಟದಲ್ಲಿ ಇದುವರೆಗೆ 13 ಜನರು ಬಲಿಯಾಗಿದ್ದಾರೆ. ಸದ್ಯ ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಒಟ್ಟು 9 ಮೃತದೇಹಗಳನ್ನು ಶವಾಗಾರಕ್ಕೆ ತರಲಾಗಿದ್ದು, ಈ ಪೈಕಿ 7 ಮಂದಿಯನ್ನು ಗುರುತಿಸಲಾಗಿದೆ. ಮೃತರನ್ನು ಸುದರ್ಶನ್ (54), ವಾಸುದೇವನ್ (54), ಸುವಿನ್ (40), ಮಣಿಕಂಠನ್ (60), ಸುಬ್ರಮಣಿಯನ್ (50), ಬಿಜಿಶ್ ಮತ್ತು ಮಣಿಕಂಠನ್ (33) ಎಂದು ಗುರುತಿಸಲಾಗಿದೆ. ಇವರಲ್ಲಿ 33 ವರ್ಷದ ಮಣಿಕಂಠನ್ ಪಟಾಕಿ ಘಟಕದ ಸಿಬ್ಬಂದಿಯಲ್ಲ, ಅವರು ಸ್ಥಳೀಯ ನಿವಾಸಿಯಾಗಿದ್ದರು.

ಇದನ್ನೂ ಓದಿ: ನಕಲಿ ಬಾಬಾ ಧೀರೇಂದ್ರ ಶಾಸ್ತ್ರಿಯಿಂದ ಸನ್ಮಾನಿಸಿಕೊಂಡ ನಿವೃತ್ತ ಸಿಜೆಐ ಗವಾಯಿ ಕುಟುಂಬದ ಫೋಟೋ ವೈರಲ್‌; ʼಅಶ್ಲೀಲ ಚಿತ್ರʼ ಎಂದ ಜನ

ಘಟನಾ ಸ್ಥಳದಲ್ಲಿ ಸುಮಾರು 26 ಮಾನವ ದೇಹದ ಭಾಗಗಳು ಪತ್ತೆಯಾಗಿದ್ದು, ಇದು ಸ್ಫೋಟದ ತೀವ್ರತೆಯನ್ನು ತೋರಿಸುತ್ತಿದೆ. ಇದರಿಂದಾಗಿ ಉಳಿದ ಬಲಿಪಶುಗಳ ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದ್ದು, ವಿಧಿವಿಜ್ಞಾನ (Forensic) ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಕೇರಳದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಅತ್ಯಂತ ದೊಡ್ಡ ಪಟಾಕಿ ದುರಂತಗಳಲ್ಲಿ ಇದೂ ಒಂದಾಗಿದ್ದು, ಪಟಾಕಿ ತಯಾರಿಕಾ ಘಟಕಗಳ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...