ಟೈಗರ್ ಶ್ರಾಫ್ ದಾಳಿ ಪ್ರಕರಣ: ಗುಂಡಿಗೆ ಗುಂಡೇಟಿನಿಂದಲೇ ಉತ್ತರ; ಡಿಸಿಎಂ ಏಕನಾಥ್ ಶಿಂಧೆ ಎಚ್ಚರಿಕೆ

Date:

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವು ಮಹಾರಾಷ್ಟ್ರ ದಲ್ಲಿ ತೀವ್ರ ರಾಜಕೀಯ ಚರ್ಚೆ ಹುಟ್ಟುಹಾಕಿದೆ. ಮುಂಬೈನ ಬಾಂದ್ರಾದಲ್ಲಿರುವ ಟೈಗರ್ ಶ್ರಾಫ್ ಅವರ ನಿವಾಸಕ್ಕೆ ಭಾನುವಾರ ತಡರಾತ್ರಿ ಭೇಟಿ ನೀಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ನಟನ ಆರೋಗ್ಯವನ್ನು ವಿಚಾರಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ನಟನಿಗೆ ಸಂಪೂರ್ಣ ಭದ್ರತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, “ಮುಂಬೈನಲ್ಲಿ ಯಾವುದೇ ಕಾರಣಕ್ಕೂ ಗ್ಯಾಂಗ್ ವಾರ್‌ಗಳನ್ನು ಸಹಿಸುವುದಿಲ್ಲ. ಗುಂಡಿನ ದಾಳಿಗೆ ಗುಂಡೇಟಿನಿಂದಲೇ ತಕ್ಕ ಉತ್ತರ ನೀಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

ಭಾನುವಾರ ಸಂಜೆ, ಮುಂಬೈನ ಜುಹು ಪ್ರದೇಶದಲ್ಲಿ ಟೈಗರ್ ಶ್ರಾಫ್‌ ಅವರು ಕಾರಿನಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಚಾಲಕ ಮತ್ತು ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 109(1) ಮತ್ತು 3(5) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3 ಮತ್ತು 25ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್ ಒಂದರಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಪೊಲೀಸರು ಇದರ ಸತ್ಯಾಸತ್ಯತೆಯನ್ನು ಇನ್ನೂ ಪರಿಶೀಲಿಸುತ್ತಿದ್ದಾರೆ.

ಟೈಗರ್‌ ಶ್ರಾಫ್‌ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಏಕನಾಥ್‌ ಶಿಂಧೆ, 1990ರ ದಶಕದಲ್ಲಿ ಮುಂಬೈನಲ್ಲಿ ತಲೆಎತ್ತಿದ್ದ ಭೂಗತ ಜಾಲಗಳು ಮತ್ತು ಗ್ಯಾಂಗ್ ವಾರ್‌ಗಳನ್ನು ಪೊಲೀಸರು ಯಾವ ರೀತಿ ಹತ್ತಿಕ್ಕಿದ್ದರು ಎಂಬುದನ್ನು ಸ್ಮರಿಸಿದ್ದಾರೆ. “ಈಗ ಮತ್ತೊಮ್ಮೆ ಅಂತಹ ಅಪರಾಧ ಜಾಲಗಳ ಬೇರುಗಳನ್ನು ಕಿತ್ತೂಗೆಯುವ ಸಮಯ ಬಂದಿದೆ” ಎಂದಿದ್ದಾರೆ.

“ಸೆಲೆಬ್ರಿಟಿಗಳನ್ನು ಗುರಿಯಾಗಿಸಿ ಬೆದರಿಕೆಹಾಕುವ ಕೃತ್ಯಗಳನ್ನು ಅಥವಾ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಕ್ರಿಮಿನಲ್ ಗ್ಯಾಂಗ್‌ಗಳ ಪ್ರಾಬಲ್ಯ ಮೆರೆಯುವ ಪ್ರಯತ್ನಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಟೈಗರ್ ಶ್ರಾಫ್ ಮತ್ತು ಅವರ ತಾಯಿ ಆಯೇಷಾ ಶ್ರಾಫ್ ಸೇರಿದಂತೆ ಇಡೀ ಕುಟುಂಬವು ಈ ಘಟನೆಯಿಂದ ಮಾನಸಿಕ ಆಘಾತಕ್ಕೊಳಗಾಗಿದೆ. ಟೈಗರ್‌ ಶ್ರಾಫ್‌ ಅವರು ಯಾವುದೇ ವೈಯಕ್ತಿಕ ಗಲಾಟೆ ಅಥವಾ ವಿವಾದದಲ್ಲಿ ಸಿಲುಕಿಲ್ಲದಿದ್ದರೂ, ಅವರನ್ನು ಈ ರೀತಿ ಗುರಿಯಾಗಿಸಿರುವುದು ಖಂಡನೀಯ” ಎಂದಿದ್ದಾರೆ.

“ಘಟನೆಯ ತನಿಖೆಗಾಗಿ ಮುಂಬೈ ಪೊಲೀಸ್ ಆಯುಕ್ತ ದೇವೆನ್ ಭಾರತಿ ಅವರಿಗೆ ವಿಶೇಷ ತಂಡವನ್ನು ರಚಿಸಲು ಸೂಚನೆ ನೀಡಲಾಗಿದ್ದು, ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಡಿಎಂ ಜಿ ಅರವಿಂದ್ ಆಶ್ವಾಸನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...