‘ರಾಷ್ಟ್ರಪತಿಗೆ ಕಾಲಮಿತಿ ಹೇರಿಕೆ’: ಸುಪ್ರೀಂಗೆ 14 ಪ್ರಶ್ನೆ ಕೇಳಿದ ಮುರ್ಮು

Date:

Advertisements

ರಾಜ್ಯ ಸರ್ಕಾರಗಳಿಂದ ಮಸೂದೆಗಳನ್ನು ಸ್ವೀಕರಿಸಿದ ರಾಜ್ಯಪಾಲರು 1 ತಿಂಗಳೊಳಗೆ ಮತ್ತು ರಾಷ್ಟ್ರಪತಿಗಳು 3 ತಿಂಗಳೊಳಗೆ ಅವುಗಳನ್ನು ವಿಲೇವಾರಿ ಮಾಡಬೇಕೆಂದು ಸುಪ್ರೀಂ ಕೋರ್ಟ್‌ ವಿಧಿಸಿರುವ ಕಾಲಮಿತಿ ಗಡುವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶ್ನಿಸಿದ್ದಾರೆ. ‘ರಾಷ್ಟ್ರಪತಿಗೆ ಕಾಲಮಿತಿ ವಿಧಿಸಬಹುದೇ’ ಎಂದು ಸುಪ್ರೀಂ ಕೋರ್ಟ್‌ಅನ್ನು ಪ್ರಶ್ನಿಸಿರುವ ಮುರ್ಮು, 14 ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಸುಪ್ರೀಂ ಕೋರ್ಟ್‌ನಿಂದ ಅಭಿಪ್ರಾಯ ಕೇಳಿದ್ದಾರೆ.

ತಮಿಳುನಾಡು ಸರ್ಕಾರ vs ತಮಿಳುನಾಡು ರಾಜ್ಯಪಾಲರ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಸಂವಿಧಾನದ 201ನೇ ವಿಧಿಯ ಪ್ರಕಾರ ಮಸೂದೆಗಳನ್ನು ವಿಲೇವಾರಿ ಮಾಡಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಸಮಯಮಿತಿಯನ್ನು ನಿಗದಿಪಡಿಸಿ ಮಹತ್ವದ ತೀರ್ಪು ನೀಡಿದೆ. ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಈ ತೀರ್ಪು ಹೆಗ್ಗುರುತಾಗಿ ಉಳಿಯಲಿದೆ ಎಂಬ ಅಭಿಪ್ರಾಯಗಳಿವೆ. ಸುಪ್ರೀಂ ತೀರ್ಪಿನ ಬಗ್ಗೆ ವಿಪಕ್ಷಗಳು ಮೆಚ್ಚುಗೆ ವ್ಯಕ್ತಪಡಿಸಿದರೆ, ಬಿಜೆಪಿಗರು ಆಕ್ಷೇಪ ಎತ್ತಿದ್ದರು.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸುಪ್ರೀಂ ಕೋರ್ಟ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ”ನ್ಯಾಯಾಧೀಶರು ‘ಸೂಪರ್ ಪಾರ್ಲಿಮೆಂಟ್‌’ ಆಗಿ ಕಾರ್ಯನಿರ್ವಹಿಸಲು ಯತ್ನಿಸುತ್ತಿದ್ದಾರೆ. ಇಂತಹ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದು ಭಾರತದ ಪ್ರಜಾಪ್ರಭುತ್ವದ ಉದ್ದೇಶವಲ್ಲ. ನೀವು (ನ್ಯಾಯಾಧೀಶರು) ಭಾರತದ ರಾಷ್ಟ್ರಪತಿಗೆ ನಿರ್ದೇಶಿಸುವ ಪರಿಸ್ಥಿತಿಯನ್ನು ನಾವು ನೋಡಲು ಸಾಧ್ಯವಿಲ್ಲ” ಎಂದಿದ್ದರು.

Advertisements

ಈ ವರದಿ ಓದಿದ್ದೀರಾ?: ಮೋದಿ ವೈಫಲ್ಯದ ಸಂಕೇತವಾಯಿತಾ ‘8PM’?

ಇದೀಗ, ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ, ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ನ್ಯಾಯಾಲಯವು ಸಂವಿಧಾನದ 143ರನೇ ವಿಧಿಯಡಿ ತನಗೆ ನೀಡಲಾಗಿರುವ ಅಧಿಕಾರವನ್ನು ಬಳಸಿಕೊಂಡು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಸಮಯದ ಮಿತಿ ಹೇರಲು ಸಾಧ್ಯವೇ? ಅನುಮೋದನೆಗಾಗಿ ಬಂದ ಮಸೂದೆಗಳನ್ನು ಪರಿಗಣಿಸುವಾಗ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ರಾಷ್ಟ್ರಪತಿ/ರಾಜ್ಯಪಾಲರಿಗೆ ಕೋರ್ಟ್‌ ಸೂಚಿಸಲು ಸಾಧ್ಯವೇ” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪತ್ರದಲ್ಲಿ ಮುರ್ಮು ಅವರು ಎತ್ತಿರುವ 14 ಪ್ರಶ್ನೆಗಳನ್ನು ಲೈವ್‌ ಲಾ ಪಟ್ಟಿ ಮಾಡಿದೆ;

  1. ಭಾರತೀಯ ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಮುಂದೆ ಮಸೂದೆಗಳು ಬಂದಾಗ, ಅವರ ಮುಂದೆ ಇರುವ ಸಾಂವಿಧಾನಿಕ ಆಯ್ಕೆಗಳು ಯಾವುವು?
  2. ಭಾರತೀಯ ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ತಮ್ಮ ಮುಂದೆ ಬಂದ ಮಸೂದೆಯ ವಿಲೇವಾರಿ ಮಾಡುವಾಗ ರಾಜ್ಯಪಾಲರು ತಮ್ಮ ಸಂವಿಧಾನಿಕ ಆಯ್ಕೆಯನ್ನು ಚಲಾಯಿಸುವಾಗ ನೀಡುವ ಸಹಾಯ ಮತ್ತು ಸಲಹೆಗೆ ಸಂಪುಟವು ಬದ್ಧವಾಗಿದೆಯೇ?
  3. ಭಾರತೀಯ ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಸಾಂವಿಧಾನಿಕ ವಿವೇಚನೆಯನ್ನು ಚಲಾಯಿಸುವುದು ನ್ಯಾಯಸಮ್ಮತವಲ್ಲವೇ?
  4. ಭಾರತೀಯ ಸಂವಿಧಾನದ 361ನೇ ವಿಧಿಯು 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ತೆಗೆದುಕೊಳ್ಳುವ ಕ್ರಮಗಳ ಕುರಿತು ನ್ಯಾಯಾಂಗ ಪರಿಶೀಲನೆಗೆ ಸಂಪೂರ್ಣ ನಿರ್ಬಂಧವಿದೆಯೇ?
  5. ಸಾಂವಿಧಾನಿಕವಾಗಿ ನಿಗದಿಪಡಿಸಿದ ಸಮಯ ಮಿತಿ ಮತ್ತು ರಾಜ್ಯಪಾಲರು ಅಧಿಕಾರಗಳನ್ನು ಚಲಾಯಿಸುವ ವಿಧಾನಗಳ ಅನುಪಸ್ಥಿತಿಯಲ್ಲಿ, ರಾಜ್ಯಪಾಲರ ಮೇಲೆ ನ್ಯಾಯಾಂಗವು ಆದೇಶಗಳ ಮೂಲಕ ಸಮಯ ಮಿತಿಗಳನ್ನು ವಿಧಿಸಬಹುದೇ ಮತ್ತು ಅಧಿಕಾರ ಚಲಾಯಿಸುವ ವಿಧಾನವನ್ನು ಸೂಚಿಸಬಹುದೇ?
  6. ಭಾರತ ಸಂವಿಧಾನದ 201ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳು ಸಾಂವಿಧಾನಿಕ ವಿವೇಚನೆಯನ್ನು ಚಲಾಯಿಸುವುದು ನ್ಯಾಯಸಮ್ಮತವಲ್ಲವೇ?
  7. ಸಾಂವಿಧಾನಿಕವಾಗಿ ನಿಗದಿಪಡಿಸಿದ ಸಮಯ ಮಿತಿ ಮತ್ತು ರಾಷ್ಟ್ರಪತಿಗಳು ಅಧಿಕಾರಗಳನ್ನು ಚಲಾಯಿಸುವ ವಿಧಾನದ ಅನುಪಸ್ಥಿತಿಯಲ್ಲಿ, ಭಾರತ ಸಂವಿಧಾನದ 201ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳು ತಮ್ಮ ವಿವೇಚನೆಯನ್ನು ಚಲಾಯಿಸುವ ಬಗ್ಗೆ ನ್ಯಾಯಾಂಗವು ಸಮಯ ಮಿತಿಗಳನ್ನು ವಿಧಿಸಬಹುದೇ? ಅಧಿಕಾರ ಚಲಾಯಿಸುವ ವಿಧಾನವನ್ನು ಸೂಚಿಸಬಹುದೇ?
  8. ರಾಷ್ಟ್ರಪತಿಗಳ ಅಧಿಕಾರಗಳನ್ನು ನಿಯಂತ್ರಿಸುವ ಸಾಂವಿಧಾನಿಕ ಯೋಜನೆಯ ಬೆಳಕಿನಲ್ಲಿ, ರಾಜ್ಯಪಾಲರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದಾಗ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಪಡೆಯಬೇಕೆ?
  9. ಮಸೂದೆಗಳು ಅಂಗೀಕಾರಗೊಂಡು ಕಾನೂನಾಗಿ ಜಾರಿಗೆ ಬರುವ ಮೊದಲು ಸಂವಿಧಾನದ 200ನೇ ವಿಧಿ ಮತ್ತು 201ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ತೆಗೆದುಕೊಳ್ಳುವ ನಿರ್ಧಾರಗಳು ಒಂದು ಹಂತದಲ್ಲಿ ನ್ಯಾಯಸಮ್ಮತವಲ್ಲವೇ? ಮಸೂದೆ ಕಾನೂನಾಗುವ ಮೊದಲು ಅವುಗಳ ವಿಚಾರದಲ್ಲಿ ನ್ಯಾಯಾಲಯಗಳು ಯಾವುದೇ ರೀತಿಯಲ್ಲಿ ನ್ಯಾಯಾಂಗ ತೀರ್ಪು ನೀಡಲು ಅವಕಾಶ ಇದೆಯೇ?
  10. ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಅಧಿಕಾರಗಳ ಚಲಾವಣೆ ಮತ್ತು ರಾಷ್ಟ್ರಪತಿ/ರಾಜ್ಯಪಾಲರ ಆದೇಶಗಳನ್ನು ಯಾವುದೇ ರೀತಿಯಲ್ಲಿ ಬದಲಾಯಿಸಬಹುದೇ?
  11. ರಾಜ್ಯ ಶಾಸಕಾಂಗವು ರೂಪಿಸಿದ ಮಸೂದೆಗಳು ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಒಪ್ಪಿಗೆ ಪಡೆಯದೇ ಕಾನೂನಾಗಿ ಜಾರಿಗೆ ಬರಬಹುದೇ?
  12. ಸಂವಿಧಾನದ 145(3)ನೇ ವಿಧಿಯ ನಿಬಂಧನೆಯನ್ನು ಗಮನದಲ್ಲಿಟ್ಟುಕೊಂಡು, ಗೌರವಾನ್ವಿತ ನ್ಯಾಯಾಲಯವು ತನ್ನ ಮುಂದೆ ಇರುವ ಸಂವಿಧಾನದ ವ್ಯಾಖ್ಯಾನಕ್ಕೆ ಸಂಬಂಧಿಸಿದಂತೆ ಪ್ರಕರಣವು ಕಾನೂನಿನ ಗಣನೀಯ ಪ್ರಶ್ನೆಗಳನ್ನು ಒಳಗೊಂಡಿರುವ ಸ್ವರೂಪದ್ದಾಗಿದೆಯೇ ಎಂದು ಪರಿಶೀಲಿಸುವುದು ಮತ್ತು ಅದನ್ನು ಕನಿಷ್ಠ ಐದು ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖಿಸುವುದು ಕಡ್ಡಾಯವಲ್ಲವೇ?
  13. ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರಗಳು ಕಾರ್ಯವಿಧಾನ ಕಾನೂನುಗಳನ್ನು ದಾಟಿ ಕಾರ್ಯವಿಧಾನದ ನಿಬಂಧನೆಗಳಿಗೆ ವಿರುದ್ಧವಾದ ಅಥವಾ ಅಸಮಂಜಸವಾದ ನಿರ್ದೇಶನಗಳನ್ನು/ಆದೇಶಗಳನ್ನು ಹೊರಡಿಸಲು ವಿಸ್ತರಿಸುತ್ತದೆಯೇ?
  14. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವಿನ ವಿವಾದಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್‌, ಸಂವಿಧಾನದ 131ನೇ ವಿಧಿಯ ಅಡಿಯಲ್ಲಿ ಮೊಕದ್ದಮೆಗಳ ವಿಚಾರಣೆ ನಡೆಸುವುದನ್ನು ಹೊರತುಪಡಿಸಿ, ಯಾವುದೇ ಇತರ ನ್ಯಾಯವ್ಯಾಪ್ತಿಯನ್ನು ಸಂವಿಧಾನವು ನಿರ್ಬಂಧಿಸಿದೆಯೇ?

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X