ಮಗನ ಮಾನಸಿಕ ಅಸ್ವಸ್ಥತೆಗೆ ಬೇಸತ್ತು 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ತಾಯಿ ಆತ್ಮಹತ್ಯೆ!

Date:

ಮಗನ ದೀರ್ಘಕಾಲದ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ಮಹಿಳೆಯೊಬ್ಬರು 13ನೇ ಮಹಡಿಯಿಂದ 11 ವರ್ಷದ ಮಗನ ಸಮೇತ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಸಾಕ್ಷಿ ಚಾವ್ಲಾ ಮತ್ತು ಮಗ ದಕ್ಷ ಮೃತರು ಎಂದು ಗುರುತಿಸಲಾಗಿದೆ. ಗ್ರೇಟರ್ ನೋಯ್ಡಾ ಏಸ್ ಸಿಟಿಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನ 13 ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೃತ ಮಹಿಳೆ ಬರೆದ ಡೆತ್‌ನೋಟ್‌ ಪತ್ತೆಯಾಗಿದ್ದು, “ನಾವು ಈ ಲೋಕವನ್ನು ತೊರೆಯುತ್ತಿದ್ದೇವೆ, ಕ್ಷಮಿಸಿ… ನಾವು ಇನ್ಮುಂದೆ ನಿಮಗೆ ತೊಂದರೆ ಕೊಡಲು ಬಯಸುವುದಿಲ್ಲ. ನಮ್ಮಿಂದಾಗಿ ನಿಮ್ಮ ಜೀವನ ಹಾಳಾಗಬಾರದು. ನಮ್ಮ ಸಾವಿಗೆ ಯಾರೂ ಕಾರಣವಲ್ಲ” ಎಂದು ಬರೆದಿದ್ದಾರೆ.

ಸಾಕ್ಷಿ ಅವರ ಮಗ ದಕ್ಷ ಮಾನಸಿಕ ಅಸ್ವಸ್ಥನಾಗಿದ್ದು, ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದ. ಇದರಿಂದಾಗಿ ಶಾಲೆಗೂ ಹೋಗುತ್ತಿರಲಿಲ್ಲ. ವಿಪರೀತ ಔಷಧ ಸೇವಿಸಬೇಕಿತ್ತು. ಇದರಿಂದ ಸಾಕ್ಷಿ ಬಹಳ ನೊಂದಿದ್ದಳು. ತನ್ನ ಕಷ್ಟವನ್ನು ನೆರೆಯವರೊಂದಿಗೆ ಹೇಳಿಕೊಳ್ಳುತ್ತಿದ್ದಳು ಎಂದು ಪೊಲೀಸರು ವಿವರಿಸಿದ್ದಾರೆ.

ಸಾಕ್ಷಿಯ ಗಂಡ ದರ್ಪಣ್ ಚಾವ್ಲಾ ಅವರು ಚಾರ್ಟೆಡ್‌ ಅಕೌಂಟೆಂಟ್ ಆಗಿದ್ದು, ಘಟನೆ ವೇಳೆ ಅಪಾರ್ಟ್ಮೆಂಟ್‌ನ ಇನ್ನೊಂದು ಕೋಣೆಯಲ್ಲಿದ್ದರು. ಹಠಾತ್ ಕಿರುಚಾಟ ಕೇಳಿಸಿದ ಬಳಿಕ ಅವರಿಗೆ ಘಟನೆ ಬಗ್ಗೆ ಗೊತ್ತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...