ತಿರುಪತಿ ಲಡ್ಡು ವಿವಾದ: ಸಿಬಿಐ ಒಳಗೊಂಡ ಎಸ್‌ಐಟಿ ತಂಡದಿಂದ ತನಿಖೆಗೆ ಸುಪ್ರೀಂ ಆದೇಶ

Date:

ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬ ಬಳಸಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಬಿಐ ಒಳಗೊಂಡ ಐವರು ತಂಡದಿಂದ ಸ್ವತಂತ್ರ ಎಸ್‌ಐಟಿ ತನಿಖೆಗೆ ಆದೇಶಿಸಿದೆ.

- Advertisement -

ನಮ್ಮ ಆದೇಶವನ್ನು ರಾಜ್ಯ ಎಸ್‌ಐಟಿ ಸದಸ್ಯರ ಸ್ವತಂತ್ರ ಹಾಗೂ ನ್ಯಾಯಸಮ್ಮತ ವಿಚಾರಣೆಗೆ ಅನುಮಾನ ವ್ಯಕ್ತಪಡಿಸುವ ರೀತಿಯಲ್ಲಿ ಅರ್ಥೈಸಬಾರದು. ಕೋಟ್ಯಂತರ ಜನರ ನಂಬಿಕೆಗಳು ಹಾಗೂ ಭಕ್ತಿಯನ್ನು ಸಮಾಧಾನಪಡಿಸುವುದಕ್ಕಾಗಿ ನಾವು ಸಮಿತಿಯನ್ನು ರಚಿಸುತ್ತಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಕೆ ವಿ ವಿಶ್ವನಾಥನ್‌ ಅವರ ಪೀಠ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸುಪ್ರೀಂ ಕೋರ್ಟ್ ಆದೇಶಿಸುತ್ತಿರುವ ಎಸ್‌ಐಟಿ ತಂಡದಲ್ಲಿ ಸಿಬಿಐನಿಂದ ನಾಮ ನಿರ್ದೇಶನಗೊಂಡ ಇಬ್ಬರು ಅಧಿಕಾರಿಗಳು, ಆಂಧ್ರ ಪ್ರದೇಶ ಪೊಲೀಸ್‌ನ ಇಬ್ಬರು ಅಧಿಕಾರಿಗಳು, ಆಹಾರ ಗುಣಮಟ್ಟ ಸಂಸ್ಥೆಯ ಹಿರಿಯ ಅಧಿಕಾರಿ ತಂಡದಲ್ಲಿರುತ್ತಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಸೆ.30 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಪೀಠವು, ದೇವರನ್ನು ರಾಜಕೀಯದಿಂದ ದೂರವಿಡಬೇಕೆಂದು ಅಭಿಪ್ರಾಯಪಟ್ಟಿತ್ತು. ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಆಡಳಿತದಲ್ಲಿ ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಹಾಲಿ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ಎಲ್ಲಡೆ ವಿವಾದಕ್ಕೆ ಕಾರಣವಾಗಿತ್ತು.

ಲಡ್ಡು ಪ್ರಸಾದದ ಬಗ್ಗೆ ರಾಜಕೀಯ ಆರೋಪ, ಪ್ರತ್ಯಾರೋಪದ ಬಗ್ಗೆ ನ್ಯಾಯಾಲಯವನ್ನು ವೇದಿಕೆ ಮಾಡಿಕೊಳ್ಳಲು ಅನುಮತಿಸುವುದಿಲ್ಲ ಎಂದು ಪೀಠವು ತನ್ನ ಆದೇಶದಲ್ಲಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...