TMC ಬ್ಯಾಂಕ್ ಖಾತೆ ಜಪ್ತಿ; ದೇವಾಲಯದ ನಿಧಿಗೆ ಯಾವಾಗ ಮುಟ್ಟುಗೋಲು?- ಡೆರೆಕ್ ಓಬ್ರಿಯನ್ ಪ್ರಶ್ನೆ

Date:

ತೃಣಮೂಲ ಕಾಂಗ್ರೆಸ್‌ನ (TMC) ಮೂರು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿರುವುದನ್ನು ಪ್ರಶ್ನಿಸಿರುವ ಟಿಎಂಸಿ ಪಶ್ಚಿಮ ಬಂಗಾಳ ರಾಜ್ಯಸಭಾ ನಾಯಕ ಡೆರೆಕ್ ಓಬ್ರಿಯನ್, ಕೇಂದ್ರ ತನಿಖಾ ಸಂಸ್ಥೆಯ ವಿರುದ್ಧ ಹರಿಹಾಯ್ದಿದ್ದಾರೆ. ಅಯೋಧ್ಯೆಯ ರಾಮಮಂದಿರದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ಪರೋಕ್ಷವಾಗಿ ಉಲ್ಲೇಖಿಸಿರುವ ಅವರು, “ಇಡಿ ಯಾವಾಗ ದೇವಾಲಯದ ನಿಧಿಯನ್ನು ಮುಟ್ಟುಗೋಲು ಹಾಕಿಕೊಳ್ಳುತ್ತದೆ?” ಎಂದು ಲೇವಡಿ ಮಾಡಿದ್ದಾರೆ.

- Advertisement -

ಟಿಎಂಸಿಯ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯೂ ಆಗಿರುವ ಡೆರೆಕ್ ಓಬ್ರಿಯನ್, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ, “ಇಡಿ ಟಿಎಂಸಿಯ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಮೂರು ಖಾತೆಗಳನ್ನು ಜಪ್ತಿ ಮಾಡಿದೆ. ಇಡಿ ಯಾವಾಗ ದೇವಾಲಯದ ನಿಧಿಯನ್ನು ಜಪ್ತಿ ಮಾಡುತ್ತದೆ?” ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಮಮಂದಿರದ ದೇಣಿಗೆ ನಿರ್ವಹಣಾ ವ್ಯವಸ್ಥೆಯಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಗಳ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ: ದಲಿತರು ಬೀದಿಗಿಳಿಯಬೇಡಿ, ಕಾನೂನು ಹೋರಾಟ ನಡೆಸಿ: ಮಾಯಾವತಿ

ನಿಧಿ ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣವೊಂದರ ತನಿಖೆಯ ಅಂಗವಾಗಿ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರಿದ 440 ಕೋಟಿ ರೂ.ಗೂ ಹೆಚ್ಚು ಮೊತ್ತದ ಮೂರು ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಬುಧವಾರ (ಜುಲೈ 8) ತಿಳಿಸಿತ್ತು.

ಈ ಕುರಿತು ಹೇಳಿಕೆ ನೀಡಿರುವ ಇಡಿ, ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 17 (1A) ಅಡಿಯಲ್ಲಿ ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. ಆಸ್ತಿಯನ್ನು ವಶಕ್ಕೆ ಪಡೆಯುವುದು ಪ್ರಾಯೋಗಿಕವಾಗಿ ಸಾಧ್ಯವಾಗದಿದ್ದಾಗ ಮತ್ತು ಆ ಆಸ್ತಿಯನ್ನು ವರ್ಗಾಯಿಸದಂತೆ ಅಥವಾ ಯಾವುದೇ ರೀತಿಯಲ್ಲಿ ದುರ್ಬಳಕೆ ಮಾಡದಂತೆ ತಡೆಯಲು ಈ ಕಾನೂನು ಅಧಿಕಾರ ನೀಡುತ್ತದೆ ಎಂದು ಸಂಸ್ಥೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...