ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಮೊಟ್ಟೆ, ಕಲ್ಲು ತೂರಾಟ

Date:

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಕಾಳಿಗಂಜ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಚೇರಿಯೊಳಗೆ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸುಮಾರು 4 ಗಂಟೆಗಳ ಕಾಲ ‘ಒತ್ತೆಪಾಳಾಗಿ’ ಇರಿಸಿಕೊಂಡು, ಬಿಜೆಪಿ ಬೆಂಬಲಿಗರು ಅವರ ಮೇಲೆ ಮೊಟ್ಟೆ ಮತ್ತು ಕಲ್ಲುಗಳನ್ನು ತೂರಿದ ಘಟನೆ ಬುಧವಾರ ನಡೆದಿದೆ. ಈ ದಾಳಿಯ ವೇಳೆ ಪೊಲೀಸರು ಕೇವಲ ಮೂಕಪ್ರೇಕ್ಷಕರಾಗಿದ್ದರು ಎಂದು ಕೃಷ್ಣನಗರ ಕ್ಷೇತ್ರದ ಸಂಸದೆಯಾಗಿರುವ ಮಹುವಾ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಟಿಎಂಸಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಮಹುವಾ ಮೊಯಿತ್ರಾ ಅವರು ಕಾಳಿಗಂಜ್‌ನಲ್ಲಿದ್ದ ಶಾಸಕರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಕಚೇರಿಯ ಹೊರಗಡೆ ಜಮಾಯಿಸಿದ ಪ್ರತಿಭಟನಾಕಾರರು ‘ಗೋ ಬ್ಯಾಕ್’ ಹಾಗೂ ‘ಕಳ್ಳರು’ ಎಂದು ಘೋಷಣೆಗಳನ್ನು ಕೂಗುತ್ತಾ, ಕಚೇರಿಯ ಕಿಟಕಿಗಳ ಮೂಲಕ ಮೊಟ್ಟೆ, ಮಣ್ಣು ಮತ್ತು ಕಲ್ಲುಗಳನ್ನು ತೂರಿದ್ದಾರೆ. ಈ ದಾಳಿಯಲ್ಲಿ ಒಂದು ಮೊಟ್ಟೆ ಸಂಸದೆಯ ಮೈಗೂ ತಗುಲಿದೆ. ಘಟನೆಗೆ ಸಂಬಂಧಿಸಿದಂತೆ ಮಹುವಾ ಅವರು ತಮ್ಮ ‘ಎಕ್ಸ್’ ಹಾಗೂ ಫೇಸ್‌ಬುಕ್ ಖಾತೆಗಳಲ್ಲಿ ಹಲವು ವಿಡಿಯೊಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಕಪ್ಪು ಬಾವುಟ ಹಿಡಿದ ಗುಂಪೊಂದು ಕಚೇರಿಯತ್ತ ದಾಳಿ ನಡೆಸುತ್ತಿರುವುದನ್ನು ಕಾಣಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

“ಇದು ಪೊಲೀಸರ ನೆರವಿನಿಂದಲೇ 4 ಗಂಟೆಗಳಿಗೂ ಹೆಚ್ಚು ಕಾಲ ನಮ್ಮ ಶಾಸಕರ ಕಚೇರಿಯೊಳಗೆ ನಡೆದ ಅನಿಯಂತ್ರಿತ ಬಿಜೆಪಿ ಗುಂಪಿನ ಹಿಂಸಾಚಾರವಾಗಿದೆ. ಪೊಲೀಸರು 4 ಗಂಟೆಗಳ ಕಾಲ ಮೌನವಾಗಿ ನೋಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಗುಂಪು ನಿಮಿಷದಿಂದ ನಿಮಿಷಕ್ಕೆ ಹೆಚ್ಚಾಗುತ್ತಲೇ ಹೋಯಿತು” ಎಂದು ಮಹುವಾ ಮೊಯಿತ್ರಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮ್ಮ ಮೇಲಿನ ಈ ಗುಂಪು ದಾಳಿಯ ನೇತೃತ್ವ ವಹಿಸಿದ್ದರು ಎನ್ನಲಾದ 16 ಮಂದಿ ಬಿಜೆಪಿ ಕಾರ್ಯಕರ್ತರ ಹೆಸರುಗಳನ್ನು ಅವರು ‘ಎಕ್ಸ್’ ಪೋಸ್ಟ್‌ನಲ್ಲಿ ನಿರ್ದಿಷ್ಟವಾಗಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR ನೆಪದಲ್ಲಿ ‘ಮತಾಧಿಕಾರದ ರಕ್ಷಕ’ ಮಾಡುತ್ತಿರುವುದು ಇದೇನಾ?

ಆದರೆ, ಪೊಲೀಸರ ನಿಷ್ಕ್ರಿಯತೆಯ ಆರೋಪವನ್ನು ಕೃಷ್ಣನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅತುಲ್ ವಿ. ಅವರು ತಳ್ಳಿಹಾಕಿದ್ದಾರೆ. “ಮಾಹಿತಿ ಸಿಕ್ಕ ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕಚೇರಿಯಿಂದ ಹೊರಡುವಂತೆ ಸಂಸದೆಗೆ ಹಲವು ಬಾರಿ ಮನವಿ ಮಾಡಿದ್ದರು. ಸಂಸದೆ ಹಾಗೂ ಪೊಲೀಸರ ನಡುವೆ ಸುದೀರ್ಘ ಚರ್ಚೆ ನಡೆದ ಬಳಿಕ, ಸಂಜೆ 6 ಗಂಟೆಯ ಸುಮಾರಿಗೆ ಅವರನ್ನು ಕಚೇರಿಯಿಂದ ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ, ಚುನಾಯಿತ ಸಂಸದೆಯ ಮೇಲಿನ ಈ ಬೆದರಿಕೆ ತಂತ್ರದ ದಾಳಿ ಹಾಗೂ ಪೊಲೀಸರ ಮೌನವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ, ದುರ್ಗಾಪುರದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಟಿಎಂಸಿ ರಾಜ್ಯಸಭಾ ಸಂಸದೆ ದೋಲಾ ಸೇನ್ ಅವರಿಗೂ ಬಿಜೆಪಿ ಕಾರ್ಯಕರ್ತರು ಎನ್ನಲಾದ ಗುಂಪೊಂದು ಕಪ್ಪು ಬಾವುಟ ಪ್ರದರ್ಶಿಸಿ ‘ಗೋ ಬ್ಯಾಕ್’ ಘೋಷಣೆ ಕೂಗಿದ ಮತ್ತೊಂದು ಪ್ರತ್ಯೇಕ ಘಟನೆಯೂ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...