ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ‘ಮಹಾಭಿಯೋಗ’ ಮಂಡನೆಗೆ ಟಿಎಂಸಿ ಚಿಂತನೆ

Date:

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೊಳ್ಳುತ್ತಿರುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಮಹಾಭಿಯೋಗ ಪ್ರಸ್ತಾವವನ್ನು ಮಂಡಿಸಲು ಚಿಂತಿಸುತ್ತಿದೆ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಕಲ್ಯಾಣ್ ಬ್ಯಾನರ್ಜಿ, “ನಾವು ಸಿಇಸಿ ವಿರುದ್ಧ ಮಹಾಭಿಯೋಗ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಆಯೋಗವು ಎಸ್‌ಐಆರ್‌ ಪ್ರಕ್ರಿಯೆಯನ್ನು ನಡೆಸುತ್ತಿರುವ ರೀತಿ ಸರಿಯಿಲ್ಲ. ಇದು ದೇಶದ ಎಲ್ಲ ನಾಗರಿಕರ ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರಲಿದೆ. ಯಾರಿಗೂ ಮತದಾನದ ಹಕ್ಕು ಸಿಗಬಾರದು ಎಂಬ ಉದ್ದೇಶವನ್ನು ಅವರು ಹೊಂದಿದ್ದಂತಿದೆ. ಈ ‘ದುಷ್ಪ್ರೇರಣೆ’ಯ ಕಾರಣಕ್ಕೆ ನಾವು ಮಹಾಭಿಯೋಗ ಮಂಡನೆಗೆ ಚಿಂತಿಸುತ್ತಿದ್ದು, ಇತರ ಪಕ್ಷಗಳೊಂದಿಗೂ ಚರ್ಚಿಸುತ್ತಿದ್ದೇವೆ,” ಎಂದು ಗಂಭೀರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಸಿಇಸಿ ಜ್ಞಾನೇಶ್ ಕುಮಾರ್ ಹಾಗೂ ಇತರ ಇಬ್ಬರು ಆಯುಕ್ತರನ್ನು ಭೇಟಿಯಾಗಿ ಎಸ್‌ಐಆರ್‌ ವಿಷಯದ ಕುರಿತು ಚರ್ಚಿಸಿದ್ದರು. ಸಭೆಯ ನಂತರ ಅವರು ಅಸಮಾಧಾನದಿಂದ ಹೊರಬಂದಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಇದ್ರೆ ಎಲ್ಲವೂ ಸಾಧ್ಯ- ಇದು ಬಿಜೆಪಿ ಮಂತ್ರ!

​ಅದರ ಮರುದಿನ, ಅಂದರೆ ಮಂಗಳವಾರ, ಎಸ್‌ಐಆರ್‌ ಪ್ರಕ್ರಿಯೆಯಿಂದ ತೊಂದರೆಗೊಳಗಾದ ‘ಸಂತ್ರಸ್ತರ’ ಜತೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ, “ನನ್ನ ಹಿಂದೆ ಕುಳಿತಿರುವವರು ಎಸ್‌ಐಆರ್‌ ಸಂತ್ರಸ್ತರು. ನಾನು ಲಕ್ಷಾಂತರ ಜನರನ್ನು ಇಲ್ಲಿಗೆ ಕರೆಸಬಹುದಿತ್ತು. ಸಂತ್ರಸ್ತರಿಗೆ ತಮ್ಮ ಪಕ್ಷ ಮಂಡಿಸಲು ಆಯೋಗ ಅವಕಾಶ ನೀಡುತ್ತಿಲ್ಲ,” ಎಂದು ಕಿಡಿಕಾರಿದರು.

ಚುನಾವಣೆಗೆ ಸಿದ್ಧವಾಗುತ್ತಿರುವ ನಾಲ್ಕು ರಾಜ್ಯಗಳ ಪೈಕಿ, ಕೇವಲ ವಿಪಕ್ಷ ಆಡಳಿತ ಇರುವ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಲ್ಲಿ ಮಾತ್ರ ‘ಎಸ್‌ಐಆರ್‌’ ನಡೆಸಲಾಗುತ್ತಿದೆ. ಆದರೆ, ಬಿಜೆಪಿ ಆಡಳಿತ ಇರುವ ಅಸ್ಸಾಂನಲ್ಲಿ ಏಕೆ ‘ಎಸ್‌ಐಆರ್‌’ ಬದಲಿಗೆ ಬೇರೆ ರೀತಿಯ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಮಮತಾ ಪ್ರಶ್ನಿಸಿದರು.

ಈ ರಾಜ್ಯಗಳಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ​ಪಶ್ಚಿಮ ಬಂಗಾಳದ ಎಸ್‌ಐಆರ್‌ ಪ್ರಕ್ರಿಯೆ ವಿರುದ್ಧ ಟಿಎಂಸಿ ಸಂಸದರು ಸೇರಿದಂತೆ ಹಲವರು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸದ್ಯ ವಿಚಾರಣೆ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ‘ಸಂಜೆ ನ್ಯಾಯಾಲಯ’: ದೆಹಲಿ, ಬಿಹಾರ, ಆಂಧ್ರದಲ್ಲಿ ಪ್ರಾಯೋಗಿಕ ಜಾರಿ

ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ...

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ – 3 ಸಿಆರ್‌ಪಿಎಫ್‌ ಯೋಧರಿಗೆ ಗಾಯ

ಭಯೋತ್ಪಾದಕರ ದಾಳಿಗೆ ಮೂರು ಸಿಆರ್‌ಫಿಎಫ್‌ ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ...

ದೀಪಾವಳಿ ಪಟಾಕಿ ಸಮರ್ಥಿಸಿಕೊಂಡ ಸಿಎಂ ಯೋಗಿ; ಮಾಲಿನ್ಯದ ಕಾಳಜಿಗಿಂತ ಪಟಾಕಿ ಮುಖ್ಯವೇ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...