ಟಿಎಂಸಿ ಬಂಡಾಯ ಸಂಸದರ ಅನರ್ಹತೆ ಪ್ರಕರಣ: ತ್ವರಿತ ನಿರ್ಧಾರಕ್ಕೆ ಲೋಕಸಭಾ ಸ್ಪೀಕರ್‌ಗೆ ಸುಪ್ರೀಂ ಕಿವಿಮಾತು

Date:

ತ್ರಿಪುರಾ ಮೂಲದ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (ಎನ್‌ಸಿಪಿಐ – NCPI) ಸೇರ್ಪಡೆಯಾಗಿರುವ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 20 ಬಂಡಾಯ ಸಂಸದರ ಅನರ್ಹತೆ ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ‘ತ್ವರಿತ’ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಿವಿಮಾತು ಹೇಳಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ವಿಚಾರದ ವಿಚಾರಣೆ ನಡೆಸಿತು. “ಲೋಕಸಭಾ ಸ್ಪೀಕರ್ ಅವರಿಗೆ ನಾವು ನೇರ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂಬ ಅರಿವು ನಮಗಿದೆ. ಆದರೆ, ಈ ಪ್ರಕರಣವನ್ನು ಆದಷ್ಟು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಅವರಿಗೆ ನೆನಪಿಸಲು ನಾವು ಬಯಸುತ್ತೇವೆ” ಎಂದು ಪೀಠವು ಸ್ಪಷ್ಟಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಅನರ್ಹತೆ ಕೋರಿ ಈ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ಆರಂಭವಾಗುತ್ತಿದ್ದಂತೆ, ಟಿಎಂಸಿ ನಾಯಕನ ಪರ ವಾದ ಮಂಡಿಸಿದ ಹಿರಿಯ ವಕೀಲ ಕಲ್ಯಾಣ್ ಬ್ಯಾನರ್ಜಿ, “ಬಂಡಾಯ ಸಂಸದರಿಗೆ ಸ್ಪೀಕರ್ ಕಚೇರಿಯಿಂದ ನೋಟಿಸ್ ನೀಡಿದ್ದರೂ ಅವರು ಇನ್ನೂ ತಮ್ಮ ಉತ್ತರವನ್ನು ಸಲ್ಲಿಸಿಲ್ಲ. ಬದಲಾಗಿ ಮತ್ತಷ್ಟು ಕಾಲಾವಕಾಶ ಕೋರಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಸ್ಪೀಕರ್ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ, “ಅನರ್ಹತೆ ಅರ್ಜಿಗಳ ಕುರಿತು ಸ್ಪೀಕರ್ ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ. ಸ್ಪೀಕರ್ ಅವರಿಗೆ ಏನು ಮಾಡಬೇಕೆಂಬುದು ತಿಳಿದಿದೆ ಹಾಗೂ ಪ್ರಕರಣದ ಗಂಭೀರತೆಯ ಅರಿವೂ ಅವರಿಗಿದೆ” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಪ್ರಕರಣದ ಸ್ವರೂಪವೇ ಶೀಘ್ರ ವಿಲೇವಾರಿಯನ್ನು ಬೇಡುತ್ತದೆ. ನಾವು ಕೇವಲ ತ್ವರಿತ ಇತ್ಯರ್ಥದ ಬಗ್ಗೆ ಅವರಿಗೆ ನೆನಪಿಸುತ್ತಿದ್ದೇವೆಯಷ್ಟೆ” ಎಂದರು. ಆಗ ಮೆಹ್ತಾ ಅವರು, “ಒಂದು ಸಾಂವಿಧಾನಿಕ ಹುದ್ದೆಯಲ್ಲಿರುವವರು ಮತ್ತೊಂದು ಸಾಂವಿಧಾನಿಕ ಹುದ್ದೆಯಲ್ಲಿರುವವರಿಗೆ ಅವರ ಸಾಂವಿಧಾನಿಕ ಕರ್ತವ್ಯದ ಬಗ್ಗೆ ನೆನಪಿಸಬಹುದೇ?” ಎಂದು ಪ್ರಶ್ನಿಸಿದರಲ್ಲದೆ, ಪ್ರಸ್ತುತ ಸಂದರ್ಭದಲ್ಲಿ ಸ್ಪೀಕರ್‌ಗೆ ಕಾಲಮಿತಿ ನಿಗದಿಪಡಿಸಬಾರದು ಎಂದು ವಾದಿಸಿದರು.

ಈ ಹಂತದಲ್ಲಿ ಮಾತನಾಡಿದ ನ್ಯಾಯಮೂರ್ತಿ ಬಾಗ್ಚಿ, “ಸಂವಿಧಾನದ 10ನೇ ಶೆಡ್ಯೂಲ್ (ಪಕ್ಷಾಂತರ ನಿಷೇಧ ಕಾಯ್ದೆ) ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ನಾವು ಕೇವಲ ತ್ವರಿತ ನಿರ್ಧಾರಕ್ಕಾಗಿ ಪ್ರಾಧಿಕಾರಕ್ಕೆ ನೆನಪಿಸುತ್ತಿದ್ದೇವೆ. ನಾವು ಕಡ್ಡಾಯ ನಿರ್ದೇಶನಗಳನ್ನು ನೀಡದಿರಬಹುದು, ಆದರೆ 2020ರ ಕೇಶಮ್ ಮೇಘಚಂದ್ರ ಸಿಂಗ್ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಿ” ಎಂದರು. 2020ರ ‘ಕೇಶಮ್ ಮೇಘಚಂದ್ರ ಸಿಂಗ್ ಮತ್ತು ಮಣಿಪುರ ವಿಧಾನಸಭೆ ಸ್ಪೀಕರ್’ ಪ್ರಕರಣದಲ್ಲಿ, ಸ್ಪೀಕರ್ ಅವರು ಪಕ್ಷಾಂತರ ಪ್ರಕರಣಗಳನ್ನು ಸಮಂಜಸವಾದ ಸಮಯದಲ್ಲಿ, ಅಂದರೆ ಆದ್ಯತೆಯ ಮೇರೆಗೆ ಮೂರು ತಿಂಗಳೊಳಗೆ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ಈ ತೀರ್ಪನ್ನು ಉಲ್ಲೇಖಿಸಿ, ನಿರ್ಧಾರದ ಕಾಲಮಿತಿಯನ್ನು ತಿಳಿಸುವಂತೆ ನ್ಯಾಯಮೂರ್ತಿ ಬಾಗ್ಚಿ ಅವರು ತುಷಾರ್ ಮೆಹ್ತಾ ಅವರನ್ನು ಕೇಳಿದರು. ಆದರೆ ಇದಕ್ಕೆ ನಿರಾಕರಿಸಿದ ಮೆಹ್ತಾ, “ನಾನು ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ನಿಗಾವಹಿಸುವುದು ಸಮರ್ಥನೀಯವಲ್ಲ. ಸ್ಪೀಕರ್ ಅವರ ವೇಳಾಪಟ್ಟಿಯನ್ನು ನಿಗದಿಪಡಿಸದಂತೆ ನಾನು ಒತ್ತಾಯಿಸುತ್ತೇನೆ” ಎಂದರು.

ಇದೇ ವೇಳೆ, ಬಂಡಾಯ ಸಂಸದರು ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೇಳಿದ್ದನ್ನು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಮುಂದೂಡಿತು. ಸಂವಿಧಾನದ ಪಕ್ಷಾಂತರ ನಿಷೇಧ ನಿಯಮಗಳ ಅಡಿಯಲ್ಲಿ ಸಂಸದರ ಅನರ್ಹತೆ ಕುರಿತು ಸ್ಪೀಕರ್ ತ್ವರಿತವಾಗಿ ನಿರ್ಧರಿಸುವಂತೆ ಕೋರಿ ಅಭಿಷೇಕ್ ಬ್ಯಾನರ್ಜಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಜುಲೈ 27ರಂದು ಲಿಖಿತ ಜ್ಞಾಪನೆ ಕಳುಹಿಸಿದ ಬಳಿಕ, ಆಗಸ್ಟ್ 12ರಂದು ಅವರು ಸ್ಪೀಕರ್ ಬಿರ್ಲಾ ಅವರನ್ನು ಖುದ್ದಾಗಿ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದರು.

ಲೋಕಸಭೆಯ 20 ಟಿಎಂಸಿ ಸಂಸದರು ತ್ರಿಪುರಾ ಮೂಲದ ‘ಎನ್‌ಸಿಪಿಐ’ ಪಕ್ಷವನ್ನು ಸೇರ್ಪಡೆಯಾಗುವುದಾಗಿ ಅಥವಾ ವಿಲೀನಗೊಳ್ಳುವುದಾಗಿ ಘೋಷಿಸಿ, ಸದನದಲ್ಲಿ ಪ್ರತ್ಯೇಕ ಮಾನ್ಯತೆ ಕೋರಿದ ನಂತರ ಟಿಎಂಸಿ ಸಂಸದೀಯ ಪಕ್ಷದಲ್ಲಿ ಈ ಬಂಡಾಯ ಭುಗಿಲೆದ್ದಿತ್ತು. ತರುವಾಯ ಬಂಡಾಯ ಸಂಸದರನ್ನು ಸಂಸತ್ತಿನಲ್ಲಿ ‘ಎನ್‌ಸಿಪಿಐ ಗುಂಪು’ ಎಂದು ಪರಿಗಣಿಸಲಾಗಿದ್ದು, ಅವರು ಎನ್‌ಡಿಎ (NDA) ಸಂಸದೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಟಿಎಂಸಿ ಚಿಹ್ನೆಯಡಿ ಆಯ್ಕೆಯಾಗಿರುವ ಈ ಸಂಸದರು ಬೇರೆ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿರುವುದು, ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದಂತಾಗುತ್ತದೆ; ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಇವರನ್ನು ಅನರ್ಹಗೊಳಿಸಬೇಕು ಎಂಬುದು ಟಿಎಂಸಿ ವಾದವಾಗಿದೆ. ಆದರೆ, ಬಂಡಾಯ ಬಣವು ಇದು ತಮ್ಮ ‘ಕಾನೂನುಬದ್ಧ ವಿಲೀನ’ ಎಂದು ಪ್ರತಿಪಾದಿಸಿದೆ. ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯಲ್ಲಿ ಲೋಕಸಭಾ ಸ್ಪೀಕರ್, ಸೆಕ್ರೆಟರಿ ಜನರಲ್ ಜೊತೆಗೆ ಅನರ್ಹತೆ ಎದುರಿಸುತ್ತಿರುವ ಈ ಕೆಳಗಿನ 20 ಸಂಸದರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾಕೋಲಿ ಘೋಷ್ ದಸ್ತಿದಾರ್, ಸುದೀಪ್ ಬಂಡೋಪಾಧ್ಯಾಯ, ಶತಾಬ್ದಿ ರಾಯ್, ಪ್ರಸೂನ್ ಬ್ಯಾನರ್ಜಿ, ರಚನಾ ಬ್ಯಾನರ್ಜಿ, ಜಗದೀಶ್ ಚಂದ್ರ ಬರ್ಮಾ ಬಸುನಿಯಾ, ಪಾರ್ಥ ಭೌಮಿಕ್, ಅರೂಪ್ ಚಕ್ರವರ್ತಿ, ಅಧಿಕಾರಿ ದೀಪಕ್ ದೇವ್, ಸಾಯನಿ ಘೋಷ್, ಬಾಪಿ ಹಲ್ದಾರ್, ಎಂಡಿ ಅಬು ತಾಹೇರ್ ಖಾನ್, ಕಾಳಿಪಾದ ಸೊರೇನ್ ಖೇರ್ವಾಲ್, ಅಸಿತ್ ಕುಮಾರ್ ಮಾಲ್, ಜೂನ್ ಮಾಲಿಯಾ, ಮಿಟಾಲಿ ಬಾಗ್, ಖಲೀಲುರ್ ರೆಹಮಾನ್, ಮಾಲಾ ರಾಯ್, ಶರ್ಮಿಳಾ ಸರ್ಕಾರ್ ಮತ್ತು ಯೂಸುಫ್ ಪಠಾಣ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ಮತ್ತು ಅಕ್ಟೋಬರ್ 1ರಂದು...

ಸಿಇಸಿ ಗ್ಯಾನೇಶ್ ಕುಮಾರ್ ‘ಏಕವ್ಯಕ್ತಿ ಸರ್ವಾಧಿಕಾರಿ’: ಮುಖ್ಯ ಚುನಾವಣೆ ಆಯುಕ್ತರ ವಜಾಕ್ಕೆ ವಿಪಕ್ಷಗಳ ಆಗ್ರಹ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ...

ಕೊಪ್ಪಳ | ಡಿಜೆ, ಪಟಾಕಿಗೆ ಗುಡ್‌ ಬೈ: ರಸ್ತೆ, ಬಾವಿ, ಶಾಲೆ ಅಂದಗೊಳಿಸಿದ ಗಣೇಶ ಮಂಡಳಿ ಯುವಕರು!

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಎಂದಾಕ್ಷಣ ಡಿಜೆ ಸದ್ದು, ಪಟಾಕಿಗಳ...

ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಕುರಿತು ಸುಪ್ರೀಂ ಭಿನ್ನಮತದ ತೀರ್ಪು

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ...