ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚುನಾವಣಾ ನೀತಿ ಸಂಹಿತೆ ಆರೋಪದಡಿ ಪ್ರಕರಣ ದಾಖಲಾಗಿದೆ. ಚುನಾವಣಾ ಪ್ರಚಾರ ಸಮಯ ಉಲ್ಲಂಘನೆಗಾಗಿ ಅಣ್ಣಾಮಲೈ ಹಾಗೂ ಇತರ ಕೆಲವು ಪಕ್ಷದ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಲಾಗಿದೆ.
ಕೊಯಂಬತ್ತೂರಿನ ಅವರಮ್‌ಪಾಳಯಂ ಪ್ರದೇಶದಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿದ ಸಮಯಕ್ಕಿಂತಲೂ ಹೆಚ್ಚಿನ ಸಮಯ ಪ್ರಚಾರ ಮಾಡಿದ್ದಕ್ಕಾಗಿ ಡಿಎಂಕೆ ಹಾಗೂ ಇದರ ಮೈತ್ರಿ ಪಕ್ಷದ ಕಾರ್ಯಕರ್ತರು ಏ.11ರ ರಾತ್ರಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಜಗಳ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಡಿಎಂಕೆ ಕಾರ್ಯಕರ್ತ ಪೀಲಮೇಡು ಅವರು ಐಪಿಸಿ ಸೆಕ್ಷನ್‌ಗಳ ವಿವಿಧ ಕಾಯ್ದೆಯಡಿ ದೂರು ದಾಖಲಿಸಿದ್ದರು. ಡಿಎಂಕೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಯ ವಿರುದ್ಧ ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು
ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಕೊಯಂಬತ್ತೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏ.19ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಇಂಡಿಯಾ ಮೈತ್ರಿಕೂಟದ ಪಕ್ಷಗಳಾದ ಡಿಎಂಕೆ 21, ಕಾಂಗ್ರೆಸ್ 9 ಸೇರಿದಂತೆ ಇತರ ಮಿತ್ರ ಪಕ್ಷಗಳು ಎಲ್ಲ 39 ಸ್ಥಾನಗಳಲ್ಲಿ ಸ್ಪರ್ಧಿಸಿವೆ.
ಅದೇ ರೀತಿ ಎನ್‌ಡಿಎ ಮಿತ್ರ ಪಕ್ಷಗಳಾದ ಬಿಜೆಪಿ 19, ಪಿಎಂಕೆ 10 ಕ್ಷೇತ್ರ ಸೇರಿ 39 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ 32 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
