ತಮಿಳುನಾಡು: 50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ, ಸಿಎಂ ವಿಜಯ್ ಘೋಷಣೆ

Date:

ಸಹಕಾರ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆದಿದ್ದ ತಮಿಳುನಾಡಿನ ಅತಿ ಸಣ್ಣ ರೈತರ 50,000 ರೂಪಾಯಿವರೆಗಿನ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್‌ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ಒಟ್ಟು 2,044.46 ಕೋಟಿ ರೂಪಾಯಿ ಹೊರೆಯಾಗಲಿದ್ದು, ಒಟ್ಟು 14,22,555 ರೈತರಿಗೆ ಅನುಕೂಲವಾಗಲಿದೆ.

- Advertisement -

ಮೇ 1, 2025 ರಿಂದ ಫೆಬ್ರವರಿ 28, 2026 ರ ನಡುವೆ ಸಹಕಾರ ಬ್ಯಾಂಕ್‌ಗಳ ಮೂಲಕ ಸಾಲ ಪಡೆದ ರೈತರು ಈ ಯೋಜನೆಗೆ ಒಳಪಡಲಿದ್ದಾರೆ. ಈ ಯೋಜನೆಯಡಿ ಅತಿ ಸಣ್ಣ ರೈತರ 50,000 ರೂಪಾಯಿವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ ಆಗಲಿದೆ. ಹಾಗೆಯೇ, ಸಣ್ಣ ರೈತರಿಗೆ ಇದೇ ಮೊತ್ತದ ಅಂದರೆ 50,000 ರೂಪಾಯಿವರೆಗಿನ ಸಾಲದ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ಸಿಗಲಿದೆ. ಮುಂದಿನ ಕೃಷಿ ಹಂಗಾಮಿಗೆ ಮುನ್ನ ರೈತರ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವಾಲಯದಲ್ಲಿ ಕೃಷಿ ಸಚಿವ ಎಂ. ವಿನೋದ್, ಸಹಕಾರ ಸಚಿವ ವಿ. ಗಾಂಧಿರಾಜ್, ಹಣಕಾಸು ಸಚಿವ ಎನ್. ಮೇರಿ ವಿಲ್ಸನ್ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಪರಿಶೀಲನಾ ಸಭೆಯ ಬಳಿಕ ಸಿಎಂ ವಿಜಯ್ ಈ ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ‘ಸ್ಮಾರ್ಟ್ ಬಾರ್ಡರ್’ಯೋಜನೆ : ಕೇಂದ್ರದ ಸರಣಿ ಯೋಜನೆಗಳ ನಡುವೆಯೂ ನಿಲ್ಲದ ನುಸುಳುವಿಕೆ

50,000 ರೂಪಾಯಿಗಿಂತ ಹೆಚ್ಚಿನ ಸಾಲ ಪಡೆದ ರೈತರಿಗೂ ಅನುಕೂಲವಾಗುವಂತೆ ಹಂತಹಂತವಾಗಿ ರಿಯಾಯಿತಿ ನೀಡುವ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ. ಇದರ ಅನ್ವಯ 50,001 ರಿಂದ 60,000 ರೂಪಾಯಿವರೆಗಿನ ಸಾಲಕ್ಕೆ 40,000 ರೂಪಾಯಿ, 60,001 ರಿಂದ 70,000 ರೂಪಾಯಿವರೆಗಿನ ಸಾಲಕ್ಕೆ 30,000 ರೂಪಾಯಿ ಹಾಗೂ 70,001 ರಿಂದ 80,000 ರೂಪಾಯಿವರೆಗಿನ ಸಾಲಕ್ಕೆ 20,000 ರೂಪಾಯಿ ಮನ್ನಾ ಆಗಲಿದೆ. ಅದೇ ರೀತಿ 80,001 ರಿಂದ 1 ಲಕ್ಷ ರೂಪಾಯಿವರೆಗಿನ ಸಾಲಕ್ಕೆ 10,000 ರೂಪಾಯಿ ಹಾಗೂ 1 ಲಕ್ಷಕ್ಕೂ ಮೇಲ್ಪಟ್ಟು ಸಾಲ ಪಡೆದ ದೊಡ್ಡ ರೈತರಿಗೂ 5,000 ರೂಪಾಯಿ ಮನ್ನಾ ಸೌಲಭ್ಯ ದೊರೆಯಲಿದೆ.

ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ರೈತರಿಗೆ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಬೆಳೆ ಸಾಲ ಮನ್ನಾ ಕೂಡ ಒಂದಾಗಿತ್ತು. ಈ ಯೋಜನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ ಹಾಗೂ ಸಚಿವ ಸಿ.ಟಿ.ಆರ್. ನಿರ್ಮಲ್ ಕುಮಾರ್, ರಾಜ್ಯದಲ್ಲಿ ಒಟ್ಟು 16.92 ಲಕ್ಷ ರೈತರು ಕೃಷಿ ಸಾಲ ಪಡೆದಿದ್ದು, ಆ ಪೈಕಿ 14.22 ಲಕ್ಷ ರೈತರ ಸಾಲವನ್ನು ಇಂದು ಮನ್ನಾ ಮಾಡುವ ಮೂಲಕ ನಮ್ಮ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಸರ್ಕಾರ ಈಡೇರಿಸಿದೆ ಎಂದು ತಿಳಿಸಿದ್ದಾರೆ.

ಆರ್‌ಬಿಐ ನವೆಂಬರ್ 2025ರ ಮಾರ್ಗಸೂಚಿಗಳ ಅನ್ವಯ, 45 ರಿಂದ 60 ದಿನಗಳ ಒಳಗೆ ಸರ್ಕಾರವು ಮನ್ನಾ ಮಾಡಿದ ಸಂಪೂರ್ಣ ಮೊತ್ತವನ್ನು ಬ್ಯಾಂಕ್‌ಗಳಿಗೆ ಪಾವತಿಸಲಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...