ತಮಿಳುನಾಡು ಸರ್ಕಾರದಿಂದ ‘ಆಲ್ಟ್‌ ನ್ಯೂಸ್‌’ ಪತ್ರಕರ್ತ ಮೊಹಮ್ಮದ್ ಝುಬೇರ್‌ಗೆ ಕೋಮು ಸೌಹಾರ್ದ ಪ್ರಶಸ್ತಿ

Date:

Advertisements

ಫ್ಯಾಕ್ಟ್‌ ಚೆಕ್ ಹಾಗೂ ಜವಾಬ್ದಾರಿಯುತ ವರದಿ ಮಾಡುವ ಮೂಲಕ ಕೋಮು ಸೌಹಾರ್ದಕ್ಕೆ ಶ್ರಮಿಸುತ್ತಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ಅವರಿಗೆ ತಮಿಳುನಾಡಿನ ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ‘ಕೋಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ ನೀಡಿ ಗೌರವಿಸಿದೆ.

ಮೂಲತಃ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ಮೊಹಮ್ಮದ್ ಝುಬೇರ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟ್ಯಾಲಿನ್ ಅವರು ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

‘ಕೋಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ಯನ್ನು ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ಸಲ್ಲಿಸಿದ ಅತ್ಯುತ್ತಮ ಸೇವೆಗಳಿಗಾಗಿ ತಮಿಳುನಾಡಿಗೆ ಸೇರಿದ ವ್ಯಕ್ತಿಗೆ ನೀಡುವ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ರೂ.25,000 ನಗದು ಬಹುಮಾನ, ಪದಕ ಮತ್ತು ಪ್ರಮಾಣ ಪತ್ರವನ್ನು ಒಳಗೊಂಡಿದೆ.

Advertisements

ಝುಬೇರ್ ಅವರು ಮೂಲತಃ ತಮಿಳುನಾಡಿನವರಾದ ಹಿನ್ನೆಲೆಯಲ್ಲಿ ಈ ವರ್ಷ ಅವರನ್ನು ತಮಿಳುನಾಡು ಸರ್ಕಾರವು ಆಯ್ಕೆ ಮಾಡಿತ್ತು.

ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರು ದಾಳಿಗೆ ಒಳಗಾಗುತ್ತಿದ್ದಾರೆ ಎಂದು ಬಲಪಂಥೀಯ ಸಂಘಟನೆಯ ಕೆಲವರು ಸುಳ್ಳು ಹೇಳಿಕೆ ಹರಡಿದ್ದರು. ಇದು ವೈರಲ್ ಆಗಿತ್ತು. ಈ ಬಗ್ಗೆ ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್ ನಡೆಸಿದಾಗ ಅದು ಸುಳ್ಳು ಎಂಬುದು ಪತ್ತೆಯಾಗಿತ್ತು.

ತಮಿಳುನಾಡಿನಲ್ಲಿ ಉತ್ತರ ಭಾರತದ ಕಾರ್ಮಿಕರ ಮೇಲೆ ಹಲ್ಲೆ ಮತ್ತು ಕೊಲೆ ಮಾಡಲಾಗುತ್ತಿದೆ ಎಂಬ ವದಂತಿಗಳನ್ನು ಕಳೆದ 2023ರ ಮಾರ್ಚಿನಲ್ಲಿ ಹರಡಲಾಗಿತ್ತು. ಹಿಂಸಾಚಾರಕ್ಕೆ ಸಂಬಂಧವಿಲ್ಲದ ವಿಡಿಯೋಗಳನ್ನು ಹರಡಿದ ಮತ್ತು ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರು ದಾಳಿಗೆ ಒಳಗಾಗಿದ್ದಾರೆ ಎಂದು ತಪ್ಪಾಗಿ ಹೇಳಿದ್ದಕ್ಕಾಗಿ ಬಿಜೆಪಿ ವಕ್ತಾರ, ಹಿಂದಿ ಪತ್ರಿಕೆಗಳಾದ ದೈನಿಕ್ ಭಾಸ್ಕರ್, ಬಲಪಂಥೀಯ ಪ್ರಚಾರ ವೆಬ್‌ಸೈಟ್ ಆಫ್ ಇಂಡಿಯಾ, ಯೂಟ್ಯೂಬರ್‌ಗಳು ಮತ್ತು ಟ್ವಿಟರ್ ಬಳಕೆದಾರರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಮೊಹಮ್ಮದ್ ಝುಬೇರ್ ನಿರಂತರವಾಗಿ ಬಿಜೆಪಿ ಹಾಗೂ ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  2022ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರಿಗೆ ನ್ಯಾಯಾಲಯವು ಜುಲೈ 2022ರಲ್ಲಿ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X