ರಂಜಾನ್ ವೇಳೆ ಗಾಜಾದ ಮೇಲೆ ಬಾಂಬ್ ಹಾಕಬೇಡಿ ಎಂದು ಹೇಳಿದ್ದೆ ಎಂದ ಮೋದಿ: ನೆಟ್ಟಿಗರಿಂದ ತರಾಟೆ

Date:

ಪ್ರಧಾನಿ ನರೇಂದ್ರ ಮೋದಿ ಮಾಧ್ಯಮವೊಂದಕ್ಕೆ ಇಸ್ರೇಲ್‌ – ಗಾಜಾದ ಬಗ್ಗೆ ನೀಡಿರುವ ಹೇಳಿಕೆಯೊಂದು ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

”ಅದು ರಂಜಾನ್‌ ತಿಂಗಳ ಸಂದರ್ಭವಾಗಿತ್ತು. ನಾನು ನನ್ನ ವಿಶೇಷ ರಾಯಭಾರಿಯನ್ನು ಇಸ್ರೇಲ್‌ಗೆ ಕಳುಹಿಸಿ ಅಲ್ಲಿನ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರಿಗೆ ರಂಜಾನ್‌ನ ಸಂದರ್ಭದಲ್ಲಿ ಗಾಜಾದ ಮೇಲೆ ಬಾಂಬ್‌ ಹಾಕಬೇಡಿ ಎಂದು ತಿಳಿಸುವಂತೆ ಹೇಳಿದ್ದೆ. ಅವರು ಅದನ್ನು ಅನುಸರಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದರು. ಆದರೆ ಕೊನೆಯಲ್ಲಿ ಎರಡು ಮೂರು ದಿನಗಳ ಕಾಲ ಹೋರಾಟ ನಡೆಯಿತು” ಎಂದು ಸಂದರ್ಶನವೊಂದರಲ್ಲಿ ಪ್ರಧಾನಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಧಾನಿ ನೀಡಿದ ಈ ಹೇಳಿಕೆ ಎಲ್ಲೆಡೆ ಟ್ರೋಲ್‌ಗೆ ಒಳಗಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿಯ ಹೇಳಿಕೆಯನ್ನು ಪ್ರಶ್ನಿಸುತ್ತಿರುವ ನೆಟ್ಟಿಗರು ಇವರು ಮಣಿಪುರ ಒಂದನ್ನು ಬಿಟ್ಟು ಪ್ರಪಂಚದ ಎಲ್ಲ ರಾಷ್ಟ್ರಗಳ ಯುದ್ಧಗಳನ್ನು ನಿಲ್ಲಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಹಿಂದೂ-ಮುಸ್ಲಿಮ್ ರಾಜಕಾರಣ ಮಾಡುವುದಿಲ್ಲವೇ ನಮ್ಮ ಪ್ರಧಾನಿ!

ಈಶಾನ್ಯ ರಾಜ್ಯ ಆಂತರಿಕ ಸಂಘರ್ಷದಿಂದ ಗಲಭೆಗಳು ಉಂಟಾಗಿ ನೂರಾರು ಜನರು ಪ್ರಾಣ ಕಳೆದುಕೊಂಡರು. ಸಾವಿರಾರು ಜನ ತಮ್ಮ ಸ್ವಂತ ಆಸ್ತಿಪಾಸ್ತಿ ಬಿಟ್ಟು ಬೇರೆಡೆ ತಮ್ಮ ನೆಲೆ ಬದಲಾಯಿಸಿದರು. ಭಾರತ ಇತಿಹಾಸದಲ್ಲಿಯೇ ಇಂತಹ ಘೋರ ಘಟನೆ ನಡೆದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಣಿಪುರದ ಬಗ್ಗೆ ಒಂದು ಮಾತು ಆಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶವೇ ಮಣಿಪುರದ ಆಂತರಿಕ ಸಂಘರ್ಷದ ಬಗ್ಗೆ ಕಂಬನಿ ಮಿಡಿದರೂ ಪ್ರಧಾನಿ ಏಕೆ ಮಾತನಾಡಲಿಲ್ಲ ಕೆಲವರು ಪ್ರಶ್ನಿಸಿದ್ದಾರೆ. ಮತ್ತೂ ಕೆಲವರು ಮಣಿಪುರವು ಪ್ರಧಾನಿಯ ಪಠ್ಯದ ವಿಷಯದಲ್ಲಿ ಇಲ್ಲ ಎಂದು ಕುಟುಕಿದ್ದಾರೆ. ಇನ್ನೂ ಕೆಲವರು ಬಹುಶಃ ನಡ್ಡಾ ಹಾಗೂ ಅಮಿತ್‌ ಶಾ ಅವರನ್ನು ಇಸ್ರೇಲ್‌ಗೆ ಯುದ್ಧ ನಿಲ್ಲಿಸಲು ಕಳಿಸಿರಬೇಕು ಎಂದು ಕುಹುಕವಾಡಿದ್ದಾರೆ.

ಅದಲ್ಲದೆ ಮಾಧ್ಯಮದಲ್ಲಿ ಸಂದರ್ಶನದಲ್ಲಿ ಕುಳಿತು ಪ್ರಶ್ನೆ ಕೇಳುತ್ತಿದ್ದ ನಾಲ್ವರು ಪತ್ರಕರ್ತರು ಕೂಡ ಮೋದಿಯನ್ನು ಆರಾಧಿಸುವ ಗೋಧಿ ಮಾಧ್ಯಮ ಪತ್ರಕರ್ತರಾಗಿದ್ದು, ಇಂತಹ ಪತ್ರಕರ್ತರು ಸರ್ಕಾರದ ದುರಾಡಳಿತವನ್ನು ಪ್ರಶ್ನಿಸುವುದನ್ನು ಬಿಟ್ಟು ಪ್ರಧಾನಿಯ ಸುಳ್ಳುಗಳಿಗೆ ತಲೆಯಾಡಿಸುತ್ತಿರುವುದನ್ನು ಕೂಡ ಹಲವರು ಟ್ರೋಲ್‌ ಮಾಡಿದ್ದಾರೆ.

https://x.com/VeeryaSorry/status/1791338756500533492

 

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...