ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್‌ಗಳಿಗೂ ಜುಲೈ 15ರಿಂದ ಟೋf ವಿಧಿಸಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ವರದಿಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಳ್ಳಿಹಾಕಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ, ಕೆಲವು ಮಾಧ್ಯಮಗಳು, ದೇಶದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ಪಾವತಿ ಕಡ್ಡಾಯಗೊಳಿಸಲಾಗುತ್ತದೆ. ಸವಾರರು ತಮ್ಮ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಲಿಂಕ್ ಪಡೆಯಬೇಕಾಗುತ್ತದೆ. ಉಲ್ಲಂಘಿಸಿದವರಿಗೆ 2,000 ರೂ.ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ವರದಿ ಮಾಡಿದ್ದವು.
ಈ ಬಗ್ಗೆ ‘ಎಕ್ಸ್’ನಲ್ಲಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಗಡ್ಕರಿ, “ದ್ವಿಚಕ್ರ ವಾಹನಗಳ ಮೇಲೆ ಟೋಲ್ ವಿಧಿಸಲಾಗುತ್ತಿದೆ ಎಂಬುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಇದು ಸಂಪೂರ್ಣ ಎಂಬ ತಪ್ಪುದಾರಿಗೆಳೆಯುವ ಸುದ್ದಿ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರದ ಎದುರು ಪ್ರಸ್ತಾಪಿಸಲಾಗಿಲ್ಲ” ಎಂದು ಹೇಳಿದ್ದಾರೆ.
“ದ್ವಿಚಕ್ರ ವಾಹನಗಳಿಗೆ ಟೋಲ್ ಪಾವತಿಯಿಂದ ವಿನಾಯಿತಿ ಮುಂದುವರಿಯುತ್ತದೆ. ಸತ್ಯಗಳನ್ನು ಪರಿಶೀಲಿಸದೆ ಇಂತಹ ಆಧಾರರಹಿತ ಸುದ್ದಿಗಳನ್ನು ಹರಡುವುದು ಜವಾಬ್ದಾರಿಯುತ ಪತ್ರಿಕೋದ್ಯಮವಲ್ಲ. ನಾನು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.
Few days are left they also put toll on cycle and the people who go walking