ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರಗಳು ಶೇ.50ರವರೆಗೆ ಇಳಿಕೆ

Date:

ಸುರಂಗಗಳು, ಸೇತುವೆಗಳು, ಫ್ಲೈ-ಓವರ್‌ಗಳ ಹಾಗೂ ಎತ್ತರಿಸಿದ ಕಾರಿಡಾರ್‌ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ ವಿಭಾಗದ ರಸ್ತೆಯಲ್ಲಿ ಟೋಲ್‌ ದರವು 50%ವರೆಗೆ ಕಡಿಮೆಯಾಗಲಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

- Advertisement -

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶುಲ್ಕ ನಿಯಮಗಳು-2008ಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ತಿದ್ದುಪಡಿ ತಂದಿದೆ. ತಿದ್ದುಪಡಿಯಲ್ಲಿ ಹೊಸ ನಿಯಮಗಳನ್ನು ಅಳವಡಿಸಲಾಗಿದೆ. ಮುಖ್ಯವಾಗಿ, ಹೆದ್ದಾರಿ ನಿರ್ದಿಷ್ಟ ವಿಭಾಗದಲ್ಲಿ ಎಷ್ಟು ಉದ್ದದ ಸೇತುವೆ, ಸುರಂಗಗಳು ಇರುತ್ತವೆಯೋ ಆ ಉದ್ದಕ್ಕೆ ಅನುಗುಣವಾಗಿ 10 ಪಟ್ಟು ಶುಲ್ಕ, ಉಳಿದ ಸಾಮಾನ್ಯ ಹೆದ್ದಾರಿಗೆ ಸಾಮಾನ್ಯ ಶುಲ್ಕ ವಿಧಿಸಲಾಗುತ್ತದೆ. ಅಥವಾ, ಸೇತುವೆ, ಸುರಂಗ ನಿರ್ಮಾಣ ಸೇರಿದಂತೆ ಹೆದ್ದಾರಿಯ ನಿರ್ದಿಷ್ಟ ವಿಭಾಗದ ಒಟ್ಟು ಉದ್ದಕ್ಕೆ ಅನುಗುಣವಾಗಿ ಐದು ಪಟ್ಟು ಶುಲ್ಕ ವಿಧಿಸಲಾಗುತ್ತದೆ. ಈ ಎರಡೂ ಆಯ್ಕೆಗಳಲ್ಲಿ ಯಾವುದು ಕಡಿಮೆ ಶುಲ್ಕವಾಗುತ್ತದೆಯೋ ಅದನ್ನು ಜಾರಿಗೆ ತರಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಸ್ತುತ, ಹಳೆಯ ವ್ಯವಸ್ಥೆಯಡಿ ಸುರಂಗಗಳು, ಸೇತುವೆಗಳು, ಫ್ಲೈಓವರ್‌ಗಳು ಹಾಗೂ ಎತ್ತರಿಸಿದ ಕಾರಿಡರ್‌ಗಳಂತಹ ರಚನೆಗಳನ್ನು ಒಳಗೊಂಡಿರುವ 40 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ 400 ಕಿ.ಮೀ.(10 x40)ಗಳಿಗೆ (ಹತ್ತು ಪಟ್ಟು) ಶುಲ್ಕವನ್ನು ವಿಧಿಸಲಾಗುತ್ತಿದೆ. ಇದೀಗ, ನೂತನ ಸೂತ್ರದಡಿ ಶುಲ್ಕವನ್ನು 200 ಕಿ.ಮೀ.(5 x40 ಕಿ.ಮೀ.) ಗಳಿಗೆ (ಐದು ಪಟ್ಟು) ಲೆಕ್ಕ ಹಾಕಲಾಗುತ್ತದೆ. ಈ ಮೂಲಕ ವಾಹನಗಳು ಪಾವತಿಸುವ ಟೋಲ್ ಶುಲ್ಕವು ಸುಮಾರು 50%ವರೆಗೆ ಕಡಿಮೆಯಾಗಲಿದೆ.

ಈ ಲೇಖನ ಓದಿದ್ದೀರಾ?: ವಿಶ್ಲೇಷಣೆ | ಸಹಕಾರ ಕ್ಷೇತ್ರವನ್ನು ಕಬ್ಜಾ ಮಾಡಲು ಹೊರಟಿದ್ದಾರೆಯೇ ಅಮಿತ್ ಶಾ?

“ಮೂಲಸೌಕರ್ಯ ನಿರ್ಮಾಣ ವೆಚ್ಚ ವಸೂಲಿ ಮತ್ತು ಕೈಗೆಟಕುವ ದರಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಲು ತಿದ್ದುಪಡಿ ತರಲಾಗಿದೆ. ಇದರಿಂದ, ರಸ್ತೆ ಬಳಕೆದಾರರಿಗೆ ಹೊರೆ ಕಡಿಮೆಯಾಗಲಿದೆ” ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...