ಗಣರಾಜ್ಯೋತ್ಸವ ದಿನಕ್ಕೆ ಯೂರೋಪಿಯನ್ ಒಕ್ಕೂಟ ಅಧ್ಯಕ್ಷ ಅತಿಥಿ

Date:

ಯೂರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಜನವರಿ 26ರಂದು ನಡೆಯುವ ಭಾರತದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜತೆಗೆ ಉಭಯ ಮುಖಂಡರು ಭಾರತ- ಯೂರೋಪಿಯನ್ ಒಕ್ಕೂಟದ 16ನೇ ಶೃಂಗಸಭೆಯಲ್ಲೂ ಪಾಲ್ಗೊಳ್ಳುವರು.

- Advertisement -

ಜಾಗತಿಕ ಅನಿಶ್ಚಿತತೆ ಹಿನ್ನೆಲೆಯಲ್ಲಿ ಹಲವು ತಿಂಗಳುಗಳ ಕಠಿಣ ಪರಿಶ್ರಮದ ಬಳಿಕ ಯೂರೋಪಿಯನ್ ಒಕ್ಕೂಟ ಭಾರತದ ಜತೆಗೆ ಹೊಸ ಪ್ರಮುಖ ಪಾಲುದಾರಿಕೆ ಒಪ್ಪಂದ ಮಾಡಿಕೊಳ್ಳುವ ಕಾರ್ಯಸೂಚಿಯನ್ನು ಹೊಂದಿರುವ ಹಿನ್ನೆಲೆಯಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದಿದೆ. ಪ್ರಸ್ತುತ ಉಭಯ ಬಣಗಳು ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಚಾರದಲ್ಲಿ ಕುಂಟುತ್ತಾ ಸಾಗಿವೆ. ಈ ವಿಷಯ ಶೃಂಗಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಜತೆಗೆ ಉಭಯ ದೇಶಗಳು ರಕ್ಷಣೆ ಮತ್ತ ಭದ್ರತಾ ಪಾಲುದಾರಿಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆನಡೆಯಲಿದೆ. ರಷ್ಯಾ ಜತೆಗೆ ಭಾರತ ಸಂಬಂಧ ಹೊಂದಿರುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಇದ್ದರೂ, ರಕ್ಷಣಾ ಉದ್ಯಮದಲ್ಲಿ ಪರಸ್ಪರ ಸಹಕಾರ ಕುರಿತು ಕೂಡಾ ಚರ್ಚೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬರಪೀಡಿತ ಜಿಲ್ಲೆಯ ಜನರ ಜಲಾಗ್ರಹದ ಕೂಗು ಕೇಳಿಸುವುದೇ ಸರ್ಕಾರಕ್ಕೆ?

ಯೂರೋಪಿಯನ್ ಒಕ್ಕೂಟದ ಮೂಲಗಳ ಪ್ರಕಾರ, ವ್ಯಾಪಾರ, ಭದ್ರತೆ, ರಕ್ಷಣೆ, ಸ್ವಚ್ಛ ಸಾರಿಗೆ ಮತ್ತು ಉಭಯ ದೇಶಗಳ ನಡುವಿನ ಜನರ ನಡುವಿನ ಸಂಬಂಧ ಚರ್ಚೆಗಳ ಪ್ರಮುಖ ಕಾರ್ಯಸೂಚಿಯಾಗಿದೆ. “ನಿಯಮಾಧರಿತ ಅಂತರರಾಷ್ಟ್ರೀಯ ವ್ಯವಸ್ಥೆಯನ್ನು ಸಂರಕ್ಷಿಸುವ ಸಲುವಾಗಿ ನಮ್ಮ ಸಾಮಥ್ರ್ಯ ಮತ್ತು ಹೊಣೆಗಾರಿಕೆಯನ್ನು ಹಂಚಿಕೊಳ್ಳುವುದು ನಮ್ಮ ಉದ್ದೇಶ” ಎಂದು ಕೋಸ್ಟಾ ಸ್ಪಷ್ಟಪಡಿಸಿದ್ದಾರೆ.

ಯೂರೋಪಿಯನ್ ಒಕ್ಕೂಟದ ಮುಖಂಡರು ಭಾರತದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳುವುದು ಇದೇ ಮೊದಲು. 27 ದೇಶಗಳ ಒಕ್ಕೂಟದ ಜತೆಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗುವ ನಿರೀಕ್ಷೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಜೆಫ್ರಿ ಎಪ್‌ಸ್ಟೀನ್-ಹರ್ದೀಪ್ ಪುರಿ ಭೇಟಿ: ಸಚಿವರ ಮೇಲಿನ ಆರೋಪಕ್ಕೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

​7 ದಿನಗಳ ಜೈಲುವಾಸ ಅಂತ್ಯ: ಕೊನೆಗೂ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ ನಾಯಕರು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಾಕ್ರೋಚ್...

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...