ಛತ್ತೀಸ್‌ಗಢ | ನಾಯಕ ಬಸವರಾಜು ಸೇರಿ 27 ಮಾವೋವಾದಿ ಹೋರಾಟಗಾರರ ಎನ್‌ಕೌಂಟರ್‌

Date:

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ನ ನಾಯಕ ಬಸವರಾಜು ಸೇರಿದಂತೆ ಒಟ್ಟು 27 ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಇನ್ನು ಈ ಎನ್‌ಕೌಂಟರ್ ವೇಳೆ ಜಿಲ್ಲಾ ಮೀಸಲು ಗಾರ್ಡ್‌(ಡಿಆರ್‌ಜಿ)ನ ಓರ್ವ ಸಿಬ್ಬಂದಿಯೂ ಮೃತಪಟ್ಟಿರುವುದಾಗಿ ವರದಿ ಉಲ್ಲೇಖಿಸಿದೆ.

- Advertisement -

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ, “ಈ ಎನ್‌ಕೌಂಟರ್ ವೇಳೆ ಓರ್ವ ಡಿಆರ್‌ಜಿ ತಂಡದ ಸಿಬ್ಬಂದಿ ಹುತಾತ್ಮರಾದರು. ಎನ್‌ಕೌಂಟರ್ ಸಮಯದಲ್ಲಿ ಕೆಲವು ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಎನ್‌ಕೌಂಟರ್‌; ಎಂಟು ನಕ್ಸಲರು ಹತ

ಹಿರಿಯ ಮಾವೋವಾದಿ ನಾಯಕ ಅಬುಜ್‌ಮದ್‌ನ ನಿರ್ದಿಷ್ಟ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ನಾರಾಯಣಪುರ, ದಂತೇವಾಡ, ಬಿಜಾಪುರ ಮತ್ತು ಕೊಂಡಗಾಂವ್‌ನ ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಕಾರ್ಯಾಚರಣೆಯನ್ನು ನಡೆಸಿದೆ ಎನ್ನಲಾಗಿದೆ.

ಎನ್‌ಕೌಂಟರ್ ಬಗ್ಗೆ ಮಾತನಾಡಿದ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, “ಕಾರ್ಯಾಚರಣೆಗಳನ್ನು ಮುಖ್ಯವಾಗಿ ಡಿಆರ್‌ಜಿ ನಡೆಸುತ್ತದೆ. ನಾನು ಅವರ ಧೈರ್ಯಕ್ಕೆ ನಮಸ್ಕರಿಸುತ್ತೇನೆ. ನಾವು ಆರಂಭದಿಂದಲೂ ಶರಣಾಗುವಂತೆ ಮಾವೋವಾದಿಗಳಿಗೆ ಮನವಿ ಮಾಡುತ್ತಿದ್ದೇವೆ. ಈಗ ಮತ್ತೆ ಅದನ್ನು ಪುನರಾವರ್ತಿಸುವ ಅಗತ್ಯವಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಛತ್ತೀಸ್‌ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಇದರ ಹೆಸರಲ್ಲಿ ಅದೆಷ್ಟೋ ಆದಿವಾಸಿಗಳ ಹತ್ಯೆ ನಡೆದಿದೆ ಎಂಬ ಆರೋಪಗಳಿವೆ. ಏಪ್ರಿಲ್ 21ರಂದು ಕಾರ್ಯಾಚರಣೆ ನಡೆಸಲು ಆರಂಭಿಸಲಾಗಿದ್ದು, ಒಟ್ಟು 31 ಮಾವೋವಾದಿಗಳ ಹತ್ಯೆ ಮಾಡಲಾಗಿದೆ. ಈ ಪೈಕಿ 16 ವರ್ಷದ ಬಾಲಕ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...