ದೆಹಲಿ ವಾಯು ಮಾಲಿನ್ಯ: ಸರ್ಕಾರದ ಕ್ರಮಗಳು ‘ಸಂಪೂರ್ಣ ವಿಫಲ’, 9 ಟೋಲ್ ಪ್ಲಾಜಾಗಳನ್ನು ಮುಚ್ಚಲು ಸುಪ್ರೀಂ ಸೂಚನೆ

Date:

ನವದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿದಿರುವ ಹಂತದಲ್ಲೇ ಮುಂದುವರಿದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳು ‘ಸಂಪೂರ್ಣ ವಿಫಲ’ವಾಗಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ತೇಪೆ ಹಚ್ಚುವ ಕೆಲಸಗಳ ಬದಲಿಗೆ, ದೀರ್ಘಕಾಲೀನ ಮತ್ತು ಪ್ರಾಯೋಗಿಕ ಪರಿಹಾರಗಳ ಅಗತ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

- Advertisement -

ವಿಚಾರಣೆ ವೇಳೆ ಸಂಚಾರ ದಟ್ಟಣೆ ಮತ್ತು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಗುರುಗ್ರಾಮದ ಎಂಸಿಡಿ ಟೋಲ್ ವಿಷಯ ಪ್ರಸ್ತಾಪವಾಯಿತು. ಈ ವೇಳೆ 9 ಟೋಲ್ ಪ್ಲಾಜಾಗಳನ್ನು ತಾತ್ಕಾಲಿಕವಾಗಿ ಮುಚ್ಚಲು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ಗೆ (ಡಿಎಂಸಿ) ಕೋರ್ಟ್ ನಿರ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ನಮಗೆ ನಿಮ್ಮ ಆದಾಯ ಮುಖ್ಯವಲ್ಲ, ಜನವರಿ 31ರವರೆಗೆ ಟೋಲ್ ಪ್ಲಾಜಾಗಳನ್ನು ಸಂಪೂರ್ಣ ಮುಚ್ಚಲು ಒಂದು ವಾರದೊಳಗೆ ಸ್ಪಷ್ಟ ಯೋಜನೆ ರೂಪಿಸಿ,” ಎಂದು ಸುಪ್ರೀಂ ಕೋರ್ಟ್ ಖಡಕ್ ಆಗಿ ಸೂಚಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಡ್ಯದ ಹೆಣ್ಣು ಭ್ರೂಣ ಹತ್ಯೆ ಮತ್ತು ಹೆಣ್ಣು ಸಿಗದ ಯುವಕರ ಹತಾಶೆ

ಮಾಲಿನ್ಯ ನಿರ್ಬಂಧಗಳಿಂದ ಕೆಲಸ ಕಳೆದುಕೊಂಡಿರುವ ಕಟ್ಟಡ ಕಾರ್ಮಿಕರನ್ನು ಪರಿಶೀಲಿಸಿ, ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ಧನ ವರ್ಗಾಯಿಸಲು (ಡಿಬಿಟಿ) ಆದೇಶಿಸಿದೆ. ಹಣ ದುರುಪಯೋಗವಾಗದಂತೆ ಎಚ್ಚರಿಸಿದ ಪೀಠ, ಕಾರ್ಮಿಕರಿಗೆ ಪರ್ಯಾಯ ಕೆಲಸ ಒದಗಿಸುವಂತೆಯೂ ಸಲಹೆ ನೀಡಿದೆ. ಸದ್ಯ ಬಾಧಿತ 2.5 ಲಕ್ಷ ಕಾರ್ಮಿಕರ ಪೈಕಿ 7,000 ಮಂದಿಯನ್ನು ಮಾತ್ರ ಸರ್ಕಾರ ಗುರುತಿಸಿದೆ.

ಶಾಲೆಗಳ ಮುಚ್ಚುವಿಕೆ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಪೀಠ ನಿರಾಕರಿಸಿದ್ದು, ಇವು ಮಕ್ಕಳ ಆರೋಗ್ಯ ರಕ್ಷಣೆಗೆ ತೆಗೆದುಕೊಂಡ ಮಧ್ಯಂತರ ಕ್ರಮಗಳು ಎಂದಿದೆ. ಇದೇ ವೇಳೆ, ಶ್ರೀಮಂತರ ಐಷಾರಾಮಿ ಜೀವನಶೈಲಿ, ದೊಡ್ಡ ಡೀಸೆಲ್ ವಾಹನಗಳು ಮತ್ತು ಜನರೇಟರ್‌ಗಳ ಬಳಕೆಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದ್ದು, ಬಡವರು ಇದರ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...