ಸಂತಾನೋತ್ಪತ್ತಿ ದರ ಕುಸಿತ: ಮಕ್ಕಳ ಸಂಖ್ಯೆ ಆಧರಿಸಿ ಚುನಾವಣೆಗೆ ನಿಷೇಧವೇಕೆ; ಸುಪ್ರೀಂ ಪ್ರಶ್ನೆ

Date:

ಎರಡಕ್ಕಿಂತ ಹೆಚ್ಚು ಮಕ್ಕಳಿರುವ ವ್ಯಕ್ತಿಗಳನ್ನು ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸುವ ಕಾನೂನುಗಳ ಕುರಿತು ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಸಂತಾನೋತ್ಪತ್ತಿ ಅಥವಾ ಒಟ್ಟು ಫಲವತ್ತತೆ ದರ (TFR) ಕುಸಿಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಜನಸಂಖ್ಯಾ ನಿಯಂತ್ರಣಕ್ಕಾಗಿ ರೂಪಿಸಲಾಗಿದ್ದ ಈ ಕಾನೂನುಗಳು ಪ್ರಸ್ತುತತೆಯನ್ನು ಕಳೆದುಕೊಂಡಿವೆ. ಇವುಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

- Advertisement -

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಕಕೋಡಾ ಗ್ರಾಮ ಪಂಚಾಯತಿಯ ಮಾಜಿ ಸರ್ಪಂಚ್ ಮಂಗಳಾ ಭೀಮರಾವ್ ಇಂಗಳೆ ಅವರು ಮೂರನೇ ಮಗು ಮಾಡಿಕೊಂಡಿದ್ದರು. ಆ ಕಾರಣಕ್ಕಾಗಿ, ಮಹಾರಾಷ್ಟ್ರ ಗ್ರಾಮ ಪಂಚಾಯತ್ ಕಾಯ್ದೆಯಡಿ ಅವರನ್ನು ಸರ್ಪಂಚ್ ಹುದ್ದೆಯಿಂದ ಅನರ್ಹಗೊಳಿಸಲಾಗಿತ್ತು. ಬಾಂಬೆ ಹೈಕೋರ್ಟ್‌ ಕೂಡ ಈ ಅನರ್ಹತೆಯನ್ನು ಎತ್ತಿಹಿಡಿದಿತ್ತು. ಬಳಿಕ, ಮಂಗಳಾ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಮತ್ತು ಅಲೋಕ್ ಅರಾಧೆ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ. ಮಂಗಳಾ ಅವರ ಅನರ್ಹತೆಯನ್ನು ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಸಹ್ಯಾದ್ರಿ ಕಾಲೇಜಿನ ಹಳೆಯ ಕೀರ್ತಿಗೆ ಮಸಿ!...

ಒಂದು ಕಾಲದಲ್ಲಿ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ಸಹ್ಯಾದ್ರಿ ಕಾಲೇಜಿನ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರದೇಶ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ...

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ವಿಚಾರಣೆ ನಡೆಸಿ ಆದೇಶ ಹೊರಡಿಸಿದ ನ್ಯಾಯಾಲಯವು, 2003ರಲ್ಲಿ ‘ಜಾವೇದ್ vs ಹರಿಯಾಣ ರಾಜ್ಯ’ ಪ್ರಕರಣದಲ್ಲಿ ‘ಇಬ್ಬರು ಮಕ್ಕಳ ನಿಯಮ’ವನ್ನು ಎತ್ತಿಹಿಡಿದಿದ್ದ ಮೂವರು ನ್ಯಾಯಮೂರ್ತಿಗಳ ಪೀಠದ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ವಿಸ್ತೃತ ಪೀಠಕ್ಕೆ ಉಲ್ಲೇಖಿಸಿದೆ. “2003ರಲ್ಲಿ ಭಾರತದ ಒಟ್ಟು ಸಂತಾನೋತ್ಪತ್ತಿ ದರ 3 ರಷ್ಟಿತ್ತು. ಆದರೆ, ಪ್ರಸ್ತುತ ಅದು 1.9ಕ್ಕೆ ಕುಸಿದಿದೆ. ಜನಸಂಖ್ಯೆಯನ್ನು ಸ್ಥಿರವಾಗಿಡಲು 2.1 ರಷ್ಟಿರುವ ದರವನ್ನು ‘ಬದಲಿ ದರ’ವೆಂದು ಪರಿಗಣಿಸಲಾಗುತ್ತದೆ. ಆದರೆ, ಪ್ರಸ್ತುತ ದೇಶದ ಸಂತಾನೋತ್ಪತ್ತಿ ದರವು ಈ 2.1ಕ್ಕಿಂತ ಕುಸಿದಿರುವುದರಿಂದ, ಭವಿಷ್ಯದಲ್ಲಿ ಯುವಜನರ ಸಂಖ್ಯೆ ಕಡಿಮೆಯಾಗಿ ವೃದ್ಧರ ಸಂಖ್ಯೆ ಹೆಚ್ಚಾಗುವ ಜನಸಂಖ್ಯಾ ವ್ಯತ್ಯಾಸಗಳು ಎದುರಾಗಲಿವೆ” ಎಂದು ಆತಂಕ ವ್ಯಕ್ತಪಡಿಸಿದೆ.

ಈ ಲೇಖನ ಓದಿದ್ದೀರಾ?: ಅಮೆರಿಕ ಮಧ್ಯಂತರ ಚುನಾವಣೆ: ಡೊನಾಲ್ಡ್ ಟ್ರಂಪ್ ಕುರ್ಚಿಗಿಲ್ಲ ಕುತ್ತು; ಬಹುಮತ ಕಳೆದುಕೊಂಡರೆ ಸರ್ಕಾರ ‘ಹಲ್ಲು…

“ಸಾರ್ವಜನಿಕ ಹುದ್ದೆಗಳನ್ನು ಹೊಂದುವ ವ್ಯಕ್ತಿಯ ಸಾಮರ್ಥ್ಯಕ್ಕೂ ಅವರ ಮಕ್ಕಳ ಸಂಖ್ಯೆಗೂ ಯಾವುದೇ ನೇರ ಸಂಬಂಧವಿಲ್ಲ. ಹಾಗಿದ್ದರೂ ನಿಯಮಗಳನ್ನು ರೂಪಿಸಲಾಗಿದೆ. ಇಂತಹ ನಿಯಮಗಳು ಪ್ರಜೆಗಳ ಒಂದು ಇಡೀ ವರ್ಗವನ್ನು ರಾಜಕೀಯ ಪ್ರಾತಿನಿಧ್ಯದಿಂದ ಹೊರಗಿಡುತ್ತವೆ. ಸಂತಾನ ಹೊಂದುವ ಹಕ್ಕು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಕ್ಕಿನ ನಡುವೆ ಕಠಿಣವಾದ ಆಯ್ಕೆಯನ್ನು ಮಾಡಲು ಇಂತಹ ಕಾನೂನುಗಳು ಒತ್ತಾಯಿಸುತ್ತವೆ. ಇದು ಸಂವಿಧಾನದ 21ನೇ ವಿಧಿ ಅಡಿಯಲ್ಲಿ ಲಭ್ಯವಿರುವ ‘ಸಂತಾನೋತ್ಪತ್ತಿ ಸ್ವಾಯತ್ತತೆ’ಯ ಹಕ್ಕಿಗೆ ಧಕ್ಕೆ ತರಬಹುದು” ಎಂದು ಪೀಠ ಎಚ್ಚರಿಸಿದೆ.

“ಪ್ರಸ್ತುತ ಅಸ್ಸಾಂ, ಗೋವಾ, ಗುಜರಾತ್, ಮಹಾರಾಷ್ಟ್ರ, ಒಡಿಶಾ ಹಾಗೂ ಉತ್ತರಾಖಂಡ್‌ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಾತ್ರ ಈ ರೀತಿಯ ‘ಇಬ್ಬರು ಮಕ್ಕಳ ನಿಯಮ’ ಜಾರಿಯಲ್ಲಿದೆ. ಇನ್ನುಳಿದ 7 ರಾಜ್ಯಗಳು ಈಗಾಗಲೇ ಈ ನಿಯಮವನ್ನು ರದ್ದುಗೊಳಿಸಿದ್ದು, 15 ರಾಜ್ಯಗಳಲ್ಲಿ ಇಂತಹ ಯಾವುದೇ ಕಾಯ್ದೆ ಇರಲಿಲ್ಲ. ಬದಲಾಗುತ್ತಿರುವ ಜನಸಂಖ್ಯಾ ಪರಿಸ್ಥಿತಿಗೆ ಅನುಗುಣವಾಗಿ ಕಾನೂನುಗಳನ್ನು ಮರುಪರಿಶೀಲಿಸದಿದ್ದರೆ ಭವಿಷ್ಯದಲ್ಲಿ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಹಳ್ಳಿ | ಈಜಲು ಹೋಗಿ ತುಂಗೆ ಪಾಲಾದ ಕೂಲಿ ಕಾರ್ಮಿಕರು!

ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಹೊಸ ಸೇತುವೆ ಸಮೀಪ ತುಂಗಾ ನದಿಯಲ್ಲಿ ಈಜಲು...

ಶಿವಮೊಗ್ಗ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ, 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ...

2026ರ ನಂತರ ಇಸ್ರೇಲ್‌ಗೆ ನೆರವು ಸ್ಥಗಿತ; ಟ್ರಂಪ್ ಘೋಷಣೆ!

ಅಮೆರಿಕ ಮತ್ತು ಇಸ್ರೇಲ್ ನಡುವಿನ ದಶಕಗಳ ಕಾಲದ ಮಿಲಿಟರಿ ಬಾಂಧವ್ಯದಲ್ಲಿ ಸಂಚಲನ...

ಶಿವಮೊಗ್ಗ | ಸಹ್ಯಾದ್ರಿ ಕಾಲೇಜಿನ ಹಳೆಯ ಕೀರ್ತಿಗೆ ಮಸಿ! ಬದಲಾದ ವಿದ್ಯಾನಗರದ ಛಾಯೆ

ಒಂದು ಕಾಲದಲ್ಲಿ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ಸಹ್ಯಾದ್ರಿ ಕಾಲೇಜಿನ ಹೆಸರು ಮುಂಚೂಣಿಯಲ್ಲಿ...