ಸಂಚಾರ ದಟ್ಟಣೆ, ಜನಸಂದಣಿ: ಜಗನ್ನಾಥ ರಥಯಾತ್ರೆ ಕಾಲ್ತುಳಿತಕ್ಕೆ ಕಾರಣವೇನು?

Date:

ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ವೇಳೆ ಗುಂಡಿಚಾ ದೇವಸ್ಥನದ ಬಳಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮುವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

- Advertisement -

ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಹೆಚ್ಚು ಜನರು ಸೇರಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರನ್ನು ಬಲಿಪಟ್ನದ ಪ್ರವತಿ ದಾಸ್ (52), ಗೋದಾಭಂಗದ ಬಸಂತಿ ಸಾಹು (42) ಮತ್ತು ಭುವನೇಶ್ವರದ ಪ್ರೇಮಕಾಂತ ಮೊಹಂತಿ (78) ಎಂದು ಗುರುತಿಸಲಾಗಿದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಎಸ್ ಸ್ವೈನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಸರ್ಕಾರವು ಘಟನೆ ಬಗ್ಗೆ ತನಿಖೆ ಆರಂಭಿಸಿದೆ. ತನಿಖೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಒಡಿಶಾ ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಹೇಳಿದ್ದಾರೆ.

ಭಾನುವಾರ ಮುಂಜಾನೆ, ಜಗನ್ನಾಥ ದೇವಾಲಯದಿಂದ ಸುಮಾರು 3 ಕಿ.ಮೀ ದೂರದಲ್ಲಿರುವ ಗುಂಡಿಚಾ ದೇವಾಲಯದ ಸುತ್ತಲೂ ಸುಮಾರು 1,500 ಭಕ್ತರು ಜಮಾಯಿಸಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪವಿತ್ರವೆಂದು ಪರಿಗಣಿಸಲಾದ ಚರಮಲ ಮರಗಳನ್ನು ಹೊತ್ತ ಎರಡು ಟ್ರಕ್‌ಗಳು ಶಾರದಾಬಲಿ ಪ್ರದೇಶಕ್ಕೆ ಬಂದವು. ಏಕಾಏಕಿ ಟ್ರಕ್‌ಗಳು ಬಂದಿದ್ದರಿಂದ, ಜನರು ಗೊಂದಲಗೊಂಡು, ಓಡಲು ಆರಂಭಿಸಿದರು. ಪರಿಣಾಮ, ಕಾಲ್ತುಳಿತ ಸಂಭವಿಸಿತು. ಉಸಿರುಗಟ್ಟಿ ಮೂವರು ಮೃತಪಟ್ಟಿದ್ದಾರೆ.

ಈ ಲೇಖನ ಓದಿದ್ದೀರಾ?:ಇರಾನ್- ಇಸ್ರೇಲ್ ಕದನ; ಭಾರತದ ತಟಸ್ಥ ನಿಲುವು ಸರಿಯೇ?

“ಘಟನೆ ನಡೆದಾಗ, ಯಾವ ಅಧಿಕಾರಿಗಳೂ ತುರ್ತಾಗಿ ಧಾವಿಸಲಿಲ್ಲ. ಪ್ರತಿಕ್ರಿಯಿಸಲಿಲ್ಲ. ಅಗ್ನಿಶಾಮಕ ಅಧಿಕಾರಿಗಳು, ರಕ್ಷಣಾ ತಂಡ ಅಥವಾ ವೈದ್ಯಕೀಯ ಸಿಬ್ಬಂದಿ – ಯಾರೊಬ್ಬರೂ ನೆರವಿಗೆ ಬರಲಿಲ್ಲ” ಎಂದು ಕಾಲ್ತುಳಿತದಲ್ಲಿ ತನ್ನ ಪತ್ನಿಯನ್ನು ಕಳೆದುಕೊಂಡ ವ್ಯಕ್ತಿ ಆರೋಪಿಸಿದ್ದಾರೆ.

“ಜನರು ಒಬ್ಬರ ಮೇಲೊಬ್ಬರು ಬಿದ್ದರು. ಅನೇಕರು ಕೆಲವೇ ನಿಮಿಷಗಳಲ್ಲಿ ಪ್ರಜ್ಞೆ ಕಳೆದುಕೊಂಡರು. ಅವರ ಕುಟುಂಬಸ್ಥರು ಸಹಾಯಕ್ಕಾಗಿ ಮಾಹಿತಿ ಕೇಂದ್ರಕ್ಕೆ ಧಾವಿಸಿದರು. ಆದರೆ, ಕೇಂದ್ರವು ಏನೂ ಮಾಡಲಾಗಲಿಲ್ಲ. ಆ್ಯಂಬುಲೆನ್ಸ್‌ಅನ್ನು ಘಟನಾ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಲ್ಲಿಸಲಾಗಿತ್ತು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಪುರಿಯಲ್ಲಿ ರಥಯಾತ್ರೆ ಶುಕ್ರವಾರದಿಂದ ಆರಂಭವಾಗಿದೆ. 9 ದಿನಗಳ ಕಾಲ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...