242 ಪ್ರಯಾಣಿಕರಿದ್ದ ಏರ್ ಇಂಡಿಯಾ ಬೋಯಿಂಗ್ 787 ವಿಮಾನವು ಹಾಸ್ಟೆಲ್ ಮೇಲೆ ಬಿದ್ದ ಪರಿಣಾಮ 7 ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಅಹಮದಾಬಾದ್‌ನ ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದಿದೆ.
ಈ ದುರಂತದ ವೇಳೆ ಮೆಸ್‌ನಲ್ಲಿದ್ದ ವಿದ್ಯಾರ್ಥಿಗಳು ಊಟವನ್ನು ಬಿಟ್ಟು ಅರ್ಧಕ್ಕೆ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಅಪಘಾತದ ಭೀಕರತೆಯ ಚಿತ್ರವೊಂದು ವಿವರಿಸುತ್ತದೆ. ಚಿತ್ರಗಳಲ್ಲಿ ಟೇಬಲ್ ಮೇಲೆ ಬಡಿಸಿಟ್ಟಿದ್ದ ಊಟದ ತಟ್ಟೆ, ಲೋಟ ಎಲ್ಲವೂ ಹಾಗೆ ಇವೆ.
ಮಧ್ಯಾಹ್ನ ಊಟದ ಸಮಯದಲ್ಲಿ ಮೆಡಿಕಲ್ ಕಾಲೇಜ್ ಕ್ಯಾಂಟೀನ್ ಕಟ್ಟಡಕ್ಕೆ ವಿಮಾನ ಬಡಿದಿದೆ. ಈ ಪರಿಣಾಮ ಮೆಡಿಕಲ್ ಕಾಲೇಜಿನ ಅಡುಗೆ ಮನೆಗೆ ಬೆಂಕಿ ಹೊತ್ತಿಕೊಂಡು ಗೋಡೆಗಳು ಛಿದ್ರ ಛಿದ್ರಗೊಂಡಿದೆ. ಈ ದುರಂತದ ವೇಳೆ ಮೆಸ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿದ್ದೀರಾ? ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ; Photo and Video gallery
ದುರಂತದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನದ ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಸಂಘಟಿಸಲು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯಾಚರಣಾ ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದೆ. ಅದಕ್ಕಾಗಿ 011-24610843, 9650391859 ದೂರವಾಣಿ ಸಂಖ್ಯೆಯನ್ನು ತೆರೆಯಲಾಗಿದೆ.