ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕ ಕಾರನ್ನು ಅತೀ ವೇಗವಾಗಿ ಚಲಾಯಿಸಿದ್ದರಿಂದ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ
ರಾಜಸ್ಥಾನದ ಸಿರೋಹಿ ಜಿಲ್ಲೆಯ ಕಿವ್ರಾಲಿ ಗ್ರಾಮದ ಅಬು ರಸ್ತೆಯಲ್ಲಿ ಈ ಅಪಘಾತ ನಡೆದಿದೆ ಎಂದು ಮೌಂಟ್ ಅಬು ಪೊಲೀಸ್ ಅಧಿಕಾರಿ ಗೋಮರಾಮ್ ಅವರು ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ಮೂವರು ಒಂದೇ ಕುಟುಂಬದವರು ಎಂದು ವರದಿಯಾಗಿದೆ. ಮೃತರನ್ನು ನಾರಾಯಣ ಪ್ರಜಾಪತ್, ಅವರ ಪತ್ನಿ ಪೋಶಿ ದೇವಿ, ಪುತ್ರ ದುಶ್ಯಂತ, ಚಾಲಕ ಕಲುರಾಮ್ ಎಂದು ಗುರುತಿಸಲಾಗಿದೆ.
ಸದ್ಯ ನಾಲ್ವರ ಗುರುತು ಪತ್ತೆಯಾಗಿದ್ದು, ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಎಲ್ಲರೂ ಅಹಮದಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
