ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

Date:

ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದು ಎಂಟು ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ ನಡೆದಿದೆ.

- Advertisement -

ಚೆವೆಲ್ಲಾ ಎಸಿಪಿ ಬಿ ಕಿಶನ್ ಪ್ರಕಾರ, ಆರ್‌ಟಿಸಿ ಬಸ್ ತಂಡೂರಿನಲ್ಲಿ ಹೊರಟಿದ್ದು, ಚೆವೆಲ್ಲಾ ತಲುಪಬೇಕಿತ್ತು. “ಟ್ರಕ್ ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿತ್ತು. ಈ ಅಪಘಾತದಲ್ಲಿ ಟ್ರಕ್ ಚಾಲಕ ಮತ್ತು ಹಲವು ಬಸ್ ಪ್ರಯಾಣಿಕರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ” ಎಂದು ಎಸಿಸಿ ಇಂದು ಮುಂಜಾನೆ ಹೇಳಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿ 24ಕ್ಕೆ ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ತೆಲಂಗಾಣದಲ್ಲಿ ರಸ್ತೆ ಅಪಘಾತ; ಬೀದರ್ ಮೂಲದ ಇಬ್ಬರ ಸಾವು

ರಾಜೇಂದ್ರನಗರ ಡಿಸಿಪಿ ಯೋಗೇಶ್ ಗೌತಮ್, “ಟ್ರಕ್ ಚಾಲಕ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆಯೇ ಅಥವಾ ತಪ್ಪು ದಿಕ್ಕಿನಲ್ಲಿ ಚಾಲನೆ ಮಾಡುತ್ತಿದ್ದನೇ ಎಂದು ನಾವು ಪರಿಶೀಲಿಸಬೇಕಾಗಿದೆ” ಎಂದಿದ್ದಾರೆ.

ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಮತ್ತು ಡಿಕ್ಕಿಯ ನಂತರ ಟ್ರಕ್‌ನಲ್ಲಿದ್ದ ಜಲ್ಲಿಕಲ್ಲು ಪ್ರಯಾಣಿಕರ ಮೇಲೆ ಬಿದ್ದಿತು. “ಅಪಘಾತವು ಬಿಜಾಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ನಾವು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದೇವೆ. ಎರಡೂ ಬದಿಗಳಲ್ಲಿ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ” ಎಂದು ಡಿಸಿಪಿ ಹೇಳಿದ್ದಾರೆ.

ಈ ಬಗ್ಗೆ ತೆಲಂಗಾಣ ಸಿಎಂಒ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅಪಘಾತದ ಸಂಪೂರ್ಣ ವಿವರಗಳನ್ನು ಕಾಲಕಾಲಕ್ಕೆ ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬಸ್ ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನು ತಕ್ಷಣ ಹೈದರಾಬಾದ್‌ಗೆ ಸ್ಥಳಾಂತರಿಸಲು ಮತ್ತು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲು ಸಿಎಸ್ ಮತ್ತು ಡಿಜಿಪಿಗೆ ಆದೇಶಿಸಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...