ರೈಲು ಅಪಘಾತದ ನಂತರ ಸಾವಿರಾರು ಟಿಕೆಟ್ ರದ್ದು; ಐಆರ್‌ಸಿಟಿಸಿ ನಿರಾಕರಣೆ

Date:

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದ ನಂತರ ಸಾವಿರಾರು ಜನರು ತಮ್ಮ ರೈಲು ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂಬ ಆರೋಪವನ್ನು ಭಾರತೀಯ ರೈಲ್ವೆಯ ಟಿಕೆಟ್ ಬುಕಿಂಗ್ ಸಂಸ್ಥೆಯಾದ ಐಆರ್‌ಸಿಟಿಸಿ ನಿರಾಕರಿಸಿದೆ.

ಅಪಘಾತದ ನಂತರ ರೈಲಿನಲ್ಲಿ ಪ್ರಯಾಣಿಸುವುದು ಸುರಕ್ಷಿತವಲ್ಲ ಎಂದು ಭಾವಿಸಿ ಅನೇಕ ಜನರು ತಮ್ಮ ರೈಲು ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಕೆಲವು ರಾಜಕೀಯ ನಾಯಕರು ಆರೋಪಿಸಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ರೈಲ್ವೆಯ ಟಿಕೆಟ್ ಬುಕಿಂಗ್ ಸಂಸ್ಥೆಯ ಏಕೈಕ ವೆಬ್‌ಸೈಟ್‌ ಆಗಿರುವ ಐಆರ್‌ಸಿಟಿಸಿ, ದೇಶದಲ್ಲಿ ರೈಲ್ವೆಯ ಟಿಕೆಟ್‌ ರದ್ದತಿ ಪ್ರಮಾಣ ಈ ಘಟನೆಯ ಬಳಿಕ ಏರಿಕೆಯಾಗಿಲ್ಲ. ಬದಲಾಗಿ ಇಳಿಕೆಯಾಗಿದೆ. ಅಲ್ಲದೆ ಎಷ್ಟು ಪ್ರಮಾಣದ ಟಿಕೆಟ್‌ ರದ್ದತಿ ಇಳಿಕೆಯಾಗಿದೆ ಎನ್ನುವ ಮಾಹಿತಿಯನ್ನೂ ಟ್ವೀಟ್‌ನಲ್ಲಿ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜದ್ರೋಹದ ಕಾನೂನನ್ನು ಬಲಪಡಿಸಬೇಕೆಂಬ ಶಿಫಾರಸು ಅನಾಹುತಕಾರಿ

ರೈಲ್ವೆ ಟಿಕೆಟ್‌ ರದ್ದತಿ ಪ್ರಮಾಣದಲ್ಲಿ ಹೆಚ್ಚಾಗಿಲ್ಲ. ಆದರೆ, ಮತ್ತಷ್ಟು ಕಡಿಮೆಯಾಗಿದೆ. 2023ರ ಜೂನ್‌ 1 ರಂದು ಸಾರ್ವಜನಿಕರು 7.7 ಲಕ್ಷ ಟಿಕೆಟ್‌ಗಳನ್ನು ರದ್ದು ಮಾಡಿದ್ದರೆ, ಅದೇ 2023ರ ಜೂನ್‌ 3 ರಂದು ಈ ಪ್ರಮಾಣ 7.5 ಲಕ್ಷಕ್ಕೆ ಇಳಿದಿದೆ ಎಂದು ಮಾಹಿತಿ ನೀಡಿದೆ.

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳು ಡಿಕ್ಕಿಯಾಗಿ ಕನಿಷ್ಠ 278 ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು – ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್ – ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು. ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಅದರ ಬಹುತೇಕ ಬೋಗಿಗಳು ಹಳಿತಪ್ಪಿದವು. ಅದೇ ಸಮಯದಲ್ಲಿ ಹಾದು ಹೋಗುತ್ತಿದ್ದ ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್‌ನ ಕೊನೆಯ ಕೆಲವು ಕೋಚ್‌ಗಳ ಮೇಲೆ ಕೋರಮಂಡಲ್‌ನ ಕೆಲವು ಬೋಗಿಗಳು ಉರುಳಿದವು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ...