ಲಿಂಗತ್ವ ಅಲ್ಪಸಂಖ್ಯಾತರು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ‘TPPR ಮಸೂದೆ’ ಕಸಿದುಕೊಳ್ಳುತ್ತದೆ: UNHR ಕಳವಳ

Date:

‘ಲಿಂಗತ್ವ ಅಲ್ಪಸಂಖ್ಯಾತರ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆ-2026’ಅನ್ನು ಮೋದಿ ಸರ್ಕಾರವು ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಅಂಗೀಕಾರದ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂಸ್ಥೆ (UNHR) ಕಳವಳ ವ್ಯಕ್ತಪಡಿಸಿದೆ. ಮಸೂದೆಯು ಲಿಂಗತ್ವ ಅಲ್ಪಸಂಖ್ಯಾತರು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ಕಸಿದುಕೊಳ್ಳಬಹುದು ಎಂದು ಹೇಳಿದೆ.

- Advertisement -

‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಯುಎನ್‌ಎಚ್‌ಆರ್, “ಸಂಬಂಧಪಟ್ಟ ಸಮುದಾಯದೊಂದಿಗೆ ಸೂಕ್ತ ಸಮಾಲೋಚನೆ ನಡೆಸದೆ ಮಸೂದೆಯನ್ನು ಇಷ್ಟು ವೇಗವಾಗಿ ಅಂಗೀಕರಿಸಿರುವುದು ವಿಷಾದನೀಯ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಮಸೂದೆಯ ತ್ವರಿತ ಅಂಗೀಕಾರಕ್ಕೆ ನಾವು ವಿಷಾಧ ವ್ಯಕ್ತಪಡಿಸುತ್ತೇವೆ. ಈ ತಿದ್ದುಪಡಿಗಳು ‘ಸ್ವಯಂ-ಗುರುತಿಸುವಿಕೆ’ಯ ಬದಲಿಗೆ ‘ಕಡ್ಡಾಯ ವೈದ್ಯಕೀಯ ಪರಿಶೀಲನಾ ಪ್ರಕ್ರಿಯೆ’ಯನ್ನು ಜಾರಿಗೆ ತರುವ ಮೂಲಕ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳನ್ನು ಹಿಂದಕ್ಕೆ ತಳ್ಳುವ ಅಪಾಯವಿದೆ” ಎಂದಿದೆ.

“ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಜನರ ಹಕ್ಕುಗಳನ್ನು ಗುರುತಿಸುವಲ್ಲಿ ಭಾರತವು ಮುಂಚೂಣಿಯಲ್ಲಿತ್ತು. ಆದರೆ, ಈ ಮಸೂದೆಯು ಅವರ ಖಾಸಗಿತನದ ಹಕ್ಕಿನ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ. ಅವರನ್ನು ಸಮಾಜದ ಮುಖ್ಯವಾಹಿನಿಯಿಂದ ಹೊರದೂಡುವ ಅಪಾಯವಿದೆ” ಎಂದು ಆತಂಕ ವ್ಯಕ್ತಪಡಿಸಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾರ್ಚ್ 30ರಂದು ಅಂಕಿತ ಹಾಕಿದ್ದಾರೆ. ವಿರೋಧ ಪಕ್ಷದ ಸಂಸದರು ಈ ಮಸೂದೆಯು ಲಿಂಗತ್ವ ಅಲ್ಪಸಂಖ್ಯಾತರ ಲೈಂಗಿಕ ಅಸ್ಮಿತೆಯ ಸ್ವಯಂ ನಿರ್ಧಾರದ ಹಕ್ಕನ್ನು ಕಸಿದುಕೊಳ್ಳುತ್ತದೆ. ಇದನ್ನು ಹೆಚ್ಚಿನ ಸಮಾಲೋಚನೆಗಾಗಿ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಒತ್ತಾಯಿಸಿದ್ದರು. ಈ ಮಸೂದೆಯ ವ್ಯಾಪ್ತಿಯಿಂದ ‘ಗೇ’ ಮತ್ತು ‘ಲೆಸ್ಬಿಯನ್’ ಸಮುದಾಯದವರನ್ನು ಹೊರಗಿಟ್ಟಿರುವುದನ್ನು ತೀವ್ರವಾಗಿ ಖಂಡಿಸಿದ್ದರು.

ಈ ಮಸೂದೆಯು ‘ಟ್ರಾನ್ಸ್‌ಜೆಂಡರ್’ ಎಂಬ ಪದಕ್ಕೆ ನಿಖರವಾದ ವ್ಯಾಖ್ಯಾನ ನೀಡಲು ಪ್ರಯತ್ನಿಸಿದೆ ಎಂದು ಸರ್ಕಾರ ಹೇಳಿಕೊಂಡಿದೆ. “ಟ್ರಾನ್ಸ್‌ಜೆಂಡರ್ ವ್ಯಕ್ತಿ ಎನ್ನುವವರಲ್ಲಿ ವಿಭಿನ್ನ ಲೈಂಗಿಕ ಒಲವು ಮತ್ತು ಸ್ವಯಂ-ಗ್ರಹಿಸಿದ ಲೈಂಗಿಕ ಅಸ್ಮಿತೆ ಹೊಂದಿರುವ ವ್ಯಕ್ತಿಗಳು ಸೇರ್ಪಡೆಯಾಗುವುದಿಲ್ಲ” ಎಂದು ಮಸೂದೆಯಲ್ಲಿ ಹೇಳಲಾಗಿದೆ.

“ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಲಿಂಗತ್ವ ಅಲ್ಪಸಂಖ್ಯಾತರು ಎಂದು ಗುರುತಿಸಲ್ಪಟ್ಟಿರುವ, ತೀವ್ರ ಸಾಮಾಜಿಕ ತಾರತಮ್ಯ ಎದುರಿಸುತ್ತಿರುವ ನಿರ್ದಿಷ್ಟ ವರ್ಗದ ಜನರನ್ನು ರಕ್ಷಿಸುವುದು ಈ ಕಾಯಿದೆಯ ಉದ್ದೇಶವಾಗಿದೆ. ವಿವಿಧ ಲಿಂಗತ್ವ ಅಸ್ಮಿತೆಗಳನ್ನು ಹೊಂದಿರುವ ಪ್ರತಿಯೊಂದು ವರ್ಗದ ಜನರನ್ನು ರಕ್ಷಿಸುವುದು ಇದರ ಉದ್ದೇಶವಲ್ಲ” ಎಂದು ಸರ್ಕಾರ ವಾದಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...