ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಲಿಂಗತ್ವ ಅಲ್ಪಸಂಖ್ಯಾತ ಹಿಮಾಂಗಿ ಸ್ಪರ್ಧೆ

Date:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಸ್ಪರ್ಧಿಸುತ್ತಿದ್ದಾರೆ. ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರು ಅಖಿಲ ಭಾರತ ಹಿಂದೂ ಮಹಾಸಭಾ(ಎಬಿಎಚ್‌ಎಂ) ಪಕ್ಷದಿಂದ ಕಣಕ್ಕಿಳಿಯುತ್ತಿದ್ದಾರೆ.

- Advertisement -

ಬಲಪಂಥೀಯ ಪಕ್ಷವಾದ ಎಬಿಎಚ್‌ಎಂ ಉತ್ತರ ಪ್ರದೇಶದಲ್ಲಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರ ಹೆಸರನ್ನು ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕೃಷ್ಣನ ಪರಮ ಭಕ್ತರಾಗಿರುವ ಕಿನ್ನರ್ ಮಹಾಮಂಡಲೇಶ್ವರ್ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಧನಿ ಎತ್ತಲು ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಪ್ರಧಾನಿ ಮೋದಿಯವರು ಮಹಿಳೆಯರಿಗೆ ಮಾತ್ರವಲ್ಲ ಲಿಂಗತ್ವ ಅಲ್ಪಸಂಖ್ಯಾತರಿಗೂ ಉದ್ಯೋಗ ಹಾಗೂ ಚುನಾವಣೆಗಳಲ್ಲಿ ಸ್ಪರ್ಧಿಸಲು ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಮೀಸಲಾತಿ ನೀಡಬೇಕು ಎಂದು ಎಂದು ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಚುನಾವಣಾ ಆಯೋಗದ ವರದಿಗಳ ಪ್ರಕಾರ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ 48,044 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿಸಿದ್ದಾರೆ. 2019ರ ಚುನಾವಣೆಯಲ್ಲಿ ಅವರ ಸಂಖ್ಯೆ 39,683 ಸಂಖ್ಯೆ ಇತ್ತು.

ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರು ಭಗವತ್ ಕಥಾ ವಾಚಿಸುವ ವಿಶ್ವದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿದ್ದಾರೆ. ಇವರು ವಿಶ್ವದಾದ್ಯಂತ ಹಲವು ದೇಶಗಳಲ್ಲಿ ಭಗವತ್‌ ಕಥಾ, ರಾಮ್‌ ಕಥಾ, ದೇವಿ ಭಗವತ್‌ ಕಥಾ ಸೇರಿದಂತೆ ಹಲವು ವಾಚನಗಳನ್ನು ಮಂಡಿಸಿದ್ದಾರೆ. ಮೂಲತಃ ಮುಂಬೈನವರಾದ ಇವರು ಸಣ್ಣ ವಯಸ್ಸಿನಿಂದಲೇ ತಮ್ಮ ಮನೆಯ ಬಳಿಯಿರುವ ಇಸ್ಕಾನ್‌ ದೇಗುಲದಲ್ಲಿ ಪ್ರಾರ್ಥನೆ ಶುರು ಮಾಡಿದರು. ನಂತರದಲ್ಲಿ ಕೃಷ್ಣನ ಪರಮ ಭಕ್ತರಾದರು.

ವಾರಣಾಸಿಯಲ್ಲಿ ಜೂನ್‌ 1ರಂದು ಚುನಾವಣೆ ನಡೆಯಲಿದ್ದು, 19.62 ಲಕ್ಷ ಮತದಾರರಲ್ಲಿ 135 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಮೋದಿ ವಿರುದ್ಧವಾಗಿ ಕಾಂಗ್ರೆಸ್‌ನಿಂದ ಅಜಯ್‌ ರಾಯ್ ಸ್ಪರ್ಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...