ವಿದೇಶಕ್ಕೆ ಪ್ರಯಾಣಿಸುವುದು ಸಾಂವಿಧಾನಿಕ ಹಕ್ಕು: ದೆಹಲಿ ಕೋರ್ಟ್

Date:

ಕ್ವಾಲಿಟಿ ಲಿಮಿಟೆಡ್‌ನ ಮಾಜಿ ಪ್ರವರ್ತಕ ಸಿದ್ಧಾಂತ್ ಗುಪ್ತಾ ವಿರುದ್ಧದ ಲುಕ್ ಔಟ್ ನೋಟಿಸ್ ಅನ್ನು ಅಮಾನತುಗೊಳಿಸುವಂತೆ ದೆಹಲಿ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶನ ನೀಡಿದೆ. ಹಾಗೆಯೇ ವಿದೇಶ ಪ್ರವಾಸ ಮಾಡುವುದು ಸಾಂವಿಧಾನಿಕ ಹಕ್ಕು ಎಂದು ಹೇಳಿದ್ದಾರೆ.

- Advertisement -

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಅಂಜು ಬಜಾಜ್ ಚಂದನಾ ಅವರು ಜನವರಿ 25ರಿಂದ ಫೆಬ್ರವರಿ 8ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಎಲ್‌ಒಸಿಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಅಂಗೀಕರಿಸಿದರು. ಸಿದ್ಧಾಂತ್ ಗುಪ್ತಾ, ತನ್ನ ಮಗಳನ್ನು ಸಿಂಗಾಪುರಕ್ಕೆ ಅಧ್ಯಯನಕ್ಕಾಗಿ ಕರೆದೊಯ್ದು ಅಲ್ಲಿ ಬೇಕಾದ ವ್ಯವಸ್ಥೆ ಮಾಡಿ ಹಿಂದಿರುಗಲು ವಿದೇಶಕ್ಕೆ ಪ್ರವಾಸ ಮಾಡಲು ಅವಕಾಶ ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದನ್ನು ಓದಿದ್ದೀರಾ? ಎಎಪಿಯ ಸತ್ಯೇಂದ್ರ ಜೈನ್‌ಗೆ ದೆಹಲಿ ಕೋರ್ಟ್ ಜಾಮೀನು

ಸಿದ್ಧಾಂತ್ ಗುಪ್ತಾ ಅರ್ಜಿ ಅಂಗೀಕರಿಸಿದ ನ್ಯಾಯಾಧೀಶರು, “ಸ್ವತಂತ್ರ ಚಲನೆಯ ಹಕ್ಕಿನಲ್ಲಿ ವಿದೇಶ ಪ್ರವಾಸವೂ ಕೂಡಾ ಸೇರಿದೆ. ಅದು ಅರ್ಜಿದಾರರ ಸಾಂವಿಧಾನಿಕ ಹಕ್ಕು. ಅರ್ಜಿದಾರರು ಸೀಮಿತ ಅವಧಿಗೆ ಮತ್ತು ನಿರ್ದಿಷ್ಟ ಉದ್ದೇಶಕ್ಕಾಗಿ ವಿದೇಶ ಪ್ರವಾಸ ಮಾಡಲು ಅನುಮತಿ ಕೋರಿದ್ದಾರೆ. ನನ್ನ ಪ್ರಕಾರ ಸೀಮಿತ ಅವಧಿಗೆ ಎಲ್‌ಒಸಿಯನ್ನು ಅಮಾನತುಗೊಳಿಸಿ ಅರ್ಜಿದಾರರಿಗೆ ವಿದೇಶಕ್ಕೆ ಭೇಟಿ ನೀಡಲು ಅವಕಾಶ ನೀಡಿದರೆ ಇಡಿಗೆ ಯಾವುದೇ ಹಾನಿಯಾಗುವುದಿಲ್ಲ” ಎಂದು ನ್ಯಾಯಾಧೀಶರು ಶುಕ್ರವಾರ ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.

ಗುಪ್ತಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ನ್ಯಾಯಾಲಯದಲ್ಲಿ ಬಾಕಿ ಇದ್ದು, ಜನವರಿ 30ರಂದು ವಿಚಾರಣೆಗೆ ನಿಗದಿಪಡಿಸಲಾಗಿದೆ ಎಂದು ನ್ಯಾಯಾಧೀಶರು ಈ ಸಂದರ್ಭದಲ್ಲೇ ತಿಳಿಸಿದ್ದಾರೆ. ಇನ್ನು ಬಿಸಿಐ ಸಲ್ಲಿಸಿದ ಸಂಬಂಧಿತ ಪ್ರಕರಣದಲ್ಲಿ, ಇಡಿ ಪ್ರಸ್ತುತ ತನಿಖೆಯನ್ನು ಪ್ರಾರಂಭಿಸಿದ್ದು, ಆರೋಪಿಗೆ ವಿದೇಶಕ್ಕೆ ಭೇಟಿ ನೀಡಲು ಈ ಹಿಂದೆ ಅನುಮತಿ ನೀಡಲಾಗಿತ್ತು.

ಇದನ್ನು ಓದಿದ್ದೀರಾ? ಮಾನನಷ್ಟ ಪ್ರಕರಣದಲ್ಲಿ ಯೂಟ್ಯೂಬರ್ ಧ್ರುವ್‌ ರಾಠಿಗೆ ದೆಹಲಿ ಕೋರ್ಟ್ ಸಮನ್ಸ್

ಗುಪ್ತಾ ವಿದೇಶ ಪ್ರವಾಸ ಮಾಡಲು ಅನುಮತಿ ನೀಡಿದರೆ ಭಾರತಕ್ಕೆ ಹಿಂತಿರುಗದಿರುವ ಸಾಧ್ಯತೆ ಇದೆ ಎಂದು ಇಡಿ ವಾದವಾಗಿದೆ. ಗುಪ್ತಾ ಮತ್ತು ಕಂಪನಿಯ ಸಹ-ಪ್ರವರ್ತಕ ಸಂಜಯ್ ಧಿಂಗ್ರಾ ಅವರು ಕ್ವಾಲಿಟಿ ಲಿಮಿಟೆಡ್‌ನ ವಹಿವಾಟು ಹೆಚ್ಚಿಸುವ ಸಲುವಾಗಿ ಹಲವಾರು ನಕಲಿ ಕಂಪನಿಗಳು ಮತ್ತು ಘಟಕಗಳನ್ನು ರಚಿಸಿದ್ದಾರೆ ಎಂಬುದು ಇಡಿ ಆರೋಪವಾಗಿದೆ.

ಈ ಅಪರಾಧದ ಆದಾಯವನ್ನು ಅಂದರೆ ಕ್ವಾಲಿಟಿ ಲಿಮಿಟೆಡ್ ಬ್ಯಾಂಕುಗಳ ಒಕ್ಕೂಟದಿಂದ ಪಡೆದ ಸಾಲದ ಹಣವನ್ನು ತಮ್ಮ ಹೆಸರಿನಲ್ಲಿ ಮತ್ತು ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ಇರಿಸಿದ್ದಾರೆ ಎಂಬ ಆರೋಪವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...