ಕೇಜ್ರಿವಾಲ್‌ಗಿಲ್ಲ ಜಾಮೀನು: ‘ವಿಚಾರಣಾ ನ್ಯಾಯಾಲಯ ಗಮನಕೊಟ್ಟಿಲ್ಲ’ ಎಂದ ದೆಹಲಿ ಹೈಕೋರ್ಟ್‌

Date:

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯ ಸರಿಯಾಗಿ ಗಮನಕೊಟ್ಟಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

- Advertisement -

ಹಾಗೆಯೇ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಅಂಗೀಕರಿಸಿದೆ. ಈ ಹಿಂದೆ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯೊಡ್ಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಅರ್ಜಿಯನ್ನು ಅಂಗೀಕರಿಸಲಾಗಿದೆ ಮತ್ತು ವಿಚಾರಣಾ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲಾಗಿದೆ” ಎಂದು ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ರಜಾಕಾಲದ ಪೀಠ ಹೇಳಿದೆ. ಹಾಗೆಯೇ ಇಡಿ ಪ್ರಸ್ತುತಪಡಿಸಿದ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬ ವಿಚಾರಣಾ ನ್ಯಾಯಾಲಯದ ಅಭಿಪ್ರಾಯವನ್ನು ಹೈಕೋರ್ಟ್ ಟೀಕಿಸಿದೆ. “ಈ ತಾರ್ಕಿಕತೆಯನ್ನು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ” ಎಂದು ಹೇಳಿದೆ.

“ವಿಚಾರಣಾ ನ್ಯಾಯಾಲಯದ ಅವಲೋಕನವು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ. ವಿಚಾರಣಾ ನ್ಯಾಯಾಲಯವು ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಗಮನಕೊಟ್ಟಿಲ್ಲ” ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.

ಇದನ್ನು ಓದಿದ್ದೀರಾ? ಕೇಜ್ರಿವಾಲ್ ಜಾಮೀನಿಗೆ ದೆಹಲಿ ಹೈಕೋರ್ಟ್‌ನ ತಡೆಯಾಜ್ಞೆಯನ್ನು ‘ಅಸಹಜʼ ಎಂದ ಸುಪ್ರೀಂ

“ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 45ರ ಅವಳಿ ಷರತ್ತುಗಳನ್ನು ರಜೆಯ ನ್ಯಾಯಾಧೀಶರು ಸಾಕಷ್ಟು ಚರ್ಚಿಸಿಲ್ಲ. ಆದರೆ ಈ ನ್ಯಾಯಾಲಯದ ಸಮನ್ವಯ ಪೀಠವು ಇಡಿ ಕಡೆಯಿಂದ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ. ವಿಚಾರಣಾ ನ್ಯಾಯಾಲಯವು ವ್ಯತಿರಿಕ್ತವಾದ ತೀರ್ಮಾನವನ್ನು ಮಾಡಬಾರದು” ಎಂದು ನ್ಯಾಯಮೂರ್ತಿ ಜೈನ್ ಹೇಳಿದರು.

ಇನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಜಾಮೀನಿನ ಮೇಲೆ ದೆಹಲಿ ಹೈಕೋರ್ಟ್‌ ವಿಧಿಸಿದ ಮಧ್ಯಂತರ ತಡೆಯಾಜ್ಞೆಯ ವಿರುದ್ಧ ಸಲ್ಲಿಸಿದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಸೋಮವಾರ ಇದು ‘ಅಸಹಜ’ ಎಂದು ಹೇಳಿದೆ.

ಇದನ್ನು ಓದಿದ್ದೀರಾ?  ಹೈಕೋರ್ಟ್‌ನಿಂದ ಜಾಮೀನಿಗೆ ತಡೆ: ಸುಪ್ರೀಂ ಮೊರೆ ಹೋದ ಕೇಜ್ರಿವಾಲ್

ಜಾರಿ ನಿರ್ದೇಶನಾಲಯದ ಅರ್ಜಿಯ ತೀರ್ಪು ಪ್ರಕಟಿಸುವವರೆಗೆ ಅರವಿಂದ್ ಕೇಜ್ರಿವಾಲ್ ಅವರ ಬಿಡುಗಡೆಗೆ ಹೈಕೋರ್ಟ್ ತಡೆ ನೀಡಿದ ನಂತರ ಅರವಿಂದ್ ಕೇಜ್ರಿವಾಲ್ ಭಾನುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಆದರೆ ಈ ಹಂತದಲ್ಲಿ ಯಾವುದೇ ಆದೇಶವನ್ನು ಪ್ರಕಟಿಸುವುದು ಸಮಸ್ಯೆಗೆ ಪೂರ್ವಾಗ್ರಹ ಪಡಿಸಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಿಗೆ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...