ವರದಕ್ಷಿಣೆ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯಗಳು ಪದೇ ಪದೇ ತಪ್ಪು ಮಾಡುತ್ತಿವೆ: ಸುಪ್ರೀಂ ಕೋರ್ಟ್ ಅಸಮಾಧಾನ

Date:

ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಸೂಕ್ತ ಆಧಾರವಿಲ್ಲದೆಯೂ ಆರೋಪಿಗಳನ್ನು ಅಪರಾಧಿಗಳೆಂದು ವಿಚಾರಣಾ ನ್ಯಾಯಾಲಯಗಳು ಘೋಷಿಸುತ್ತಿವೆ. ಆ ಮೂಲಕ ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಆಕೆಯ ಪತಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಆರೋಪಿಸಲಾಗಿತ್ತು. ಆ ಪ್ರಕರಣದಲ್ಲಿ ಆರೋಪಿ ಪತಿಯನ್ನು ನಿರ್ದೋಷಿ ಎಂದು ಸುಪ್ರೀಂ ಕೋರ್ಟ್‌ ಘೊಷಿಸಿದೆ. ಈ ವೇಳೆ,ವಿಚಾರಣಾ ನ್ಯಾಯಾಲಯಗಳು ಪದೇ-ಪದೇ ತಪ್ಪು ಮಾಅಡುತ್ತಿವೆ. ನ್ಯಾಯಾಂಗ ಅಕಾಡೆಮಿಗಳು ಮಧ್ಯ ಪ್ರವೇಶಿಸುವ ಅನಿವಾರ್ಯತೆ ಇದೆ ಎಂದು ಕೋರ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

1998ರಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಮಹಿಳೆಗೆ ಆಕೆಯ ಪತಿ ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ಅವರ ಕಿರುಕುಳದಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯವು ಯಾವುದೇ ಸಾಕ್ಷ್ಯಗಳು ಇಲ್ಲದೆಯೂ ಆರೋಪಿಗಳನ್ನು ದೋಷಿಗಳನ್ನು ಘೋಷಿಸಿ, ಮಹಿಳೆಯ ಪತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಆರೋಪಿ ಪತಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು ಆರೋಪಿಯನ್ನು ನಿರ್ದೋಷಿಯೆಂದು ತೀರ್ಪು ನೀಡಿದೆ. ಪ್ರಕರಣವನ್ನು ಖುಲಾಸೆಗೊಳಿಸಿದೆ.

ಆರೋಪಿ ಪತಿಯ ವಿರುದ್ಧದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ. ಮಹಿಳೆಯ ಮೇಲೆ ದೌರ್ಜನ್ಯಗಳು ನಡೆದಿವೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಒಂದೇ ಒಂದು ಆರೋಪವನ್ನೂ ಪ್ರಾಸಿಕ್ಯೂಷನ್ ಸಾಬೀತು ಮಾಡಿಲ್ಲ. ಆದಾಗ್ಯೂ, ವಿಚಾರಣಾ ನ್ಯಾಯಾಲಯಗಳು ಶಿಕ್ಷೆ ವಿಧಿಸುತ್ತಿವೆ. ಪದೇ-ಪದೇ ತಪ್ಪು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

“ಯಾವುದೇ ಸಾವನ್ನು ವರದಕ್ಷಿಣೆಯ ಸಾವು ಎಂದು ಪರಿಗಣಿಸಬೇಕೆಂದರೆ, ಐಪಿಸಿ ಸೆಕ್ಷನ್ 304(ಬಿ) ಅಡಿಯಲ್ಲಿ ಆರೋಪಗಳನ್ನು ಸಾಬೀತು ಮಾಡಬೇಕು. ಆಗ ಮಾತ್ರವೇ, ಸಂತ್ರಸ್ತ ಮಹಿಳೆಯ ಪತಿ ಅಥವಾ ಆತನ ಸಂಬಂಧಿಕರು ಅಪರಾಧಿಗಳು ಎಂದು ಪರಿಗಣಿಸಬಹುದು. ಪ್ರಸ್ತುತ ಪ್ರಕರಣದಲ್ಲಿ, ಮಹಿಳೆಯ ಸಾವಿಗೂ ಮುನ್ನ, ಆರೋಪಿಯು ವರದಕ್ಷಿಣೆಗಾಗಿ ಆಕೆಯ ಮೇಲೆ ಕ್ರೌರ್ಯ ಎಸಗಿದ್ದಾರೆ. ಕಿರುಕುಳ ನೀಡಿದ್ದಾರೆ ಎಂಬುದನ್ನು ಸಾಕ್ಷ್ಯಾಧಾರ ಕಾಯ್ದೆಯ ಸೆಕ್ಷನ್ 113 (ಬಿ) ಅಡಿ ಸಾಬೀತು ಪಡಿಸಬೇಕಾಗುತ್ತದೆ. ಆದರೆ, ಆರೋಪಗಳನ್ನು ಸಾಬೀತು ಮಾಡಲಾಗಿಲ್ಲ. ಊಹೆಯ ಮೇಲೆ ತೀರ್ಪು ನೀಡಬಾರದು” ಎಂದು ಕೋರ್ಟ್‌ ಗಮನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...